ಗೋಕಾಕ: ಅಯೋಧ್ಯೆಯ ರಾಮಜನ್ಮ ಭೂಮಿಯಲ್ಲಿ ಶ್ರೀರಾಮ ಮಂದಿರ ಭೂಮಿ ಪೂಜೆ ಕಾರ್ಯಕ್ರಮದ ಅಂಗವಾಗಿ ನಗರದ ಶ್ರೀರಾಮ ಮಂದಿರದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಸಚಿವ ರಮೇಶ ಜಾರಕಿಹೊಳಿ ಅವರಿಂದ ನಗರದ ಪ್ರಮುಖ ವೃತ್ತಗಳಲ್ಲಿ ಸಾರ್ವಜನಿಕರಿಗೆ ಬದಾಮಿ ಹಾಲು ವಿತರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷ ಭೀಮಶಿ ಭರಮಣ್ಣವರ, ಕಾರ್ಯದರ್ಶಿ ಜಯಾನಂದ ಹುಣಚ್ಯಾಳ, ಮುಖಂಡರಾದ ಬಸವರಾಜ ಹಿರೇಮಠ, ಶಶಿಧರ ದೇಮಶೆಟ್ಟಿ, ಲಕ್ಕಪ್ಪ ತಹಶೀಲ್ದಾರ, ಸಂತೋಷ ಹುಂಡೇಕರ, ಲಕ್ಷö್ಮಣ ತಳ್ಳಿ ಸೇರಿದಂತೆ ಬಿಜೆಪಿ ಕಾರ್ಯಕರ್ತರು ಇದ್ದರು.
