ಇತ್ತಿಚಿನ್ ಸುದ್ದಿ

ಎನ್‌ಸಿಪಿ ಕಾರ್ಯಾಧ್ಯಕ್ಷರಾಗಿ ಸುಪ್ರಿಯಾ ಸುಳೆ, ಪ್ರಫುಲ್ ಪಟೇಲ್ ನೇಮಕ

ಎನ್‌ಸಿಪಿ ಕಾರ್ಯಾಧ್ಯಕ್ಷರಾಗಿ ಸುಪ್ರಿಯಾ ಸುಳೆ, ಪ್ರಫುಲ್ ಪಟೇಲ್ ನೇಮಕ ಮುಂಬೈ: ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರ ಪುತ್ರಿ ಸುಪ್ರಿಯಾ ಸುಳೆ ಮತ್ತು ಎನ್‌ಸಿಪಿ ಉಪಾಧ್ಯಕ್ಷ ಪ್ರಫುಲ್ ಪಟೇಲ್ ಅವರನ್ನು ಪಕ್ಷದ ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಿರುವುದಾಗಿ ಘೋಷಿಸಲಾಗಿದೆ. ಶರದ್ ಪವಾರ್ ಅವರು 1999 ರಲ್ಲಿ ಪಿ.ಎ. ಸಂಗ್ಮಾ ಅವರ ಜೊತೆ ಸೇರಿ ಸ್ಥಾಪಿಸಿದ ಪಕ್ಷದ 25 ನೇ ವಾರ್ಷಿಕೋತ್ಸವದಲ್ಲಿ ಈ ಘೋಷಣೆ ಮಾಡಲಾಯಿತು. ಸುಪ್ರಿಯಾ ಸುಳೆ ಅವರನ್ನು ಎನ್‌ಸಿಪಿಯ ಕೇಂದ್ರ …

Read More »

ಔರಂಗಜೇಬ್, ಟಿಪ್ಪು ಸುಲ್ತಾನ್ ಕುರಿತ ಸಾಮಾಜಿಕ ಮಾಧ್ಯಮದ ಪೋಸ್ಟ್‌ ನಿಂದ ಕೊಲ್ಲಾಪುರ ಉದ್ವಿಗ್ನ , ಲಾಠಿ ಚಾರ್ಜ್‌

ಔರಂಗಜೇಬ್, ಟಿಪ್ಪು ಸುಲ್ತಾನ್ ಕುರಿತ ಸಾಮಾಜಿಕ ಮಾಧ್ಯಮದ ಪೋಸ್ಟ್‌ ನಿಂದ ಕೊಲ್ಲಾಪುರ ಉದ್ವಿಗ್ನ , ಲಾಠಿ ಚಾರ್ಜ್‌ ಕೊಲ್ಲಾಪುರ: ಔರಂಗಜೇಬ್ ಮತ್ತು ಟಿಪ್ಪು ಸುಲ್ತಾನ್ ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಹಾಕಲಾದ ವಿವಾದಾತ್ಮಕ ಪೋಸ್ಟ್‌ಗಳನ್ನು ವಿರೋಧಿಸಿ ಕೆಲ ಸಂಘಟನೆಗಳು ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಬುಧವಾರ ಬೆಳಿಗ್ಗೆ ಬೃಹತ್ ಪ್ರತಿಭಟನೆ ನಡೆಸಿವೆ. ಬಂದ್‌ಗೆ ಕರೆ ನೀಡಿದ್ದ ಪ್ರತಿಭಟನಾಕಾರರು ಕೊಲ್ಲಾಪುರದ ಛತ್ರಪತಿ ಶಿವಾಜಿ ಮಹಾರಾಜ್ ಚೌಕದಲ್ಲಿ ಕೆಲವು ಅಂಗಡಿಗಳು ಮತ್ತು ವಾಹನಗಳಿಗೆ ಹಾನಿ ಮಾಡಿದ ನಂತರ …

Read More »

ಭಾಗ್ಯಲಕ್ಷ್ಮೀ ಯೋಜನೆಗೆ ಕೊನೆಗೂ ಮಾರ್ಗಸೂಚಿ ಪ್ರಕಟ

ಭಾಗ್ಯಲಕ್ಷ್ಮೀ ಯೋಜನೆಗೆ ಕೊನೆಗೂ ಮಾರ್ಗಸೂಚಿ ಪ್ರಕಟ ಬೆಂಗಳೂರು : ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ₹2 ಸಾವಿರ ನೀಡುವ ‘ಗೃಹ ಲಕ್ಷ್ಮಿ’ ಯೋಜನೆಗೆ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದರೆ, ಜಿಎಸ್‌ಟಿ ರಿಟರ್ನ್ಸ್‌ ಸಲ್ಲಿಸುವವರಾಗಿದ್ದಲ್ಲಿ ಅವರು ಈ ಯೋಜನೆಗೆ ಅರ್ಹರಲ್ಲ ಎಂದು ಹೇಳಲಾಗಿದೆ. ‘ಗೃಹ ಲಕ್ಷ್ಮಿ’ಯ ಇತರ ನಿಯಮಗಳು ಹೀಗಿವೆ: ಅಂತ್ಯೋದಯ, ಬಿಪಿಎಲ್‌ ಮತ್ತು ಎಪಿಲ್‌ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ …

Read More »

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ, ಭಾರೀ ಗಾಳಿ ಮಳೆ ಸಾಧ್ಯತೆ

ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ, ಭಾರೀ ಗಾಳಿ ಮಳೆ ಸಾಧ್ಯತೆ ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದ ಕರಾವಳಿ ಭಾಗದಲ್ಲಿ 4 ದಿನ ಮಳೆಯಾಗುವ ಸಾಧ್ಯತೆ ಎಂದು ಭಾರತೀಯ ಹವಾಮಾನ ಇಲಾಖೆ ಮಂಗಳವಾರ ಮುನ್ಸೂಚನೆ ನೀಡಿದೆ. ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯುವುದನ್ನು ನಿಷೇಧಿಸಲಾಗಿದೆ. ಪ್ರವಾಸಿಗರು, ಸ್ಥಳೀಯರು ಸಮುದ್ರ, ನದಿ ತೀರಕ್ಕೆ ತೆರಳದಂತೆ ಸೂಚನೆ ನೀಡಲಾಗಿದೆ. ಮುಂದಿನ 24 ಗಂಟೆಗಳಲ್ಲಿ ಕರ್ನಾಟಕದ ಕರಾವಳಿಯಲ್ಲಿ ಬಿರುಗಾಳಿ ಬೀಸಲಿದ್ದು, ಗಂಟೆಗೆ 40ರಿಂದ …

Read More »

ವಾರ್ತಾ ಇಲಾಖೆ ಆಯುಕ್ತರಾಗಿ ಹೇಮಂತ ನಿಂಬಾಳ್ಕರ ನೇಮಕ

ವಾರ್ತಾ ಇಲಾಖೆ ಆಯುಕ್ತರಾಗಿ ಹೇಮಂತ ನಿಂಬಾಳ್ಕರ ನೇಮಕ ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರನ್ನಾಗಿ ಹಿರಿಯ ಐಪಿಎಸ್ ಅಧಿಕಾರಿ ಹೇಮಂತ ನಿಂಬಾಳ್ಕರ್ ಅವರನ್ನು ರಾಜ್ಯ ಸರ್ಕಾರ ನೇಮಕ ಮಾಡಿ ಆದೇಶ ಹೊರಡಿಸಿದೆ. ಹೇಮಂತ ನಿಂಬಾಳಕರ್ ದಶಕಗಳ ಹಿಂದೆ ಬೆಳಗಾವಿಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು. ಅವರ ಧರ್ಮಪತ್ನಿ ಡಾ. ಅಂಜಲಿ ನಿಂಬಾಳ್ಕರ್ ಖಾನಾಪುರ ಮತಕ್ಷೇತ್ರದ ಮಾಜಿ ಶಾಸಕಿ ಹಾಗೂ ಕಾಂಗ್ರೆಸ್ ನಾಯಕಿಯಾಗಿದ್ದಾರೆ.

Read More »

ಟಾಪ್ ಟೆನ್ ಎಂಜಿನಿಯರಿಂಗ್ ಸಂಸ್ಥೆಗಳ ಪಟ್ಟಿ ಪ್ರಕಟ

ಟಾಪ್ ಟೆನ್ ಎಂಜಿನಿಯರಿಂಗ್ ಸಂಸ್ಥೆಗಳ ಪಟ್ಟಿ ಪ್ರಕಟ ನವದೆಹಲಿ: ಎನ್‌ಐಆರ್‌ಎಫ್‌ (NIRF ) 2023ರ ಶ್ರೇಯಾಂಕಗಳನ್ನು ಸೋಮವಾರ (ಜೂನ್ 5) ಬಿಡುಗಡೆ ಮಾಡಲಾಗಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ (IIT) ಮದ್ರಾಸ್ ಈ ವರ್ಷವೂ ಒಟ್ಟಾರೆ ವಿಭಾಗದಲ್ಲಿ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಬೆಂಗಳೂರಿನ ಭಾರತಿಯ ವಿಜ್ಞಾನ ಸಂಸ್ಥೆ (IISc) ಎರಡನೇ ಸ್ಥಾನವನ್ನು ಪಡೆದುಕೊಂಡರೆ, ಐಐಟಿ (IIT) ದೆಹಲಿ ಮೂರನೇ ಸ್ಥಾನದಲ್ಲಿದೆ. ಐಐಟಿ ಮದ್ರಾಸ್ 86.69% ಅಂಕಗಳನ್ನು ಪಡೆದು ಪಟ್ಟಿಯಲ್ಲಿ ಅಗ್ರಸ್ಥಾನ …

Read More »

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ; ಮಹಿಳೆಯರಿಗೆ ಶಕ್ತಿ ಸ್ಮಾರ್ಟ್ ಕಾರ್ಡ್‌ ವಿತರಿಸಲು ಕ್ರಮ

ಮಹಿಳೆಯರಿಗೆ ಉಚಿತ ಬಸ್‌ ಪ್ರಯಾಣ : ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ; ಮಹಿಳೆಯರಿಗೆ ಶಕ್ತಿ ಸ್ಮಾರ್ಟ್ ಕಾರ್ಡ್‌ ವಿತರಿಸಲು ಕ್ರಮ ಬೆಂಗಳೂರು : ರಾಜ್ಯ ಸರ್ಕಾರದ ‘ಶಕ್ತಿ ಯೋಜನೆ’ಯಡಿ ರಾಜ್ಯದ ಎಲ್ಲ ಮಹಿಳಾ ಪ್ರಯಾಣಿಕರಿಗೆ ನಾಲ್ಕು ಸಾರಿಗೆ ಸಂಸ್ಥೆಗಳಾದ ಕೆಎಸ್‌ಆರ್‌ಟಿಸಿ, ಬಿಎಂಟಿಸಿ, ವಾ.ಕ.ರ.ಸಾ.ಸಂಸ್ಥೆ ಹಾಗೂ ಕ.ಕ.ರ.ಸಾ.ನಿಗಮಗಳ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸುವ ಬಗ್ಗೆ ಸರ್ಕಾರ ಮಾರ್ಗಸೂಚಿ ಪ್ರಕಟಿಸಿದೆ. ‘ಶಕ್ತಿ ಯೋಜನೆ’ಯಡಿ ರಾಜ್ಯಾದ್ಯಂತ ನಗರ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಎಲ್ಲ ಮಹಿಳೆಯರು (ವಿದ್ಯಾರ್ಥಿನಿಯರು …

Read More »

ಮಹಾಭಾರತದ ಶಕುನಿ ಮಾಮಾ ಖ್ಯಾತಿಯ ಗುಫಿ ಪೈಂಟಲ್ ವಿಧಿವಶ

ಮಹಾಭಾರತದ ಶಕುನಿ ಮಾಮಾ ಖ್ಯಾತಿಯ ಗುಫಿ ಪೈಂಟಲ್ ವಿಧಿವಶ ಯುವ ಭಾರತ ಸುದ್ದಿ ಮುಂಬೈ: ಹಿರಿಯ ನಟ ಗುಫಿ ಪೈಂಟಲ್ ಅವರು ಸೋಮವಾರ ಬೆಳಿಗ್ಗೆ 79 ನೇ ವಯಸ್ಸಿನಲ್ಲಿ ನಿಧನರಾಗಿದ್ದಾರೆ ಎಂದು ಅವರ ಕುಟುಂಬ ದೃಢಪಡಿಸಿದೆ. 1980ರ ದಶಕದ ಬಿ.ಆರ್. ಚೋಪ್ರಾ ಅವರ ಮಹಾಭಾರತ ಟಿವಿ ಧಾರಾವಾಹಿಯಲ್ಲಿ ಶಕುನಿ ಮಾಮಾ ಪಾತ್ರದಲ್ಲಿನ ನಟನೆಗೆ ದೇಶಾದ್ಯಂತ ಮನೆಮಾತಾಗಿದ್ದ ಗುಫಿ ಪೈಂಟಲ್‌ ಅವರು ವಯೋಸಹಜ ಆರೋಗ್ಯ ಸಮಸ್ಯೆಗಳಿಂದಾಗಿ ಸೋಮವಾರ ಮುಂಬೈನಲ್ಲಿ ನಿಧನರಾದರು. “ದುರದೃಷ್ಟವಶಾತ್, …

Read More »

ಮುಂಗಾರು ಆಗಮನಕ್ಕೆ ಕ್ಷಣಗಣನೆ

ಮುಂಗಾರು ಆಗಮನಕ್ಕೆ ಕ್ಷಣಗಣನೆ ಯುವ ಭಾರತ ಸುದ್ದಿ ಮಂಗಳೂರು: ರಾಜ್ಯದಲ್ಲಿ ಮುಂಗಾರು ಆಗಮನಕ್ಕೆ ಕ್ಷಣಗಣನೆ ಶುರುವಾಗಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಜೂನ್ 7 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಮಂಡ್ಯ, ಮೈಸೂರು,ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಮೋದಕವಿದ ವಾತಾವರಣ …

Read More »

ಗಣಿಕೊಪ್ಪದಲ್ಲಿ ಎನ್ನೆಸ್ಸೆಸ್ ಶಿಬಿರ

ಗಣಿಕೊಪ್ಪದಲ್ಲಿ ಎನ್ನೆಸ್ಸೆಸ್ ಶಿಬಿರ ಯುವ ಭಾರತ ಸುದ್ದಿ  ಬೆಳಗಾವಿ : ನಗರದ ಕೆ.ಎಲ್.ಇ ಸಂಸ್ಥೆಯ ರಾಜಾ ಲಖಮಗೌಡ ಸ್ವಾಯತ್ತ ವಿಜ್ಞಾನ ಮಹಾವಿದ್ಯಾಲಯದ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರವನ್ನು ದತ್ತು ಗ್ರಾಮವಾದ ಗಣಿಕೊಪ್ಪ ಗ್ರಾಮದಲ್ಲಿ ದಿನಾಂಕ 02/06/2023 ರಂದು ಸಾಯಂಕಾಲ 4:00ಗಂಟೆಗೆ ಉದ್ಘಾಟಿಸಲಾಯಿತು. ಈ ಶಿಬಿರದ ಮುಖ್ಯ ಅತಿಥಿ ಸ್ಥಾನವನ್ನು ಮರಿಕಟ್ಟಿ ಗ್ರಾಮ ಪಂಚಾಯತ ಮಾಜಿ ಸದಸ್ಯ ಮಹಂತೇಶ ಚಿಕ್ಕಮಠ ಅವರು ವಹಿಸಿದ್ದರು. ಗೌರವಾನ್ವಿತ ಅತಿಥಿಗಳಾಗಿ ಮಡಿವಾಳೇಶ್ವರ ಮಠದ …

Read More »