Breaking News

ಕರ್ನಾಟಕ

ವಾರದಲ್ಲೇ ವಾಕ್ಸಮರ : ಎಂ.ಬಿ. ಪಾಟೀಲ್ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು

ವಾರದಲ್ಲೇ ವಾಕ್ಸಮರ : ಎಂ.ಬಿ. ಪಾಟೀಲ್ ಹೇಳಿಕೆಗೆ ಡಿಸಿಎಂ ಡಿ ಕೆ ಶಿವಕುಮಾರ್ ತಿರುಗೇಟು ಬೆಂಗಳೂರು : ಯಾರಾದರೂ ಏನು ಬೇಕಾದರೂ ಹೇಳಿಕೊಳ್ಳಲಿ. ನಾನು ಆ ಬಗ್ಗೆ ಏನೂ ಮಾತಾಡುವುದಿಲ್ಲ. ಅಧಿಕಾರ ಮತ್ತಿತರ ಪಕ್ಷದ ವಿಚಾರಗಳನ್ನು ನೋಡಿಕೊಳ್ಳಲು ಎಐಸಿಸಿ ಇದೆ. ಕಾಂಗ್ರೆಸ್ ರಾಷ್ಟ್ರೀಯ ಮುಖಂಡರು ಇದ್ದಾರೆ. ರಾಜ್ಯದ ಸರ್ವತೋಮುಖ ಅಭಿವೃದ್ಧಿಗೆ ಮಾತ್ರ ನಮ್ಮ ಆದ್ಯತೆ ಎಂದು ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ ಕೆ ಶಿವಕುಮಾರ್ ಹೇಳಿದ್ದಾರೆ. ಸಿದ್ದರಾಮಯ್ಯ ಅವರೇ ಮುಂದಿನ …

Read More »

ಬಿಜೆಪಿ ಸರ್ಕಾರದ ಅವಧಿಯ ಎಲ್ಲ ಕಾಮಗಾರಿಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ

ಬಿಜೆಪಿ ಸರ್ಕಾರದ ಅವಧಿಯ ಎಲ್ಲ ಕಾಮಗಾರಿಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ ಬೆಂಗಳೂರು : ರಾಜ್ಯದ ಹಿಂದಿನ ಬಿಜೆಪಿ ಸರ್ಕಾರ ಕೈಗೊಂಡಿದ್ದ ಎಲ್ಲ ಇಲಾಖೆಗಳ ಕಾಮಗಾರಿಗಳಿಗೆ ತಡೆ ನೀಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಇಲಾಖೆಗಳ ಅಧೀನಕ್ಕೊಳಪಡುವ ನಿಗಮ ಮಂಡಳಿ/ಪ್ರಾಧಿಕಾರಗಳ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಎಲ್ಲ ಮುಂದಿನ ಹಣ ಬಿಡುಗಡೆ/ಪಾವತಿಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲು ಹಾಗೂ ಪ್ರಾರಂಭವಾಗದಿರುವ ಎಲ್ಲಾ ಕಾಮಗಾರಿಗಳನ್ನು ಸಹ ತಡೆ ಹಿಡಿಯಲು ಆದೇಶದಲ್ಲಿ ತಿಳಿಸಲಾಗಿದೆ. …

Read More »

ರಾಜಸ್ಥಾನ ಸರ್ಕಾರದ ಯೋಜನಾ ಭವನದ ನೆಲಮಾಳಿಗೆಯಲ್ಲಿ 2.31 ಕೋಟಿ ರೂ. ನಗದು ಹಣ, ಒಂದು ಕೆಜಿ ಚಿನ್ನ ಪತ್ತೆ

ರಾಜಸ್ಥಾನ ಸರ್ಕಾರದ ಯೋಜನಾ ಭವನದ ನೆಲಮಾಳಿಗೆಯಲ್ಲಿ 2.31 ಕೋಟಿ ರೂ. ನಗದು ಹಣ, ಒಂದು ಕೆಜಿ ಚಿನ್ನ ಪತ್ತೆ ಯುವ ಭಾರತ ಸುದ್ದಿ ಜೈಪುರ: ರಾಜಸ್ಥಾನದ ಸೆಕ್ರೆಟರಿಯೇಟ್ ಬಳಿ ಇರುವ ಯೋಜನಾ ಭವನದಲ್ಲಿ ಶುಕ್ರವಾರ ರಾತ್ರಿ ಕೋಟ್ಯಂತರ ರೂಪಾಯಿ ನಗದು ಮತ್ತು 1 ಕೆಜಿ ಚಿನ್ನಾಭರಣ ಸಿಕ್ಕಿದ ನಂತರ ದೊಡ್ಡ ಪ್ರಕರಣ ಬೆಳಕಿಗೆ ಬಂದಿದೆ. ಯೋಜನಾ ಭವನದಲ್ಲಿ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆಯ ಕಡತಗಳನ್ನು ಡಿಜಿಟಲೀಕರಣಗೊಳಿಸುವ ಕಾರ್ಯ ನಡೆಯುತ್ತಿದೆ. ಈ …

Read More »

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ

ಸಿದ್ದರಾಮಯ್ಯ ಮುಂದಿನ ಮುಖ್ಯಮಂತ್ರಿ ಬೆಂಗಳೂರು : ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರನ್ನು ಅಧಿಕೃತವಾಗಿ ಆಯ್ಕೆ ಮಾಡಲಾಗಿದೆ. ಸಿದ್ದರಾಮಯ್ಯ ಹಾಗೂ ಡಿ.ಕೆ. ಶಿವಕುಮಾರ್ ನಡುವೆ ಹಣಾಹಣಿ ನಡೆದಿತ್ತು. ಕಾಂಗ್ರೆಸ್ ಹೈಕಮಾಂಡ್ ಸಿದ್ದರಾಮಯ್ಯ ಅವರಿಗೆ ಮುಖ್ಯಮಂತ್ರಿ ಸ್ಥಾನ ದಯಪಾಲಿಸಿದೆ. ಗುರುವಾರ ಅವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ.

Read More »

ಸಿಎಂ ಆಯ್ಕೆ ಪ್ರಕ್ರಿಯೆ ಜೋರು !

ಸಿಎಂ ಆಯ್ಕೆ ಪ್ರಕ್ರಿಯೆ ಜೋರು ! ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ ಮತ್ತು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪಟ್ಟಕ್ಕೆ ಪಟ್ಟು ಹಿಡಿದ ಕಾರಣ ಕಾಂಗ್ರೆಸ್‌ ಶಾಸಕಾಂಗ ಪಕ್ಷದ (ಸಿಎಲ್‌ಪಿ) ನಾಯಕನ ಆಯ್ಕೆಗಾಗಿ ಭಾನುವಾರ ನಡೆದ ಸಭೆಯಲ್ಲಿ ಒಮ್ಮತದ ತೀರ್ಮಾನ ಸಾಧ್ಯವಾಗಿಲ್ಲ. ಹೀಗಾಗಿ, ಆಯ್ಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಬಿಡಲು ನಿರ್ಧರಿಸಲಾಗಿದೆ. ವಸಂತ ನಗರದಲ್ಲಿರುವ ಶಾಂಗ್ರಿ–ಲಾ ಹೋಟೆಲ್‌ನಲ್ಲಿ ಸಭೆ ನಡೆಯಿತು. ಖರ್ಗೆ …

Read More »

ಸಂಜೆ ಹೊತ್ತಿಗೆ ಸಮೀಕ್ಷೆಗೆ ಕಾತರ

ಸಂಜೆ ಹೊತ್ತಿಗೆ ಸಮೀಕ್ಷೆಗೆ ಕಾತರ ಯುವ ಭಾರತ ಸುದ್ದಿ ಬೆಂಗಳೂರು : ಕರ್ನಾಟಕ ವಿಧಾನಸಭಾ ಚುನಾವಣೆ ಮತದಾನ ಸಂಜೆ 6 ಗಂಟೆಗೆ ಮುಕ್ತಾಯವಾಗಲಿದೆ. ನಂತರ ದೇಶದ ಪ್ರಮುಖ ಸಂಸ್ಥೆಗಳು ಎಕ್ಸಿಟ್ ಪೋಲ್ ಸಮೀಕ್ಷೆಯನ್ನು ಪ್ರಕಟಿಸಲಿವೆ. ಇದು ಅತ್ಯಂತ ಕುತೂಹಲ ಕೆರಳಿಸಿದೆ. ಇದೀಗ ಚುನಾವಣೆಯ ಮತದಾನ ಕಾವೇರುತ್ತಿದ್ದು ಸಂಜೆ ಹೊತ್ತಿಗೆ ಇನ್ನು ಜೋರಾಗುವ ಸಾಧ್ಯತೆ ಇದೆ.

Read More »

SSLC ವಿದ್ಯಾರ್ಥಿಗಳಿಗೆ ಮಾದರಿ ಈ ವಿದ್ಯಾರ್ಥಿ !

SSLC ವಿದ್ಯಾರ್ಥಿಗಳಿಗೆ ಮಾದರಿ ಈ ವಿದ್ಯಾರ್ಥಿ ! ಚಿಕ್ಕಬಳ್ಳಾಪುರ: ನಗರದ ಅಗಲಗುರ್ಕಿಯ ಬಿಜಿಎಸ್ ಪ್ರೌಢಶಾಲೆ ವಿದ್ಯಾರ್ಥಿ ಎನ್. ಯಶಸ್ ಗೌಡ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಟಾಪರ್ ಆಗಿದ್ದಾರೆ. 625ಕ್ಕೆ 625 ಅಂಕ ಪಡೆದ ರಾಜ್ಯದ ನಾಲ್ಕು ವಿದ್ಯಾರ್ಥಿಗಳಲ್ಲಿ ಯಶಸ್ ಒಬ್ಬರಾಗಿದ್ದಾರೆ. ಯಶಸ್‌ ಚಿಕ್ಕಬಳ್ಳಾಪುರ ತಾಲ್ಲೂಕಿನ ಮಜ್ಜಿಗೆ ಹೊಸಹಳ್ಳಿಯ ನಾರಾಯಣ ಸ್ವಾಮಿ-ಭಾಗ್ಯಮ್ಮ ದಂಪತಿ ಪುತ್ರ. ಅವರ ತಂದೆ ನಾರಾಯಣ ಸ್ವಾಮಿ ಮೂಲತಃ ಕೃಷಿಕರಾಗಿದ್ದು, ಭಾರತೀಯ ಜೀವ ವಿಮಾ ನಿಗಮದಲ್ಲಿ ಏಜೆಂಟರ್‌ ಆಗಿಯೂ …

Read More »

BREAKING ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ !

BREAKING ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ! ಯುವ ಭಾರತ ಸುದ್ದಿ ಬೆಂಗಳೂರು : ಪ್ರಸಕ್ತ ಸಾಲಿನ ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕ ಶಾಲಾ ಮೌಲ್ಯ ನಿರ್ಣಯ ಮಂಡಳಿ ಬೆಂಗಳೂರಲ್ಲಿ ಪತ್ರಿಕಾಗೋಷ್ಠಿ ನಡೆಸಿ ಫಲಿತಾಂಶ ಪ್ರಕಟಿಸಿದೆ. ಈ ಬಾರಿ 83.89 ಫಲಿತಾಂಶ ಬಂದಿದೆ. ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ನಾಲ್ವರು ವಿದ್ಯಾರ್ಥಿಗಳು 625ಕ್ಕೆ 625 ಅಂಕ ಗಳಿಸಿದ್ದಾರೆ.

Read More »

BREAKING ಮೇ 8ರಂದು ಎಸ್ ಎಸ್ ಎಲ್ ಸಿ ಫಲಿತಾಂಶ !

BREAKING ಮೇ 8ರಂದು ಎಸ್ ಎಸ್ ಎಲ್ ಸಿ ಫಲಿತಾಂಶ ! ಬೆಂಗಳೂರು : ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಮೇ 8 ರಂದು (ಸೋಮವಾರ) ಬೆಳಗ್ಗೆ 10 ಗಂಟೆಗೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ. ಬೆಳಗ್ಗೆ 10 ಕ್ಕೆ ಫಲಿತಾಂಶ ಪ್ರಕಟವಾಗಲಿದೆ .11 ಗಂಟೆ ಬಳಿಕ ಜಾಲತಾಣದಲ್ಲಿ ವೀಕ್ಷಣೆ ಮಾಡಬಹುದು ಎಂದು ತಿಳಿಸಿದೆ.

Read More »

ಕುತೂಹಲ ಕೆರಳಿಸಿದ ಭೇಟಿ : ಬೆಳಗಾವಿಗಿಂದು ಮಾಜಿ ಸಿಎಂ

ಕುತೂಹಲ ಕೆರಳಿಸಿದ ಭೇಟಿ : ಬೆಳಗಾವಿಗಿಂದು ಮಾಜಿ ಸಿಎಂ ಬೆಳಗಾವಿ : ಕಾಂಗ್ರೆಸ್ ಪರ ಮತಯಾಚನೆಗೆ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಆಗಮಿಸುತ್ತಿರುವುದು ಕುತೂಹಲ ಕೆರಳಿಸಿದೆ. ಅವರ ಮತ ಬೇಟೆಗೆ ಬೆಳಗಾವಿಯ ಲಿಂಗಾಯತ ಮತದಾರರು ಯಾವ ರೀತಿಯಲ್ಲಿ ಸ್ಪಂದನೆ ನೀಡಲಿದ್ದಾರೆ ಎನ್ನುವುದು ಕಾದುನೋಡಬೇಕಿದೆ. ಇಷ್ಟೊಂದು ವರ್ಷಗಳ ಕಾಲ ಜಗದೀಶ ಶೆಟ್ಟರ್ ಅವರು ಬಿಜೆಪಿ ನಾಯಕರಾಗಿ ಆಗಮಿಸುತ್ತಿದ್ದರು. ಆದರೆ, ಈಗ ಮಾತ್ರ ಕಾಂಗ್ರೆಸ್ ನಾಯಕರಾಗಿ ಬದಲಾಗಿದ್ದಾರೆ. ಬಿಜೆಪಿ ಟಿಕೆಟ್ ವಂಚಿತರಾಗಿ ಕಾಂಗ್ರೆಸ್ …

Read More »