Breaking News

ಗಣೇಶ ಉತ್ಸವವನ್ನು ಸರಳವಾಗಿ ಆಚರಿಸುವಂತೆ-ಶಾಸಕ ಬಾಲಚಂದ್ರ ಜಾರಕಿಹೊಳಿ..!!

Spread the love

ಗಣೇಶ ಉತ್ಸವವನ್ನು ಸರಳವಾಗಿ ಆಚರಿಸುವಂತೆ-ಶಾಸಕ ಬಾಲಚಂದ್ರ ಜಾರಕಿಹೊಳಿ..!!


ಯುವ ಭಾರತ ಸುದ್ದಿ ಗೋಕಾಕ್ : ಕ್ಷಣ-ಕ್ಷಣಕ್ಕೂ ಕೊರೋನಾ ವೈರಸ್ ಉಲ್ಭಣವಾಗುತ್ತಿರುವ ಹಿನ್ನೆಲೆಯಲ್ಲಿ ನಾಳೆಯಿಂದ ನಡೆಯಲಿರುವ ಸಾರ್ವಜನಿಕ ಗಣೇಶ ಉತ್ಸವವನ್ನು ಸರಳವಾಗಿ ಆಚರಿಸುವಂತೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮನವಿ ಮಾಡಿಕೊಂಡಿದ್ದಾರೆ.
ನಾಳೆ ಶನಿವಾರದಂದು ದೇಶದಾದ್ಯಂತ ಗಣೇಶ ಉತ್ಸವ ಜರುಗಲಿದ್ದು, ಕೊರೋನಾ ಮಹಾಮಾರಿಯಿಂದಾಗಿ ಗಣೇಶೋತ್ಸವವನ್ನು ಅತ್ಯಂತ ಸರಳವಾಗಿ ಆಚರಿಸಬೇಕು. ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಪಾಲಿಸಬೇಕು. ಪ್ರತಿಯೊಬ್ಬರು ಮಾಸ್ಕ್ಗಳನ್ನು ಧರಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಪರಿಸರ ಸ್ನೇಹಿ ಗಣಪತಿ ಮೂರ್ತಿಗಳನ್ನು ಪ್ರತಿಷ್ಠಾಪಿಸಬೇಕೆಂದು ಅವರು ಮನವಿ ಮಾಡಿಕೊಂಡಿದ್ದಾರೆ.
ಕೊರೋನಾ ವೈರಸ್ ಹರಡುವಿಕೆ ನಿಯಂತ್ರಣ ಪ್ರತಿಯೊಬ್ಬರ ಕರ್ತವ್ಯವಾಗಿದ್ದು, ನಾಳೆ ಸರಳವಾಗಿ ನಡೆಯಲಿರುವ ಗಣೇಶ ಉತ್ಸವದ ನಿಮಿತ್ಯ ನಾಡಿನ ಬಾಂಧವರಿಗೆ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಶುಭ ಕೋರಿದ್ದಾರೆ.


Spread the love

About Yuva Bharatha

Check Also

ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ ಪರಮ ಪೀಠಾಚಾರ್ಯರಾದ ಶ್ರೀ ಜಗದ್ಗುರು ಸಿದ್ಧಲಿಂಗ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರರ ಸಾನ್ನಿಧ್ಯದಲ್ಲಿ ಜಾತ್ರಾ ಮಹೋತ್ಸವ

Spread the loveಸಾಮಾಜಿಕ ಸೌಹಾರ್ದತೆ ಸಾರುವ ಶ್ರೀ ಉಜ್ಜಯಿನಿ ಮರುಳಸಿದ್ಧೇಶ್ವರ ಜಾತ್ರಾ ಮಹೋತ್ಸವ.! ಶ್ರೀ ಉಜ್ಜಯಿನಿ ಸದ್ಧರ್ಮ ಪೀಠದ ಪ್ರಸ್ತುತ …

Leave a Reply

Your email address will not be published. Required fields are marked *

eleven + 3 =