Breaking News

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಗೆ ಹುಟ್ಟುಹಬ್ಬ

Spread the love

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಗೆ ಹುಟ್ಟುಹಬ್ಬ

ಯುವ ಭಾರತ ಸುದ್ದಿ ಮುಂಬೈ :
ಕ್ರಿಕೆಟ್ ದೇವರು ಎಂದೇ ಜನಮಾನಸದಲ್ಲಿ ಗುರುತಿಸಲ್ಪಡುವ ಸಚಿನ್ ತೆಂಡೂಲ್ಕರ್ ಅವರಿಗೆ ಇಂದು ಜನ್ಮದಿನ.

1973 ರಲ್ಲಿ ಅವರು ಇದೇ ದಿನ ಮುಂಬೈಯಲ್ಲಿ ಜನಿಸಿದ್ದರು. ಏಕದಿನ ಮತ್ತು ಟೆಸ್ಟ್ ಕ್ರಿಕೆಟ್ ನಲ್ಲಿ 18000 ಮತ್ತು 15,000 ಗಳಿಸಿ ಸಾಧನೆ ಮಾಡಿದ್ದಾರೆ. 2012ರಿಂದ 2018ರವರೆಗೆ ರಾಜ್ಯಸಭಾ ಸದಸ್ಯರಾಗಿದ್ದ ಸಚಿನ್ ತೆಂಡೂಲ್ಕರ್ ಅವರಿಗೆ ಭಾರತ ರತ್ನ ಸಿಕ್ಕಿದೆ. 16 ವರ್ಷದವರಿದ್ದಾಗ 1989ರ ನವೆಂಬರ್ 15 ರಂದು ಪಾಕಿಸ್ತಾನದ ವಿರುದ್ಧ ಕರಾಚಿಯಲ್ಲಿ ಟೆಸ್ಟ್ ಪಂದ್ಯಾವಳಿಗೆ ಪಾದಾರ್ಪಣೆ ಮಾಡಿದ್ದರು.

ತಮ್ಮ 50ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ಅವರು ಕುಟುಂಬದೊಂದಿಗೆ ಗೋವಾಕ್ಕೆ ತೆರಳಿದ್ದಾರೆ. ಸೋಮವಾರ ಅಲ್ಲಿಯೇ ಹುಟ್ಟುಹಬ್ಬ ಆಚರಿಸಿಕೊಳ್ಳಲಿದ್ದಾರೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

fifteen − 4 =