BREAKING ಬೆಳಗಾವಿಗೆ ಅಚ್ಚರಿ ಮೇಯರ್ !

ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿ ಮಹಾನಗರ ಪಾಲಿಕೆ ನೂತನ ಮೇಯರ್ ಆಯ್ಕೆ ಇಂದು ನಡೆದಿದೆ.ಬೆಳಗಾವಿ ಮಹಾನಗರಪಾಲಿಕೆಗೆ ಶೋಭಾ ಸೋಮನಾಚೆ ನೂತನ ಮೇಯರ್ ಹಾಗೂ ರೇಷ್ಮಾ ಪಾಟೀಲ ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ. ಒಂದೂವರೆ ವರ್ಷದ ಹಿಂದೆ ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ನಡೆದಿತ್ತು. ಆದರೆ, ಕೆಲ ಕಾರಣಗಳಿಂದ ಮೇಯರ್ ಹಾಗೂ ಉಪಮೇಯರ್ ಚುನಾವಣೆ ನಡೆದಿರಲಿಲ್ಲ. ಇಂದು ನಡೆದ ನಿರ್ಣಾಯಕ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿಯವರು ಆಯ್ಕೆಯಾಗಿದ್ದಾರೆ.
ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸಂಪೂರ್ಣ ಬಹುಮತ ಪಡೆದಿತ್ತು. ಮೇಯರ್ ಹಾಗೂ ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಾದ ಅಭಯ್ ಪಾಟೀಲ ಮತ್ತು ಅನಿಲ್ ಬೆನಕೆ ಅವರು ಮಹತ್ವದ ಪಾತ್ರ ವಹಿಸಿದ್ದರು. ಕರ್ನಾಟಕ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಈ ಬಾರಿ ಮೇಯರ್ ಸ್ಥಾನ ಮರಾಠಿ ಭಾಷಿಕರ ಪಾಲಾಗಿರುವುದು
ವಿಶೇಷ.
YuvaBharataha Latest Kannada News