Breaking News

ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬು- ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್.!

Spread the love

ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬು- ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್.!


ಗೋಕಾಕ: ಯುವ ಮೋರ್ಚಾ ಬಿಜೆಪಿ ಪಕ್ಷದ ಬೆನ್ನೆಲುಬಾಗಿದ್ದು, ಪಕ್ಷ ಮತ್ತು ಸಮಾಜದ ನಡುವೆ ಸೇತುವೆಯಾಗಿ ಯುವ ಘಟಕದ ಕಾರ್ಯಕರ್ತರು ಕಾರ್ಯ ನಿರ್ವಹಿಸಬೇಕು ಎಂದು ಯುವ ಮೋರ್ಚಾ ರಾಜ್ಯಾಧ್ಯಕ್ಷ ಡಾ.ಸಂದೀಪ್ ಕುಮಾರ್ ಹೇಳಿದರು.
ಅವರು, ಶುಕ್ರವಾರದಂದು ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಬೆಳಗಾವಿ ವತಿಯಿಂದ ಹಮ್ಮಿಕೊಂಡ ಗ್ರಾಮಾಂತರ ಜಿಲ್ಲಾ ಕಾರ್ಯಕಾರಿಣಿ ಸಭೆಯನ್ನು ಉದ್ಘಾಟಿಸಿ ಮಾತನಾಡಿದರು.
ತತ್ವ ಸಿದ್ದಾಂತ ಮತ್ತು ಸಂವಿಧಾನದ ಮೌಲ್ಯಗಳನ್ನು ಎತ್ತಿ ಹಿಡಿಯುವ ಕಾರ್ಯವನ್ನು ಬಿಜೆಪಿ ಪಕ್ಷ ಮಾಡುತ್ತಿದ್ದೆ ಇದನ್ನು ಸಾರ್ವಜನಿಕರಿಗೆ ತಿಳಿಸುವ ಕೆಲಸ ಯುವ ಮೋರ್ಚಾ ವತಿಯಿಂದ ಆಗಬೇಕಾಗಿದೆ. ಜನರ ಮನ ಮತ್ತು ಮನೆ ತಲುಪುವ ಕಾರ್ಯ ಮಾಡಿ ಪ್ರಧಾನಿ ಮೋದಿ ಅವರು ಮಾಡುತ್ತಿರುವ ಕಾರ್ಯಗಳನ್ನು ಜನರಿಗೆ ತಿಳಿಸುವ ಬಹುದೊಡ್ಡ ಜವಾಬ್ದಾರಿ ಯುವ ಮೋರ್ಚಾದ ಮೇಲಿದೆ ಎಂದರು.
ನಮ್ಮಿಂದ ಪಕ್ಷಕ್ಕೆ ಯಾವ ರೀತಿ ಲಾಭವಾಗುತ್ತದೆ ಎಂದು ಯೋಜನೆ ಮಾಡಿ ಕಾರ್ಯಪ್ರವೃತ್ತವಾಗಬೇಕು. ನಮಗೆ ಸಿಕ್ಕ ಅವಕಾಶ ಮತ್ತು ಸ್ಥಾನಕ್ಕೆ ಸರಿಯಾಗಿ ನ್ಯಾಯವನ್ನು ಒದಗಿಸಿ ಪಕ್ಷ ನೀಡಿದ ಜವಾಬ್ದಾರಿಯನ್ನು ಪ್ರಾಮಾಣಿಕವಾಗಿ ಮಾಡಿ ಪಕ್ಷದ ಏಳ್ಗೆಗೆ ಶ್ರಮಿಸಬೇಕು. ಪಕ್ಷಕ್ಕಾಗಿ, ಪಕ್ಷದ ಗೆಲುವಿಗೆ ಶ್ರಮಿಸಬೇಕು. ಶೇಕಡಾ ೬೫ ಪ್ರತಿಶತ ಯುವಕರು ಇರುವ ದೇಶ ನಮ್ಮದು. ಯುವಕರಿಗೆ ಸರಕಾರದ ಸಾಧನೆಗಳನ್ನು ತಲುಪಿಸಬೇಕು. ಯುವ ಸಮೂಹಗಳನ್ನು ಪಕ್ಷದ ಕಾರ್ಯಕ್ರಮಗಳ ಮೂಲಕ ಪಕ್ಷದತ್ತ ಸೆಳೆದು ಪಕ್ಷವನ್ನು ಬೇರು ಮಟ್ಟದಿಂದ ಬಲಪಡಿಸಬೇಕು ಎಂದು ಹೇಳಿದರು.
ಜಿಲ್ಲಾಧ್ಯಕ್ಷ ಸಂಜಯ್ ಪಾಟೀಲ ಮಾತನಾಡಿ ಪಕ್ಷ ಕೊಟ್ಟ ಜವಾಬ್ದಾರಿಯನ್ನು ಯುವಕರು ನಿಷ್ಠೆಯಿಂದ ನಿರ್ವಹಿಸಿ, ನಿರಂತರ ಕೆಲಸ ಮಾಡಿ ಪಕ್ಷ ಸಂಘಟನೆ ಮಾಡಬೇಕು. ಸಂಘ ಪರಿವಾರ ಮತ್ತು ಹಿರಿಯ ಸದಸ್ಯರ ಮಾರ್ಗದರ್ಶನದಲ್ಲಿ ಪಕ್ಷವನ್ನು ಕಟ್ಟಬೇಕು. ಯಾರ ಹೋಗಳಿಕೆಗೆ ಕಾರ್ಯ ಮಾಡದೆ. ಪಕ್ಷವನ್ನು ಬಲಪಡಿಸುವ ದಿಸೆಯಲ್ಲಿ ಕಾರ್ಯ ಮಾಡಬೇಕು. ತಮ್ಮ ತಮ್ಮ ಜವಾಬ್ದಾರಿಯನ್ನು ಅರಿತು ಕಾರ್ಯ ಮಾಡಿದರೆ ಪಕ್ಷವನ್ನು ಬಲಿಷ್ಠವಾಗಿ ಕಟ್ಟಬಹುದು. ಆ ನಿಟ್ಟಿನಲ್ಲಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯಮಾಡಬೇಕು. ಕಾಂಗ್ರೆಸ್ ಪಕ್ಷದ ಕಡೆ ದುಡ್ಡು ಇದೆ. ಬಿಜೆಪಿ ಪಕ್ಷದಲ್ಲಿ ಬಲಿಷ್ಠ ಕಾರ್ಯಕರ್ತರು ಇದ್ದಾರೆ. ಬರುವ ವಿಧಾನ ಸಭೆ ಹಾಗೂ ತಾಲೂಕು ಜಿಲ್ಲಾ ಪಂಚಾಯತ್ ಚುನಾವಣೆಗೆ ಸನ್ನದ್ಧರಾಗಿಬೇಕು ಎಂದು ಕಿವಿಮಾತು ಹೇಳಿದರು.
ಈ ಸಂದರ್ಭದಲ್ಲಿ ಯುವ ಮೋರ್ಚಾ ಜಿಲ್ಲಾಧ್ಯಕ್ಷ ಬಸವರಾಜ ನೇಸರಗಿ, ವಿಭಾಗ ಸಂಘಟನಾ ಪ್ರಮುಖ ಪ್ರಕಾಶ ಅಕ್ಕಲಕೋಟ, ಯುವ ಮೋರ್ಚಾ ರಾಜ್ಯ ಉಪಾಧ್ಯಕ್ಷ ರಾಜಕುಮಾರ್ ಸಗಾಯಿ, ಕಾರ್ಯದರ್ಶಿ ಈರಣ್ಣ ಅಂಗಡಿ, ರಾಜ್ಯ ಕಾರ್ಯಕಾರಿಣಿ ಸದಸ್ಯ ಶ್ರೇಯಸ್ ನಕಾಡಿ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾಷ್ ಪಾಟೀಲ, ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಮಂಡಲ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಯುವ ಮೋರ್ಚಾ ಪ್ರಭಾರಿ ಯುವರಾಜ ಜಾಧವ, ಚೇತನ ಪಾಟೀಲ, ದಿಗ್ವಿಜಯ್ ಸಿದ್ನಾಳ ಉಪಸ್ಥಿತರಿದ್ದರು.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

3 × 1 =