ಬಿಜೆಪಿ ಚಾಣಕ್ಯ ಅಮಿತ್ ಷಾ ಕರ್ನಾಟಕಕ್ಕೆ

ಯುವ ಭಾರತ ಸುದ್ದಿ ಬೆಂಗಳೂರು :
ಬಿಜೆಪಿಯ ಚಾಣಕ್ಯ ಹೆಸರುವಾಸಿಯಾಗಿರುವ ಕೇಂದ್ರ ಗ್ರಹ ಸಚಿವ ಅಮಿತ್ ಷಾ ಅವರು ನಾಳೆಯಿಂದ ಮೂರು ದಿನ ಕರ್ನಾಟಕ ಪ್ರವಾಸ ಕೈಗೊಂಡಿದ್ದಾರೆ. ವಿಧಾನಸಭಾ ಚುನಾವಣೆ ಕುರಿತು ರಣತಂತ್ರ ಹೆಣೆಯಲು ಅಮಿತ್ ಶಾ ಅವರು ಕಾರ್ಯಕ್ರಮಗಳ ಜೊತೆ ಜೊತೆಗೆ ಸಭೆ ನಡೆಸಲಿದ್ದಾರೆ. ರಾಜ್ಯ ಮುಖಂಡರ ಜೊತೆ ಪ್ರತ್ಯೇಕ ಸಭೆ ನಡೆಸಲಿದ್ದಾರೆ. ಜೊತೆಗೆ ಚುನಾವಣೆಗೆ ಕೈಗೊಳ್ಳಬೇಕಾದ ಕಾರ್ಯಯೋಜನ ಕುರಿತು ಅವರು ಅಗತ್ಯ ಸಲಹೆ ಸೂಚನೆ ನೀಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಕರ್ನಾಟಕ ಭೇಟಿ ಅತ್ಯಂತ ಮಹತ್ವದಾಗಿದೆ.
YuvaBharataha Latest Kannada News