Breaking News

ಬಸ್ ಪ್ರಯಾಣ : ಮಹತ್ವದ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ

Spread the love

ಬಸ್ ಪ್ರಯಾಣ : ಮಹತ್ವದ ಮಾರ್ಗಸೂಚಿ ಹೊರಡಿಸಿದ ರಾಜ್ಯ ಸರಕಾರ

ಯುವ ಭಾರತ ಸುದ್ದಿ ಬೆಂಗಳೂರು :
ರಾಜ್ಯ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮಹಿಳೆಯರಿಗೆ ಉಚಿತ ಬಸ್‌ ಸಂಚಾರಕ್ಕೆ ರಾಜ್ಯ ಸರಕಾರ ಮಾರ್ಗಸೂಚಿ ಪ್ರಕಟಿಸಿದೆ.
ರಾಜ್ಯದೊಳಗೆ ಮಾತ್ರ ಉಚಿತ ಪ್ರಯಾಣಕ್ಕೆ ಅವಕಾಶ ಇದ್ದು, ಐಷಾರಾಮಿ ಬಸ್ ಗಳಲ್ಲಿ ಉಚಿತ ಪ್ರಯಾಣ ಇಲ್ಲ. ಬಿಎಂಟಿಸಿ ಬಸ್ಸುಗಳಲ್ಲಿ ಮಾತ್ರ ಪುರುಷರಿಗೆ ಶೇ. 50 ಮೀಸಲು ಆಸನ ಇಲ್ಲ. ಉಳಿದ ಎಲ್ಲಾ ನಿಗಮಗಳ ಬಸ್ಸುಗಳಲ್ಲಿ ಪುರುಷರಿಗೆ ಶೇ. 50 ಮೀಸಲು ಇಡಲು ಆದೇಶ ಹೊರಡಿಸಿದ್ದು, ಇದು ದೇಶದಲ್ಲೇ ಮೊದಲಾಗಿದೆ. ಇನ್ನು ಮಹಿಳೆಯರ ಉಚಿತ ಪ್ರಯಾಣಕ್ಕೆ ಮೂರು ತಿಂಗಳ ಅವಧಿಯೊಳಗೆ ಸ್ಮಾರ್ಟ್ ಕಾರ್ಡ್ ನೀಡಲು ತೀರ್ಮಾನ ತೆಗೆದುಕೊಳ್ಳಲಾಗಿದೆ.

ಸ್ಮಾರ್ಟ್ ಕಾರ್ಡ್ ನೀಡುವ ತನಕ ಆಧಾರ ಕಾರ್ಡ್ ಸಹಿತ ಗುರುತಿನ ಕಾರ್ಡ್ ತೋರಿಸಿ ಪ್ರಯಾಣ ಮಾಡಬಹುದು ಎಂದು ಮಾರ್ಗಸೂಚಿಯಲ್ಲಿ ತಿಳಿಸಲಾಗಿದೆ.

ರಾಜ್ಯದೊಳಗೆ ಸಂಚರಿಸುವ ಬಸ್ಸುಗಳಲ್ಲಿ ಮಾತ್ರ ಜಾರಿ
ಐಷಾರಾಮಿ ಬಸ್ಸುಗಳಾದ ರಾಜಹಂಸ, ಎಸಿ, ಸ್ಲೀಪರ್, ವಾಯುವಜ್ರ ದಂತಹ ಬಸ್ಸುಗಳಲ್ಲಿ ಯೋಜನೆ ಅನ್ವಯಿಸುವುದಿಲ್ಲ
ಬಿಎಂಟಿಸಿ ಬಸ್ಸು ಬಿಟ್ಟು, ಮಿಕ್ಕ ಎಲ್ಲಾ ನಿಗಮಗಳ ಬಸ್ಸುಗಳಲ್ಲಿ ಪುರುಷರಿಗೆ ಶೇ. 50 ಮೀಸಲು ಕಡ್ಡಾಯ.
ಫ್ರೀ ಪ್ರಯಾಣದ ವೆಚ್ಚವನ್ನು ಶೂನ್ಯ ಟಿಕೆಟ್ ಹಾಗೂ ಸ್ಮಾರ್ಟ್ ಕಾರ್ಡ್ ದತ್ತಾಂಶ ಆಧರಿಸಿ ಭರಿಸಲಾಗುವುದು.
ಮೂರು ತಿಂಗಳಲ್ಲಿ ಸೇವಾ ಸಿಂಧು ಕೇಂದ್ರಗಳಲ್ಲಿ ಶಕ್ತಿ ಯೋಜನೆಯ ಸ್ಮಾರ್ಟ್ ಕಾರ್ಡ್ ವಿತರಣೆ
ಸ್ಮಾರ್ಟ್ ಕಾರ್ಡ್ ಸಿಗುವ ತನಕ ಕರ್ನಾಟಕ ಸರ್ಕಾರ ಅಥವಾ ಕೇಂದ್ರ ಸರ್ಕಾರ ವಿತರಿಸಿರುವ ಗುರುತಿನ ಚೀಟಿ ತೋರಿಸಿ ಪ್ರಯಾಣಿಸಲು ಅನುಮತಿ.
ರಾಜ್ಯದ ಎಲ್ಲಾ ಮಹಿಳಾ ಪ್ರಯಾಣಿಕರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್ಸುಗಳಲ್ಲಿ ಉಚಿತ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆ”ಯನ್ನು ಜಾರಿಗೊಳಿಸಲು ಆಡಳಿತಾತ್ಮಕ ಅನುಮೋದನೆಯನ್ನು ಸರಕಾರ ನೀಡಿದೆ.

‘ಶಕ್ತಿ ಯೋಜನೆ”ಯಡಿ ರಾಜ್ಯದ ಎಲ್ಲಾ ಮಹಿಳೆಯರು ನಾಲ್ಕು ಸಾರಿಗೆ ಸಂಸ್ಥೆಗಳ ಸಾಮಾನ್ಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣ ಸೌಲಭ್ಯ ಒದಗಿಸಲು ತಾತ್ವಿಕ ಅನುಮೋದನೆ ನೀಡಿ ಆದೇಶ ಹೊರಡಿಸಿದೆ. ಅದರಂತೆ ಈ ಕೆಳಗಿನ ನಾಲ್ಕು ಬಸ್‌ಗಳಲ್ಲಿ ಪ್ರಯಾಣಿಸಬಹುದು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕ.ರಾ.ರ.ಸಾ.ನಿಗಮ),
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬೆಂ.ಮ.ಸಾ.ಸಂಸ್ಥೆ),
ವಾಯುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ (ವಾ.ಕ.ರ.ಸಾ.ಸಂಸ್ಥೆ)
ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮಗಳ (ಕ.ಕ.ರ.ಸಾ.ನಿಗಮ)


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

5 × one =