ಎರಡನೇ ದಿನವೂ ಬೆಳಗಾವಿಯಲ್ಲಿ ಬಿಜೆಪಿ ಚಾಣಕ್ಯನ ಭರ್ಜರಿ ರೋಡ್ ಶೋ !

ಯುವ ಭಾರತ ಸುದ್ದಿ ಬೆಳಗಾವಿ :
ಕೇಂದ್ರ ಗ್ರಹ ಸಚಿವ ಅಮಿತ್ ಶಾ ಭಾನುವಾರ ಬೆಳಗಾವಿಯಲ್ಲಿ ಭರ್ಜರಿ ರೋಡ್ ಶೋ ನಡೆಸಿದರು.
ಬೆಳಗಾವಿ ದಕ್ಷಿಣ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಅಭಯ ಪಾಟೀಲ ಪರವಾಗಿ ದಕ್ಷಿಣ ಮತಕ್ಷೇತ್ರದ ವಿವಿಧ ಬೀದಿಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿದರು. ಸಾವಿರಾರು ಸಂಖ್ಯೆಯಲ್ಲಿ ಬಿಜೆಪಿ ಕಾರ್ಯಕರ್ತರು ಭಾಗವಹಿಸಿ ಗಮನ ಸೆಳೆದರು.
ಶನಿವಾರ ಬೆಳಗಾವಿ ಜಿಲ್ಲೆಯ ಸವದತ್ತಿ, ರಾಯಬಾಗ, ಅಥಣಿ, ಚಿಕ್ಕೋಡಿ, ಬೆಳಗಾವಿ ಉತ್ತರ ಮತಕ್ಷೇತ್ರಗಳಲ್ಲಿ ಭರ್ಜರಿ ರೋಡ್ ಶೋ ನಡೆಸಿದ್ದರು.
YuvaBharataha Latest Kannada News