ಕಮಲ ಮುಡಿಯುವತ್ತ ಭಾಸ್ಕರರಾವ್ !

ಯುವ ಭಾರತ ಸುದ್ದಿ ಬೆಂಗಳೂರು :
ಬೆಳಗಾವಿಯ ಮೊದಲ ಪೊಲೀಸ್ ಕಮಿಷನರ್ ಹಾಗೂ ಉತ್ತರ ವಲಯ ಐಜಿಪಿ ಆಗಿದ್ದ ಬಿ.ಭಾಸ್ಕರ್ ರಾವ್ ಮಾರ್ಚ್ 1 ರಂದು ಬಿಜೆಪಿ ಸೇರ್ಪಡೆಗೊಳ್ಳಲಿದ್ದಾರೆ.
ಕೆಲ ತಿಂಗಳುಗಳ ಹಿಂದೆ ಅವರು ಐಪಿಎಸ್ ಗೆ ರಾಜೀನಾಮೆ ನೀಡಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷ ಸೇರಿದ್ದರು. ಇದೀಗ ಚುನಾವಣೆಗೆ ಕೆಲವೇ ತಿಂಗಳುಗಳು ಉಳಿದಿರುವಂತೆ ಬಿಜೆಪಿ ಸೇರ್ಪಡೆಯಾಗುತ್ತಿರುವುದು ಕರ್ನಾಟಕ ರಾಜಕೀಯದಲ್ಲಿ ಭಾರೀ ಸಂಚಲನಕ್ಕೆ ಕಾರಣವಾಗಿದೆ. ಭಾಸ್ಕರ ರಾವ್ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿ ಉಸ್ತುವಾರಿ ಮತ್ತು ಐಪಿಎಸ್‌ಗೆ ರಾಜೀನಾಮೆ ನೀಡಿದ್ದ ಅಣ್ಣಾಮಲೈ ಸೇರಿದಂತೆ ಹಲವು ರಾಜಕೀಯ ನಾಯಕರ ಜೊತೆ ಮಾತುಕತೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ತಾನು ಬಿಜೆಪಿ ಸೇರ್ಪಡೆಯಾಗುತ್ತಿರುವುದು ನಿಜ ಎಂದು ತಿಳಿಸಿದ್ದಾರೆ. ಐಪಿಎಸ್ ಅಧಿಕಾರಿಯಾಗಿ ಸೇವೆಗೆ ರಾಜೀನಾಮೆ ಸಲ್ಲಿಸಿದ್ದ ಅವರು ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಗೊಂಡು ಬೆಂಗಳೂರು ಬಸವನಗುಡಿ ಮತಕ್ಷೇತ್ರದಿಂದ ವಿಧಾನಸಭೆಗೆ ಸ್ಪರ್ಧೆ ನಡೆಸುವ ಇಚ್ಛೆ ವ್ಯಕ್ತಪಡಿಸಿದ್ದರು. ಆದರೆ ಇದೀಗ ನಾಟಕೀಯ ಬೆಳವಣಿಗೆಯಲ್ಲಿ ಅವರು ರಾಷ್ಟ್ರೀಯ ಪಕ್ಷ ಸೇರ್ಪಡೆಯಾಗುತ್ತಿರುವುದು ಕರ್ನಾಟಕ ರಾಜಕೀಯದಲ್ಲಿ ಚರ್ಚೆ ಗ್ರಾಸವಾಗಿದೆ.
YuvaBharataha Latest Kannada News