ಬಂಧಿತ ಸಚಿವ ಸೆಂಥಿಲ್ ಬಾಲಾಜಿಯನ್ನು ಸಚಿವ ಸ್ಥಾನದಿಂದ ವಜಾಗೊಳಿಸಿದ ತಮಿಳುನಾಡು ರಾಜ್ಯಪಾಲ ಚೆನ್ನೈ: ಬಂಧಿತ ವಿದ್ಯುತ್ ಸಚಿವ ವಿ. ಸೆಂಥಿಲ್ ಬಾಲಾಜಿ ಅವರನ್ನು ತಮಿಳುನಾಡು ರಾಜ್ಯಪಾಲ ಆರ್.ಎನ್. ರವಿ ಗುರುವಾರ ರಾಜ್ಯ ಸಚಿವ ಸಂಪುಟದಿಂದ ವಜಾಗೊಳಿಸಿದ್ದಾರೆ. ಸಚಿವ ಸೆಂಥಿಲ್ ಬಾಲಾಜಿ ಅವರು ಉದ್ಯೋಗಕ್ಕಾಗಿ ಹಣ ತೆಗೆದುಕೊಳ್ಳುವುದು ಮತ್ತು ಅಕ್ರಮ ಹಣ ವರ್ಗಾವಣೆ ಸೇರಿದಂತೆ ಹಲವಾರು ಭ್ರಷ್ಟಾಚಾರದ ಪ್ರಕರಣಗಳಲ್ಲಿ ಗಂಭೀರ ಕ್ರಿಮಿನಲ್ ಮೊಕದ್ದಮೆಗಳನ್ನು ಎದುರಿಸುತ್ತಿದ್ದಾರೆ. ಸಚಿವ ಸ್ಥಾನವನ್ನು ದುರುಪಯೋಗಪಡಿಸಿಕೊಂಡು ತನಿಖೆಯ ಮೇಲೆ …
Read More »ವಿಶ್ವ ವಿದ್ಯಾಲಯಗಳು ಜ್ಞಾನದಾಹವಾಗಬೇಕು: ಎಲ್. ಹನುಮಂತಯ್ಯ
ವಿಶ್ವ ವಿದ್ಯಾಲಯಗಳು ಜ್ಞಾನದಾಹವಾಗಬೇಕು: ಎಲ್. ಹನುಮಂತಯ್ಯ ಯುವ ಭಾರತ ಸುದ್ದಿ ಬೆಳಗಾವಿ : ಸಮಕಾಲೀನ ಸಂದರ್ಭದಲ್ಲಿ ಬಹುತೇಕ ವಿಶ್ವ ವಿದ್ಯಾಲಯಗಳ ಪ್ರಸಾರಾಂಗಗಳು ಜ್ಞಾನ ಪ್ರಸರಣ ಕಾರ್ಯವನ್ನು ಮರೆತು ನಿಷ್ಕ್ರಿಯವಾಗಿವೆ. ಇಂತಹ ಸಂದರ್ಭದಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಸಾರಾಂಗ ಜ್ಞಾನವನ್ನು ಬಿತ್ತರಿಸುವ ಮಹತ್ತರ ಕಾರ್ಯದಲ್ಲಿ ಕ್ರಿಯಾಶೀಲವಾಗುವುದರೊಂದಿಗೆ ಮತ್ತೆ ಗತ ವೈಭವಕ್ಕೆ ಕರೆದೊಯ್ಯುತ್ತಿದೆ ಎಂದು ರಾಜ್ಯಸಭಾ ಸದಸ್ಯ ಎಲ್. ಹನುಮಂತಯ್ಯ ಹೇಳಿದರು. ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಪ್ರಸಾರಾಂಗ ಮತ್ತು ರಾಣಿ ಚನ್ನಮ್ಮ ಅಧ್ಯಯನ …
Read More »ಆದಿಪುರುಷ ಸಿನಿಮಾ ಕುರಿತು ನ್ಯಾಯಾಲಯ ಸಿಡಿಮಿಡಿ
ಆದಿಪುರುಷ ಸಿನಿಮಾ ಕುರಿತು ನ್ಯಾಯಾಲಯ ಸಿಡಿಮಿಡಿ ದೆಹಲಿ : ಆದಿಪುರುಷ ಸಿನಿಮಾವನ್ನು ನಿಷೇಧಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳ ವಿಚಾರಣೆ ನಡೆಸಿದ ಅಲಹಾಬಾದ್ ಹೈಕೋರ್ಟ್ ಬುಧವಾರ ಸಿನಿಮಾ ನಿರ್ಮಾಪಕರು ಧಾರ್ಮಿಕ ಪಠ್ಯಗಳಿಂದ ದೂರವಿರಬೇಕು ಮತ್ತು ಅವುಗಳ ಬಗ್ಗೆ ಸಿನಿಮಾ ಮಾಡಬಾರದು ಎಂದು ಅಭಿಪ್ರಾಯಪಟ್ಟಿದೆ. ನಿಷೇಧವನ್ನು ಕೋರಿ ಸಲ್ಲಿಸಿದ ಮನವಿಗಳಿಗೆ ಪ್ರತಿಕ್ರಿಯೆಯಾಗಿ ವೈಯಕ್ತಿಕ ಅಫಿಡವಿಟ್ಗಳನ್ನು ಸಲ್ಲಿಸುವಂತೆ ನ್ಯಾಯಾಲಯವು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಮತ್ತು ಸೆಂಟ್ರಲ್ ಬೋರ್ಡ್ ಆಫ್ ಫಿಲ್ಮ್ ಸರ್ಟಿಫಿಕೇಶನ್ಗೆ (ಸಿಬಿಎಫ್ಸಿ) …
Read More »ಆಂಧ್ರಪ್ರದೇಶದಲ್ಲಿ 1000 ವರ್ಷ ಹಳೆಯ ಕನ್ನಡ ಶಿಲ್ಪ ಪತ್ತೆ
ಆಂಧ್ರಪ್ರದೇಶದಲ್ಲಿ 1000 ವರ್ಷ ಹಳೆಯ ಕನ್ನಡ ಶಿಲ್ಪ ಪತ್ತೆ ಹೈದರಾಬಾದ್ : ಹೈದರಾಬಾದ್ ಹೊರವಲಯದ ಹಳ್ಳಿಯೊಂದರಲ್ಲಿ ಒಂಬತ್ತು- ಹತ್ತನೇ ಶತಮಾನದ ಅಸ್ತಿತ್ವ ತೋರಿಸಿರುವ ಜೈನ ತೀರ್ಥಂಕರ ಶಿಲ್ಪಗಳು ಮತ್ತು ಕನ್ನಡ ಶಾಸನ ಹೊಂದಿರುವ ಎರಡು ಚೌಕಾಕಾರದ ಕಂಬಗಳು ಇತ್ತೀಚಿಗೆ ಪತ್ತೆಯಾಗಿದೆ. ಪಿ. ಶ್ರೀನಾಥ ರೆಡ್ಡಿ ಅವರು ರಂಗಾರೆಡ್ಡಿ ಜಿಲ್ಲೆಯ ಮೊಯಿನಾಬಾದ್ ಮಂಡಲದ ಎನಿಕೆ ಪಲ್ಲಿ ಗ್ರಾಮದಲ್ಲಿ ಎರಡು ಕಂಬಗಳ ಉಪಸ್ಥಿತಿ ಬಗ್ಗೆ ಮಾಹಿತಿ ನೀಡಿದ ನಂತರ ಪುರಾತತ್ವ ಶಾಸ್ತ್ರಜ್ಞ ಇ. …
Read More »ಖಾಸಗಿ ಬಸ್ ಪಲ್ಟಿ : ಬೆಳಗಾವಿಯ ಚಾಲಕ ಸಾವು
ಖಾಸಗಿ ಬಸ್ ಪಲ್ಟಿ : ಬೆಳಗಾವಿಯ ಚಾಲಕ ಸಾವು ಹಾವೇರಿ : ಇಂದು ಬೆಳಗಿನ ಜಾವ ಖಾಸಗಿ ಬಸ್ ಪಲ್ಟಿಯಾಗಿ ಚಾಲಕ ಸೇರಿ ಇಬ್ಬರು ಮೃತಪಟ್ಟ ಘಟನೆ ಹಾವೇರಿ ಜಿಲ್ಲೆ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಗ್ರಾಮದ ಬಳಿ ನಡೆದಿದೆ. ಬೆಂಗಳೂರಿನಿಂದ ಮೀರಜ್ ಕಡೆ ತೆರಳುತ್ತಿದ್ದ ಖಾಸಗಿ ಬಸ್ ಮೋಟೆಬೆನ್ನೂರು ಬಳಿ ರಾಷ್ಟ್ರೀಯ ಹೆದ್ದಾರಿ 48 ರಲ್ಲಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರಿಗೆ ಡಿಕ್ಕಿ ಹೊಡೆದು ಬಸ್ ಪಲ್ಟಿಯಾಗಿದೆ. ಬೆಳಗಾವಿ ಮೂಲದ …
Read More »ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ
ಕೇಂದ್ರ ಸಚಿವ ಸಂಪುಟ ವಿಸ್ತರಣೆ ಸಾಧ್ಯತೆ ದೆಹಲಿ : ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಆಗುವ ಸಾಧ್ಯತೆ ಇದೆ. ಈ ಸಂಬಂಧ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗ್ರಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಯಪ್ರಕಾಶ್ ನಡ್ದಾ ಮತ್ತು ಬಿಜೆಪಿ ನಾಯಕರು ಬುಧವಾರ ಮಹತ್ವದ ಸಭೆ ನಡೆಸಿ ಚರ್ಚಿಸಿದ್ದಾರೆ. ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ, ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಸೋಲು …
Read More »ಈ ವರ್ಷದ ಭಗವದ್ಗೀತೆ ಅಭಿಯಾನದ ಕೇಂದ್ರಸ್ಥಾನ ಬೆಳಗಾವಿ – ಸ್ವರ್ಣವಲ್ಲಿ ಶ್ರೀ
ಈ ವರ್ಷದ ಭಗವದ್ಗೀತೆ ಅಭಿಯಾನದ ಕೇಂದ್ರಸ್ಥಾನ ಬೆಳಗಾವಿ – ಸ್ವರ್ಣವಲ್ಲಿ ಶ್ರೀ ಬೆಳಗಾವಿ: ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ವತಿಯಿಂದ ಪ್ರತಿ ವರ್ಷ ನಡೆಸಲಾಗುವ ರಾಜ್ಯಮಟ್ಟದ ಭಗವದ್ಗೀತೆ ಅಭಿಯಾನವನ್ನು ಈ ವರ್ಷ ಬೆಳಗಾವಿಯನ್ನು ಕೇಂದ್ರಸ್ಥಾನವಾಗಿಸಿಕೊಂಡು ನಡೆಸಲಾಗುವುದು ಎಂದು ಸ್ವರ್ಣವಲ್ಲಿ ಮಠಾಧೀಶ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ತಿಳಿಸಿದ್ದಾರೆ. ಮಂಗಳವಾರ ಸಂಜೆ ಬೆಳಗಾವಿಯಲ್ಲಿ ಈ ಕುರಿತು ಪೂರ್ವಭಾವಿ ಸಭೆ ನಡೆಸಿ ಈ ವಿಷಯವನ್ನು ಅವರು ಪ್ರಕಟಿಸಿದರು. ನವೆಂಬರ್ 21ರಿಂದ ಡಿಸೆಂಬರ್ 22ರವರೆಗೆ ಭಗವದ್ಘೀತೆ …
Read More »ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ
ಮೂಡಲಗಿ, ಗೋಕಾಕ ತಾಲೂಕುಗಳನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲು ಶಾಸಕ ಬಾಲಚಂದ್ರ ಜಾರಕಿಹೊಳಿ ಮನವಿ ಮೂಡಲಗಿ : ಮೂಡಲಗಿ ಮತ್ತು ಗೋಕಾಕ ತಾಲೂಕುಗಳಲ್ಲಿ ನಿಗದಿತ ಪ್ರಮಾಣದಲ್ಲಿ ಮಳೆಯಾಗಿ ರೈತರ ಬೆಳೆಗಳು ಸಮೃದ್ಧಿಯಾಗಿ ರೈತನ ಮೊಗದಲ್ಲಿ ಸಂತಸ ಮೂಡುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಮಂಗಳವಾರ ಸಂಜೆ ತಾಲೂಕಿನ ಮಸಗುಪ್ಪಿ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ತೆರಳಿ ದೇವರ ದರ್ಶನ ಪಡೆದ ಅವರು, ಮಳೆಯಾಗಿ ಇಡೀ ನಾಡು ಹಸಿರಿನಿಂದ ಕಂಗೊಳಿಸಲಿ ಎಂದು …
Read More »ರಾಜ್ಯಸಭೆ ಚುನಾವಣೆಗೆ ದಿನ ನಿಗದಿ
ರಾಜ್ಯಸಭೆ ಚುನಾವಣೆಗೆ ದಿನ ನಿಗದಿ ದೆಹಲಿ: ವಿದೇಶಾಂಗ ಸಚಿವ ಎಸ್.ಜೈಶಂಕರ್ ಸೇರಿದಂತೆ ರಾಜ್ಯಸಭೆಯ 10 ಸದಸ್ಯರು ಜುಲೈ, ಆಗಸ್ಟ್ನಲ್ಲಿ ನಿವೃತ್ತಿಯಾಗುತ್ತಿದ್ದು, ಆ ಸ್ಥಾನಗಳಿಗೆ ಜುಲೈ 24ರಂದು ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ಮಂಗಳವಾರ ತಿಳಿಸಿದೆ. ಗೋವಾದಿಂದ ಒಬ್ಬರು, ಗುಜರಾತ್ನಿಂದ ಮೂವರು, ಪಶ್ಚಿಮ ಬಂಗಾಳದಿಂದ ಆರು ಸದಸ್ಯರ ಆಯ್ಕೆಗೆ ಚುನಾವಣೆ ನಡೆಯಲಿದೆ. ಗುಜರಾತ್ನಿಂದ ಆಯ್ಕೆಯಾಗಿದ್ದ ಬಿಜೆಪಿಯ ಜೈಶಂಕರ್, ದಿನೇಶ್ಚಂದ್ರ ಜೆಮಲ್ಭಾಯ್ ಅನವದೀಯ, ಲೋಖಂಡವಾಲಾ ಜುಗಲ್ ಸಿನ್ಹಾ ಮಾಥೂರ್ಜಿ ಹಾಗೂ …
Read More »ಪ್ರತಿಪಕ್ಷ ನಾಯಕನ ಆಯ್ಕೆಗೆ ಕಸರತ್ತು
ಪ್ರತಿಪಕ್ಷ ನಾಯಕನ ಆಯ್ಕೆಗೆ ಕಸರತ್ತು ಬೆಂಗಳೂರು : ಮುಂದಿನ ವಾರ ವಿಧಾನಮಂಡಲದ ಅಧಿವೇಶನ ಆರಂಭವಾಗುತ್ತಿರುವ ಹಿನ್ನೆಲೆಯಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕನ ಆಯ್ಕೆಗೆ ಕೊನೆ ಕ್ಷಣದ ಕಸರತ್ತು ನಡೆದಿದೆ. ಮೂರ್ನಾಲ್ಕು ದಿನಗಳಲ್ಲಿ ಘೋಷಣೆಯಾಗುವ ಸಾಧ್ಯತೆಯಿದ್ದು, ಅಂತಿಮವಾಗಿ ಯಾರ ಹೆಗಲಿಗೆ ಪ್ರತಿಪಕ್ಷದ ನಾಯಕನ ಜವಾಬ್ದಾರಿ ಬೀಳಲಿದೆ ಎಂಬುದು ಸ್ಪಷ್ಟವಾಗಲಿದೆ. ಶಾಸಕಾಂಗ ಪಕ್ಷದ ನಾಯಕ ಮತ್ತು ರಾಜ್ಯಾಧ್ಯಕ್ಷ ಸ್ಥಾನ ಎರಡೂ ಒಂದಕ್ಕೊಂದು ತಳಕು ಹಾಕಿಕೊಂಡಿರುವುದರಿಂದ ಜಾತಿ ಸಮೀಕರಣದ ಲೆಕ್ಕಾಚಾರ ನಡೆಯುತ್ತಿದೆ. ಲಿಂಗಾಯತ, ಒಕ್ಕಲಿಗ …
Read More »