ಬೆಂಗಳೂರು: ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಸ್ಪೀಕರ್ ಯು.ಟಿ.ಖಾದರ್ ಅವರು ದೆಹಲಿಯಲ್ಲಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸಭಾಧ್ಯಕ್ಷರಾಗಿ ಕಾರ್ಯಸಲ್ಲಿಸುವಷ್ಟು ದಿನ ಸದನದ ಘನತೆ, ಗೌರವ ಎತ್ತಿಹಿಡಿದು ಶಾಸಕರ ಹಾಗೂ ರಾಜ್ಯದ ಜನರ ಮನಗೆಲ್ಲಿ ಎಂದು ಸಲಹೆ ನೀಡಿದರು. ಈ ಚಿಕ್ಕ ವಯಸ್ಸಿನಲ್ಲೇ ಸಭಾಧ್ಯಕ್ಷರಾಗಿ ಸೇವೆ ಸಲ್ಲಿಸಲು ಅವಕಾಶ ಸಿಕ್ಕಿರುವುದು ಸುದೈವ. ಕರ್ನಾಟಕ ರಾಜ್ಯದ ಜನರ ಸಂಸ್ಕೃತಿ, ಆಚಾರ ವಿಚಾರದ ಬಗ್ಗೆ …
Read More »ರವಿ ಡಿ.ಚನ್ನಣ್ಣನವರ್ ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ಆಗಿ ವರ್ಗಾವಣೆ
ರವಿ ಡಿ.ಚನ್ನಣ್ಣನವರ್ ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ಆಗಿ ವರ್ಗಾವಣೆ ಬೆಂಗಳೂರು: ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣನವರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ಆಗಿ ವರ್ಗಾವಣೆ ಮಾಡಿ ಗುರುವಾರ ಸರ್ಕಾರ ಆದೇಶಿಸಿದೆ. ಕಿಯೋನಿಕ್ಸ್ ಎಂಡಿ ಆಗಿದ್ದ ರವಿ ಡಿ. ಚನ್ನಣ್ಣನವರ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಡಿಐಜಿಪಿ ವರ್ಗಾವಣೆ ಮಾಡಲಾಗಿದೆ. ಕಳೆದ ಕೆಲವು ದಿನಗಳಲ್ಲಿ ಹತ್ತಾರು ಅಧಿಕಾರಿಗಳನ್ನು ವರ್ಗಾವಣೆ ಮಾಡಲಾಗಿದೆ. ಹಿರಿಯ ಅಧಿಕಾರಿ ಅಲೋಕ್ ಕುಮಾರ್ ಸೇರಿದಂತೆ …
Read More »ರೈತರಿಗೆ ಸಿಹಿ ಸುದ್ದಿ: ಭತ್ತ, ರಾಗಿ, ಜೋಳ, ಮೆಕ್ಕೆಜೋಳ ಬೆಂಬಲ ಬೆಲೆ ಹೆಚ್ಚಳ
ರೈತರಿಗೆ ಸಿಹಿ ಸುದ್ದಿ: ಭತ್ತ, ರಾಗಿ, ಜೋಳ, ಮೆಕ್ಕೆಜೋಳ ಬೆಂಬಲ ಬೆಲೆ ಹೆಚ್ಚಳ ನವದೆಹಲಿ : ಮುಂಗಾರು ಬೆಳೆಗಳ ಕನಿಷ್ಠ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ಒಪ್ಪಿಗೆ ನೀಡಿದೆ. ರಾಗಿ, ಭತ್ತ, ಜೋಳ, ಮೆಕ್ಕೆಜೋಳ, ಶೇಂಗಾ, ಹತ್ತಿ, ತೊಗರಿ, ಉದ್ದು, ಹೆಸರು ಸೇರಿದಂತೆ 15 ಧಾನ್ಯಗಳ ಬೆಂಬಲ ಬೆಲೆ ಹೆಚ್ಚಳಕ್ಕೆ ಕೇಂದ್ರ ಸಂಪುಟ ನಿರ್ಧಾರ ಕೈಗೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ …
Read More »ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆ ಯಾವಾಗ ಜಾರಿ ?
ಗೃಹಜ್ಯೋತಿ, ಗೃಹಲಕ್ಷ್ಮೀ ಯೋಜನೆ ಯಾವಾಗ ಜಾರಿ ? ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳಲ್ಲಿ ಗೃಹಜ್ಯೋತಿ ಯೋಜನೆ ಆಗಸ್ಟ್ 1 ರಂದು ಹಾಗೂ ಗೃಹಲಕ್ಷ್ಮಿ ಯೋಜನೆಗೆ ಆಗಸ್ಟ್ 17- 18 ರಂದು ಚಾಲನೆ ನೀಡಲು ತಯಾರಿ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಈ ಯೋಜನೆಗಳ ಕುರಿತು ಸರ್ಕಾರದ ಹಿರಿಯ ಅಧಿಕಾರಿಗಳ ಜೊತೆ ಗುರುವಾರ ಅವರು ಚರ್ಚಿಸಿದರು. ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಅತ್ಯಂತ …
Read More »ಕೊನೆಗೂ ಕೇರಳ ಪ್ರವೇಶಿಸಿದ ಮುಂಗಾರು
ಕೊನೆಗೂ ಕೇರಳ ಪ್ರವೇಶಿಸಿದ ಮುಂಗಾರು ಯುವ ಭಾರತ ಸುದ್ದಿ ನವದೆಹಲಿ: ನೈರುತ್ಯ ಮುಂಗಾರು ಗುರುವಾರ ಕೇರಳ ಪ್ರವೇಶಿಸಿದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ವಾಡಿಕೆಗಿಂತ ಒಂದು ವಾರ ತಡವಾಗಿ ಪ್ರವೇಶಿಸಿದ ಮುಂಗಾರು ಸಾಮಾನ್ಯವಾಗಿರಲಿದೆ. ’ಬಿಪೋರ್ಜಾಯ್’ ಚಂಡಮಾರುತ ನೈರುತ್ಯ ಮುಂಗಾರಿನ ಮೇಲೆ ಪ್ರಭಾವ ಬೀರಿದ್ದು, ಕೇರಳದಲ್ಲಿ ಇದರ ಪ್ರಭಾವ ಸೌಮ್ಯವಾಗಿದೆ. ಅರಬ್ಬಿ ಸಮುದ್ರದ ದಕ್ಷಿಣ ಭಾಗ, ಕೇಂದ್ರ, ಲಕ್ಷ್ಮದ್ವೀಪದ ಸಂಪೂರ್ಣ ಪ್ರದೇಶ, ಕೇರಳದ ಬಹುತೇಕ ಭಾಗ, ದಕ್ಷಿಣ ತಮಿಳುನಾಡಿನ ಭಾಗಗಳು, …
Read More »ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ : 2000 ರೂ. ಪಡೆಯಲು ಯಾವ್ಯಾವ ದಾಖಲೆ ಕೊಡಬೇಕು ? ಇಲ್ಲಿದೆ ಮಾಹಿತಿ
ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆ ಬಿಡುಗಡೆ : 2000 ರೂ. ಪಡೆಯಲು ಯಾವ್ಯಾವ ದಾಖಲೆ ಕೊಡಬೇಕು ? ಇಲ್ಲಿದೆ ಮಾಹಿತಿ ಯುವ ಭಾರತ ಸುದ್ದಿ ಬೆಂಗಳೂರು: ರಾಜ್ಯ ಸರ್ಕಾರ ಘೋಷಿಸಿರುವ ಗ್ಯಾರಂಟಿ ಯೋಜನೆಗಳ ಪೈಕಿ ಗೃಹಲಕ್ಷ್ಮೀ ಯೋಜನೆಯ ಅರ್ಜಿ ನಮೂನೆಯನ್ನು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಬಿಡಗಡೆ ಮಾಡಿದೆ. ಭೌತಿಕ ಅರ್ಜಿ ಸಲ್ಲಿಕೆ ಮಾಡುವುದರ ಬಗ್ಗೆ ಅರ್ಜಿ ನಮೂನೆಯನ್ನು ಬಿಡುಗಡೆ ಮಾಡಿದ್ದು, ಅರ್ಜಿ ನಮೂನೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ …
Read More »2.14 ಕೋಟಿ ಗ್ರಾಹಕರಿಗೆ ಉಚಿತ ವಿದ್ಯುತ್ ಲಾಭ : ಜೂ.15ರಿಂದ ಅರ್ಜಿ ಸಲ್ಲಿಕೆ ಆರಂಭ
2.14 ಕೋಟಿ ಗ್ರಾಹಕರಿಗೆ ಉಚಿತ ವಿದ್ಯುತ್ ಲಾಭ : ಜೂ.15ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ವಿಧಾನಸಭೆ ಚುನಾವಣೆ ವೇಳೆ ಭರವಸೆ ನೀಡಿದ್ದ ಐದು ಗ್ಯಾರಂಟಿಗಳಲ್ಲಿ ಒಂದಾದ ಗೃಹಜ್ಯೋತಿಯನ್ನು ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಜುಲೈ 1ರಂದು ಜಾರಿ ಮಾಡುವುದಾಗಿ ಈಗಾಗಲೇ ಪ್ರಕಟಿಸಿದೆ. ಗೃಹಜ್ಯೋತಿ ಯೋಜನೆ ಕುರಿತು ಸಾರ್ವಜನಿಕ ವಲಯಗಳಲ್ಲಿ ಹಲವು ಅನುಮಾನಗಳಿದ್ದು ಈ ಕುರಿತಾಗಿ ಇಂಧನ ಸಚಿವ ಕೆ.ಜೆ. ಜಾರ್ಜ್ ಗೊಂದಲಗಳನ್ನು ದೂರ ಮಾಡುವ ಪ್ರಯತ್ನ ಮಾಡಿದ್ದಾರೆ. ರಾಜ್ಯದ …
Read More »ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾಗಿ ಸೋಮಶೇಖರ ನೇಮಕ
ಕಾಂಗ್ರೆಸ್ ಹಿಂದುಳಿದ ವರ್ಗಗಳ ಜಿಲ್ಲಾಧ್ಯಕ್ಷರಾಗಿ ಸೋಮಶೇಖರ ನೇಮಕ ಬೆಳಗಾವಿ : ಕಾಂಗ್ರೆಸ್ ಪಕ್ಷದ ಹಿಂದುಳಿದ ವರ್ಗಗಳ ಬೆಳಗಾವಿ ಮಹಾನಗರ ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ಸೋಮಶೇಖರ ಹಿಟ್ಟಣಗಿ ಅವರನ್ನು ನೇಮಕ ಮಾಡಿ ಪಕ್ಷದ ಹಿಂದುಳಿದ ವರ್ಗಗಳ ರಾಜ್ಯಾಧ್ಯಕ್ಷ ಮಧು ಬಂಗಾರಪ್ಪ ಆದೇಶ ಹೊರಡಿಸಿದ್ದಾರೆ.
Read More »ಪಠ್ಯ ಪರಿಷ್ಕರಣೆಗೆ ತಾತ್ಕಾಲಿಕ ಸಮಿತಿ ರಚಿಸಿ ಲೋಪದೋಷ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ
ಪಠ್ಯ ಪರಿಷ್ಕರಣೆಗೆ ತಾತ್ಕಾಲಿಕ ಸಮಿತಿ ರಚಿಸಿ ಲೋಪದೋಷ ಸರಿಪಡಿಸಲು ಸಿಎಂ ಸಿದ್ದರಾಮಯ್ಯ ಸೂಚನೆ ಬೆಂಗಳೂರು : ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಪಠ್ಯ ಪರಿಷ್ಕರಣೆ ವಿಚಾರವಾಗಿ ಉಂಟಾಗಿದ್ದ ಗೊಂದಲ ಬಗೆಹರಿಸುವಂತೆ ಬರಗೂರು ರಾಮಚಂದ್ರಪ್ಪ ನೇತೃತ್ವದಲ್ಲಿ ತಾತ್ಕಾಲಿಕ ಸಮಿತಿ ರಚನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ವರದಿಯಾಗಿದೆ. ವರದಿ ಪ್ರಕಾರ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಿಕ್ಷಣ ತಜ್ಞ ನಿರಂಜನ ಆರಾಧ್ಯ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಸಾಹಿತಿಗಳ …
Read More »ಗ್ಯಾರಂಟಿಗಳಿಗೆ ಎಷ್ಟು ಹಣ : ಸಿಎಂ ಟ್ವಿಟ್
ಗ್ಯಾರಂಟಿಗಳಿಗೆ ಎಷ್ಟು ಹಣ : ಸಿಎಂ ಟ್ವಿಟ್ ಬೆಂಗಳೂರು: ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ ಕ್ಯಾಂಟೀನ್ ಮೊದಲಾದ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿದ್ದೆವು. ಈಗ 5 ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸುತ್ತಿದ್ದೇವೆ. ಇದಕ್ಕೆ ಸುಮಾರು ₹59,000 ಕೋಟಿ ವಾರ್ಷಿಕ ವೆಚ್ಚವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ನಲ್ಲಿ ತಿಳಿಸಿದ್ದಾರೆ. ನಾಡಿನ ಎಲ್ಲಾ ವರ್ಗಗಳ ಜನರ ಕಲ್ಯಾಣ ನಮಗೆ ಮುಖ್ಯ ಎಂದು ಅವರು ತಿಳಿಸಿದ್ದಾರೆ. ಹಿಂದೆ ನಾವು ಅಧಿಕಾರದಲ್ಲಿದ್ದಾಗ ಅನ್ನಭಾಗ್ಯ, ಕ್ಷೀರಭಾಗ್ಯ, ಇಂದಿರಾ …
Read More »