ಕೋವಿಡ್ ಲಸಿಕೆಯ ಬಗ್ಗೆ ಸಂಶಯ ಬೇಡ-ಶಾಸಕ ರಮೇಶ ಜಾರಕಿಹೊಳಿ!!
Yuva Bharatha
September 17, 2021
Uncategorized
781 Views
ಕೋವಿಡ್ ಲಸಿಕೆಯ ಬಗ್ಗೆ ಸಂಶಯ ಬೇಡ-ಶಾಸಕ ರಮೇಶ ಜಾರಕಿಹೊಳಿ!!
ಗೋಕಾಕ: ಶಾಸಕ ರಮೇಶ ಜಾರಕಿಹೊಳಿ ಅವರು ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ಅವಿರಿಗೆ ಕೋವಿಡ್ ಲಸಿಕೆ ನೀಡುವ ಮೂಲಕ ಚಾಲನೆ ನೀಡಿದರು.
ಯುವ ಭಾರತ ಸುದ್ದಿ ಗೋಕಾಕ: ಕೋವಿಡ್ ಲಸಿಕೆಯ ಬಗ್ಗೆ ಸಂಶಯ ಬೇಡ. ಕೋವಿಶೀಲ್ಡ್ ಮತ್ತು ಕೊವ್ಯಾಕ್ಸಿನ್ ಲಸಿಕೆಗಳು ಸಂಪೂರ್ಣ ಸುರಕ್ಷಿತವಾಗಿವೆ. ವದಂತಿಗಳಿಗೆ ಕಿವಿಗೊಡದೆ ಲಸಿಕೆ ಪಡೆಯುವಂತೆ ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಹೇಳಿದರು.
ಅವರು, ನಗರದ ಮಯೂರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬಿಜೆಪಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ೭೧ನೇ ಜನ್ಮದಿನದ ಪ್ರಯುಕ್ತ ಹಮ್ಮಿಕೊಂಡ ಕೋವಿಡ್ ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೋವಿಡ್ ಲಸಿಕೆ ಪಡೆಯುವದರಿಂದ ರೋಗದ ನಿಯಂತ್ರಿಸಲು ಹಾಗೂ ಸಾವು ನೋವುಗಳಿಂದ ಪ್ರಮಾಣ ಕಡಿಮೆಯಾಗಲು ಲಸಿಕೆ ಸಹಕಾರಿಯಾಗಿದೆ. ಕೋವಿಡ್ ಮಹಾಮಾರಿಯಿಂದ ನಮ್ಮ ಸುತ್ತಮುತ್ತಲಿನ ಅನೇಕ ಪ್ರೀತಿಪಾತ್ರರನ್ನು ಕಳೆದು ಕೊಂಡಿದ್ದೆವೆ. ಇನ್ನು ಮೂರನೇ ಅಲೆಗೆ ಅವಕಾಶ ನೀಡದೆ ಎಲ್ಲರೂ ಲಸಿಕೆ ಪಡೆದು ಕೋವಿಡ್ ಸೋಂಕಿನಿAದ ಮುಕ್ತರಾಗಿ ಆರೋಗ್ಯವಂತ ಸಮಾಜವನ್ನು ನಿರ್ಮಿಸಬೇಕಿದೆ ಎಂದರು.
ಇದೇ ಸಂದರ್ಭದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅವರು ಬಿಜೆಪಿ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ಅವಿರಿಗೆ ಕೋವಿಡ್ ಲಸಿಕೆ ನೀಡುವ ಮೂಲಕ ಚಾಲನೆ ನೀಡಿದರು.
ಅಭಿಮಾನದಲ್ಲಿ ಬಿಜೆಪಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಶಾಸಕರ ಸಹಾಯಕ ಸುರೇಶ ಸನದಿ, ನಗರಸಭೆ ಉಪಾಧ್ಯಕ್ಷ ಬಸವರಾಜ ಆರೇನ್ನವರ, ಸ್ಥಾಯಿ ಸಮೀತಿ ಚೇರಮನ್ ಕುತ್ಬುದ್ದಿನ ಗೋಕಾಕ, ಮುಖಂಡರಾದ ದುರ್ಗಪ್ಪ ಶಾಸ್ತಿçಗೊಲ್ಲರ, ವಿಶ್ವನಾಥ ಬಿಳ್ಳೂರ, ಯಲ್ಲಪ್ಪ ಹಳ್ಳೂರ ಸೇರಿದಂತೆ ನಗರಸಭೆ ಸದಸ್ಯರು, ಬಿಜೆಪಿ ಕಾರ್ಯಕರ್ತರು ಇತರರು ಇದ್ದರು.