ಬೆಳಗಾವಿಯಲ್ಲಿ ಪ್ರಧಾನಿ ರೋಡ್ ಶೋ ! ಯುವ ಭಾರತ ಸುದ್ದಿ ಬೆಳಗಾವಿ : ಬೆಳಗಾವಿಯಲ್ಲಿ ಸೋಮವಾರ ಪ್ರಧಾನಿ ನರೇಂದ್ರ ಮೋದಿ ಅವರು ಭರ್ಜರಿ ರೋಡ್ ಶೋ ನಡೆಸಿದರು. ರಸ್ತೆಯ ಎರಡು ಬದಿಗಳಲ್ಲಿ ಬಿರು ಬಿಸಿಲನ್ನು ಲೆಕ್ಕಿಸದೆ ನಿಂತಿದ್ದ ಸಾವಿರಾರು ಸಂಖ್ಯೆಯ ಅಭಿಮಾನಿಗಳು ಮತ್ತು ಬಿಜೆಪಿ ಕಾರ್ಯಕರ್ತರ ಕಡೆ ಪ್ರಧಾನಿ ನರೇಂದ್ರ ಮೋದಿ ಕೈಬೀಸಿ ಹರ್ಷೋದ್ಗಾರ ಸೂಚಿಸಿದರು. ಒಟ್ಟಾರೆ ಬೆಳಗಾವಿಯಲ್ಲಿ ಸೋಮವಾರ ನಡೆದ ಮೋದಿ ರೋಡ್ ಶೋ ಭರ್ಜರಿಯಾಗಿ ನಡೆಯಿತು.
Read More »ಮೋದಿ ಬೆಳಗಾವಿ ಭೇಟಿ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಭಾರೀ ಬದಲಾವಣೆ
ಮೋದಿ ಬೆಳಗಾವಿ ಭೇಟಿ ಹಿನ್ನೆಲೆಯಲ್ಲಿ ಸಂಚಾರದಲ್ಲಿ ಭಾರೀ ಬದಲಾವಣೆ ಯುವ ಭಾರತ ಸುದ್ದಿ, ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಬೆಳಗಾವಿಗೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಸಂಚಾರ ವ್ಯವಸ್ಥೆಯಲ್ಲಿ ಬಾರಿ ಬದಲಾವಣೆ ಮಾಡಲಾಗಿದೆ. ಮಾಲಿನಿ ಸಿಟಿವರೆಗೂ ರೋಡ್ ಶೋ ಮತ್ತು ಸಾರ್ವಜನಿಕ ಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಅವರು 27/02/2023 ರಂದು ಬೆಳಗಾವಿಗೆ ಆಗಮಿಸಲಿದ್ದಾರೆ. ದಿನಾಂಕ:27/02/2023 ರಂದು …
Read More »ಕರ್ನಾಟಕಕ್ಕೆ ಮೋದಿ : ಅಭೂತಪೂರ್ವ ಯಶಸ್ವಿಗೆ ರುದ್ರಣ್ಣ ಚಂದರಗಿ ಮನವಿ
ಕರ್ನಾಟಕಕ್ಕೆ ಮೋದಿ : ಅಭೂತಪೂರ್ವ ಯಶಸ್ವಿಗೆ ರುದ್ರಣ್ಣ ಚಂದರಗಿ ಮನವಿ ಯುವ ಭಾರತ ಸುದ್ದಿ ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಅವರು ಫೆಬ್ರವರಿ 27 ರಂದು ಶಿವಮೊಗ್ಗ ಹಾಗೂ ಬೆಳಗಾವಿಗೆ ಭೇಟಿ ನೀಡಲಿದ್ದಾರೆ. ಕರ್ನಾಟಕ ಪಾಲಿಗೆ ಇದೊಂದು ಐತಿಹಾಸಿಕ ದಿನವಾಗಲಿದೆ. ಪ್ರಧಾನಿಯವರು ಶಿವಮೊಗ್ಗ ನೂತನ ವಿಮಾನ ನಿಲ್ದಾಣ ಉದ್ಘಾಟನೆ ಮತ್ತು ಬೆಳಗಾವಿಯಲ್ಲಿ ಪುನರ್ ಅಭಿವೃದ್ದಿಗೊಂಡ ನೂತನ ರೈಲ್ವೆ ಕಟ್ಟಡವನ್ನು ರಾಷ್ಟ್ರಕ್ಕೆ ಸಮರ್ಪಿಸುವ ಕಾರ್ಯಕ್ರಮಕ್ಕೆ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ …
Read More »ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಬೆಳಗಾವಿ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ
ಜಿಲ್ಲಾ ಮಟ್ಟದ ಯುವಜನೋತ್ಸವದಲ್ಲಿ ಬೆಳಗಾವಿ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳಿಗೆ ಪ್ರಥಮ ಬಹುಮಾನ ಯುವ ಭಾರತ ಸುದ್ದಿ ಬೆಳಗಾವಿ : ಜಿಲ್ಲಾಡಳಿತ ಹಾಗೂ ಜಿಲ್ಲಾ ಪಂಚಾಯತ್ ವತಿಯಿಂದ ನಡೆದ ಜಿಲ್ಲಾ ಮಟ್ಟದ ಯುವಜನೋತ್ಸವ ಸ್ಪರ್ಧೆಯಲ್ಲಿ ನಗರದ ಕೆಎಲ್ ಎಸ್ ರಾಜಾ ಲಖಮಗೌಡ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿ ಮಲ್ಲಿಕಾರ್ಜುನ ಪೂಜಾರ್ ಅವರು ವಾಕ್ಚಾತುರ್ಯ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ಕೀರ್ತಿ ಕೋಟಿ ಕವನ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ, ನಿಹಾರಿಕಾ ಚಿತ್ರಕಲಾ ಸ್ಪರ್ಧೆಯಲ್ಲಿ …
Read More »ಮೋದಿ ಕಾರ್ಯಕ್ರಮ : ಮಹತ್ವದ ಸೂಚನೆ
ಮೋದಿ ಕಾರ್ಯಕ್ರಮ : ಮಹತ್ವದ ಸೂಚನೆ ಯುವ ಭಾರತ ಸುದ್ದಿ ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಗರದಲ್ಲಿ ಸಂಚಾರ ಬದಲಾವಣೆ ಮಾಡಿ ಜಿಲ್ಲಾ ಆಡಳಿತ ಆದೇಶ ಹೊರಡಿಸಿದೆ. ದಿನಾಂಕ . 27/02/2023 ರಂದು ಪ್ರಧಾನ ಮಂತ್ರಿಗಳ ಕಾರ್ಯಕ್ರಮ ನಿಟ್ಟಿನಲ್ಲಿ ಬೆಳಗಾವಿ ನಗರದಲ್ಲಿ ಸಂಚಾರ ಮಾರ್ಗ ಬದಲಾವಣೆ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ನರೇಂದ್ರ ಮೋದಿಯವರು 27/02/2023 ರಂದು ಬೆಳಗಾವಿ ನಗರಕ್ಕೆ …
Read More »ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯ : ಕಾನೂನು ಪರಿವರ್ತನೆ ತಂತ್ರಜ್ಞಾನ ಸಮ್ಮೇಳನಕ್ಕೆ ವಿಧ್ಯುಕ್ತ ಚಾಲನೆ
ಬೆಳಗಾವಿ ಬಿ.ವಿ.ಬೆಲ್ಲದ ಕಾನೂನು ಮಹಾವಿದ್ಯಾಲಯ : ಕಾನೂನು ಪರಿವರ್ತನೆ ತಂತ್ರಜ್ಞಾನ ಸಮ್ಮೇಳನಕ್ಕೆ ವಿಧ್ಯುಕ್ತ ಚಾಲನೆ ಜ್ಞಾನ ವೃತ್ತಿಪರರ ಏಕಸ್ವಾಮ್ಯವಲ್ಲ ದೇಶದ ಕಾನೂನು ವಿದ್ಯಾರ್ಥಿಗಳು ಭಾಗಿ ಯುವ ಭಾರತ ಸುದ್ದಿ ಬೆಳಗಾವಿ : ಕಾನೂನು ವಿದ್ಯಾರ್ಥಿಗಳು ಕಾನೂನು ಕ್ಷೇತ್ರದಲ್ಲಿ ಸಾಧನೆ ಮಾಡಲು ತಂತ್ರಜ್ಞಾನದ ಮಾಸ್ಟರ್ ಆಗಬೇಕು ಎಂದು ಧಾರವಾಡ ಕರ್ನಾಟಕ ಹೈಕೋರ್ಟ್ ನ್ಯಾಯಮೂರ್ತಿ ಸಿ.ಎಂ.ಜೋಶಿ ಹೇಳಿದರು. ನಗರದ ಬಿ.ವಿ. ಬೆಲ್ಲದ ಕಾನೂನು ಮಹಾವಿದ್ಯಾಲಯದ ವತಿಯಿಂದ ಶುಕ್ರವಾರ ಸಂಜೆ ನೆಹರು ನಗರದ ಜೆಎನ್ಎಂಸಿ …
Read More »ಬೋರಗಾಂವದ ಟೆಕ್ಸ್ ಟೈಲ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ : ಯಂತ್ರೋಪಕರಣ ಸೇರಿ ಲಕ್ಷಾಂತರ ಸಾಮಗ್ರಿಗಳು ಬೆಂಕಿಗೆ ಆಹುತಿ
ಬೋರಗಾಂವದ ಟೆಕ್ಸ್ ಟೈಲ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ : ಯಂತ್ರೋಪಕರಣ ಸೇರಿ ಲಕ್ಷಾಂತರ ಸಾಮಗ್ರಿಗಳು ಬೆಂಕಿಗೆ ಆಹುತಿ ಯುವ ಭಾರತ ಸುದ್ದಿ ಬೆಳಗಾವಿ : ನಿಪ್ಪಾಣಿ ತಾಲೂಕಿನ ಬೋರಗಾಂವ ಪಟ್ಟಣದ ಟೆಕ್ಸ್ ಟೈಲ್ ಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಯಂತ್ರೋಪಕರಣಗಳು ಮತ್ತು ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಸಂಭವಿಸಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ. ಫೆ.25ರoದು ಬೆಳಗಿನ ಜಾವ 4 …
Read More »ಪ್ರಧಾನಿ ಮೋದಿ ಬೆಳಗಾವಿ ಕಾರ್ಯಕ್ರಮ ಹಬ್ಬವಾಗಲಿ
ಪ್ರಧಾನಿ ಮೋದಿ ಬೆಳಗಾವಿ ಕಾರ್ಯಕ್ರಮ ಹಬ್ಬವಾಗಲಿ ಯುವ ಭಾರತ ಸುದ್ದಿ ಬೆಳಗಾವಿ : ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಜಿಲ್ಲೆಗೆ ಆಗಮಿಸುತ್ತಿರುವುದು ನಮ್ಮೆಲ್ಲರಿಗೂ ಹಬ್ಬವಾಗಬೇಕು. ಕಾರ್ಯಕ್ರಮದ ಯಶಸ್ವಿಗೆ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಶ್ರಮವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅವರು ಮನವಿ ಮಾಡಿಕೊಂಡರು. ಫೆ.27 ರಂದು ಕಾರ್ಯಕ್ರಮ ನಡೆಯಲಿರುವ ಮಾಲಿನಿ ಸಿಟಿ ಮೈದಾನದಲ್ಲಿ ಪೂರ್ವಸಿದ್ಧತೆಯನ್ನು ಪರಿಶೀಲಿಸಿದ ಬಳಿಕ ಅವರು ಮಾತನಾಡಿದರು. ಕೃಷಿ ಸಮ್ಮಾನ ಯೋಜನೆಯ ನಿಧಿ ವರ್ಗಾವಣೆ, ರೈಲ್ವೆ …
Read More »ಸೋಮವಾರ ಬೆಳಗಾವಿಗೆ ಮೋದಿ : ಫರ್ಮಾನ್ ಹೊರಡಿಸಿದ ಪೊಲೀಸರು
ಸೋಮವಾರ ಬೆಳಗಾವಿಗೆ ಮೋದಿ : ಫರ್ಮಾನ್ ಹೊರಡಿಸಿದ ಪೊಲೀಸರು ಯುವ ಭಾರತ ಸುದ್ದಿ ಬೆಳಗಾವಿ : ಪ್ರಧಾನಿ ನರೇಂದ್ರ ಮೋದಿ ಸೋಮವಾರ ಕುಂದಾನಗರಿ ಬೆಳಗಾವಿಗೆ ಆಗಮಿಸುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಬಿಜೆಪಿ ಮೋದಿ ಕಾರ್ಯಕ್ರಮ ಯಶಸ್ಸಿಗೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಫೆ.27 ರಂದು ಬೆಳಗಾವಿಗೆ ಆಗಮಿಸುತ್ತಿದ್ದು ಭಾರೀ ರೋಡ್ ಶೋ ನಡೆಸಲಿದ್ದಾರೆ. ರೋಡ್ ಶೋಗೆ ಅಗತ್ಯ ಸಿದ್ದತೆ ಮಾಡಿಕೊಂಡಿರುವ ಜಿಲ್ಲಾಡಳಿತ ಇದೀಗ ಪೊಲೀಸರ ಮೂಲಕ ಕಟ್ಟುನಿಟ್ಟಿನ ಸೂಚನೆ ರವಾನಿಸುತ್ತಿದೆ. ಮಾರ್ಗ ಮಧ್ಯೆ …
Read More »ಶ್ರೀ ಜ್ಞಾನೇಶ್ವರ ಮಾವುಲಿ ಪುಣ್ಯಸ್ಮರಣೆ
ಶ್ರೀ ಜ್ಞಾನೇಶ್ವರ ಮಾವುಲಿ ಪುಣ್ಯಸ್ಮರಣೆ ಯುವ ಭಾರತ ಸುದ್ದಿ ಬೆಳಗಾವಿ : ಜೀವನ ವಿದ್ಯಾ ಮಿಶನ್ ಮುಂಬಯಿ ಇವರ ಆಶ್ರಯದಲ್ಲಿ ಫೆ.27 ಮತ್ತು 28 ರಂದು ಬೆಳಗಾವಿಯ ಧರ್ಮವೀರ ಸಂಭಾಜಿ ಮಹಾರಾಜ ಉದ್ಯಾನದಲ್ಲಿ 54 ನೇ ಸಂತಶ್ರೇಷ್ಠ ಶ್ರೀ ಜ್ಞಾನೇಶ್ವರ ಮಾವುಲಿ ಪುಣ್ಯಸ್ಮರಣೆ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರಬೋಧಕ ಪ್ರಹ್ಲಾದ ವಾಮನರಾವ್ ಪೈ ಅವರು ಪ್ರತಿಯೊಂದು ಕೃತಿಯೂ ರಾಷ್ಟ್ರಹಿತದ್ದು, ವಿಶ್ವಶಾಂತಿಯದು ಎನ್ನುವ ವಿಷಯವಾಗಿ ಮಾತನಾಡಲಿದ್ದಾರೆ. ಸಂಜೆ 5 ರಿಂದ 8 ಗಂಟೆಯವರೆಗೆ …
Read More »