ಬಿಜೆಪಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ವಿಕಾಸ್ ತೀರ್ಥ ಬೈಕ್ ರ‍್ಯಾಲಿ.!
ಗೋಕಾಕ: ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರಕಾರ ೮ ವರ್ಷಗಳ ಆಡಳಿತ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿ ಬಿಜೆಪಿ ಯುವ ಮೋರ್ಚಾ ವತಿಯಿಂದ ನಗರದ ಪ್ರಮುಖ ಬೀದಿಗಳಲ್ಲಿ ವಿಕಾಸ ತೀರ್ಥ ಬೈಕ್ ರ್ಯಾಲಿಯನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ. ಸಂದೀಪಕುಮಾರ, ಕಾರ್ಯದರ್ಶಿ ಈರಣ್ಣ ಅಂಗಡಿ, ಗೋಕಾಕ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಶಾಸಕರ ಸಹಾಯಕ ಸುರೇಶ ಸನದಿ, ಯುವ ಮೋರ್ಚಾ ಅಧ್ಯಕ್ಷ ಮಂಜುನಾಥ ಪ್ರಭುನಟ್ಟಿ, ಪದಾಧಿಕಾರಿಗಳಾದ ಅರ್ಜುನ ಜರತಾರಕರ, ವಿರೇಂದ್ರ ಎಕ್ಕೇರಿಮಠ, ಗುರುರಾಜ ಶಾಸ್ತಿçಗೊಲ್ಲರ ಸೇರಿದಂತೆ ಅನೇಕರು ಇದ್ದರು.