Breaking News

ಜಾತಿಮುಕ್ತ ಸಮಾಜ ಬಸವಣ್ಣನವರ, ವಚನ ಕ್ರಾಂತಿಯ ಆಶಯವಾಗಿತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

Spread the love

ಜಾತಿಮುಕ್ತ ಸಮಾಜ ಬಸವಣ್ಣನವರ, ವಚನ ಕ್ರಾಂತಿಯ ಆಶಯವಾಗಿತ್ತು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ಜು 2: ಜಾತಿಮುಕ್ತ ಸಮಾಜ ನಿರ್ಮಾಣ ಆಗಬೇಕು ಎನ್ನುವ ಬಸವಣ್ಣನವರ ಆಶಯ ಇನ್ನೂ ಈಡೇರಿಲ್ಲ. ವಿದ್ಯಾವಂತರಲ್ಲೇ ಜಾತಿ ತಾರತಮ್ಯ ಹೆಚ್ಚುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಷಾದ ವ್ಯಕ್ತಪಡಿಸಿದರು.

ಕೊಂಡಜ್ಜಿ ಬಸಪ್ಪ ಸಭಾಂಗಣದಲ್ಲಿ ಡಾ ಶ್ರೀ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮಿಗಳು ಆಯೋಜಿಸಿದ್ದ “ನೀನಲ್ಲದೆ ಮತ್ತಾರೂ ಇಲ್ಲವಯ್ಯಾ” ದೇಶದ ಪ್ರಥಮ ವಚನ ಸಾಂಸ್ಕೃತಿಕ ಅಭಿಯಾನವನ್ನು ಉದ್ಘಾಟಿಸಿ ಮಾತನಾಡಿದರು.

*12 ಸಾರಿ ಚಾಮರಾಜನಗರಕ್ಕೆ ಹೋಗಿ 2ನೇ ಬಾರಿ ಸಿಎಂ ಆದೆ*

ಚಾಮರಾಜನಗರಕ್ಕೆ ಹೋದರೆ ಸಿಎಂ ಕುರ್ಚಿ ಹೋಗುತ್ತದೆ ಎನ್ನುವ ಮೌಡ್ಯವನ್ನು ವಿದ್ಯಾವಂತರೇ ಹೆಚ್ಚು ನಂಬುತ್ತಾರೆ. ನಾನು 12 ಬಾರಿ ಚಾಮರಾಜನಗರಕ್ಕೆ ಹೋಗಿ ಎರಡನೇ ಬಾರಿ ಮುಖ್ಯಮಂತ್ರಿ ಆಗಿದ್ದೇನೆ. ಬಸವಣ್ಣನವರು 12ನೇ ಶತಮಾನದಲ್ಲೇ ಇಂಥಾ ಮೌಡ್ಯ ಮತ್ತು ಜಾತಿ ವ್ಯವಸ್ಥೆ ವಿರುದ್ಧ ಹೋರಾಡಿದ್ದರು. ಜಾಗೃತಿ ಮೂಡಿಸಿದ್ದರು. ಶಿಕ್ಷಣ ದೊರೆತರೆ ಜಾತಿ, ಮೌಡ್ಯ ಹೋಗುತ್ತದೆ ಎನ್ನುವ ಮಾತು ಸುಳ್ಳಾಗಿದೆ ಎಂದರು.

ಬಸವಣ್ಣನವರು ಕನಸು ಕಂಡಿದ್ದ ಸಮಾಜ ನಿರ್ಮಾಣ ಆಗಬೇಕು. ಕಾಯಕ ಮತ್ತು ದಾಸೋಹ ಮೌಲ್ಯಗಳು ಹೆಚ್ಚಬೇಕು. ಕಾಯಕ ಅಂದರೆ ಉತ್ಪಾದನೆ, ದಾಸೋಹ ಅಂದರೆ ವಿತರಣೆ. ಹೀಗೆ ಸಮಾಜದ ಉತ್ಪಾದನೆ, ಸಮಾಜದ ಎಲ್ಲರಿಗೂ ವಿತರಣೆ ಆಗಬೇಕು ಎನ್ನುವುದು ಬಸವಣ್ಣನವರ ಆಶಯವಾಗಿತ್ತು. ಬಸವಾದಿ ಶರಣರ ಅನುಭವ ಮಂಟಪ ರಚಿಸಿದ್ದೇ ಈ ಕಾರಣಕ್ಕೆ. ಎಲ್ಲಾ ಜಾತಿ ವರ್ಗಗಳಿಗೂ ಸಮಾನವಾದ ಅವಕಾಶ ಮತ್ತು ಸ್ಥಾನ‌ಮಾನ ಕಲ್ಪಿಸುವ ಆಶಯ ಆಗಿನ ಪಾರ್ಲಿಮೆಂಟ್ ಆಗಿದ್ದ ಅನುಭವ ಮಂಟಪಕ್ಕೆ ಇತ್ತು. ಇದೇ ಆಶಯ ನಮ್ಮ ಸರ್ಕಾರದ್ದೂ ಆಗಿದೆ ಎಂದರು.

ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್, ಮಾಜಿ ಶಾಸಕರಾದ ಶಾಮನೂರು ಶಿವಶಂಕರಪ್ಪ, ಶಾಸಕರಾದ ಶ್ರೀನಿವಾಸ್, ಮಾಜಿ ಸಚಿವ ಪಿ.ಜಿ.ಆರ್.ಸಿಂಧ್ಯ, ಕೊಂಡಜ್ಜಿ ಮೋಹನ್ ಸೇರಿ ಹಲವು ಪ್ರಮುಖರು ವೇದಿಕೆಯಲ್ಲಿ ಉಪಸ್ಥಿತರಿದ್ದರು.


Spread the love

About Yuva Bharatha

Check Also

ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ

Spread the love ಬಿಜೆಪಿ ಜಾರಿಗೆ ತಂದಿರುವ ರೈತ ವಿರೋಧಿ ಕೃಷಿ ಕಾಯ್ದೆಗಳ ವಿಚಾರದಲ್ಲಿ ಖಚಿತ ತೀರ್ಮಾನ ಮಾಡ್ತೀವಿ: ಸಿದ್ದರಾಮಯ್ಯ …

Leave a Reply

Your email address will not be published. Required fields are marked *

4 × five =