ಸೊಗಲದಲ್ಲಿ ಪಕ್ಷಿಧಾಮ ಪರಿಶೀಲನೆ: ಈಶ್ವರ ಖಂಡ್ರೆ ಬೆಂಗಳೂರು : ಬೆಳಗಾವಿ ಜಿಲ್ಲೆಯ ಪವಿತ್ರ ಪುಣ್ಯ ಕ್ಷೇತ್ರ ಸೊಗಲ ಸೋಮೇಶ್ವರ ದೇವಸ್ಥಾನದ ಬಳಿ ಇರುವ ಕಿರು ಪ್ರಾಣಿ ಸಂಗ್ರಹಾಲಯ ಜಿಂಕೆವನಕ್ಕೆ ಪುನಶ್ಚೇತನ ನೀಡುವ ಇಲ್ಲವೇ ಅದೇ ಜಾಗದಲ್ಲಿ ಪಕ್ಷಿಧಾಮ ನಿರ್ಮಿಸುವ ಕುರಿತಂತೆ ಪರಿಶೀಲಿಸುವ ಭರವಸೆಯನ್ನು ಅರಣ್ಯ, ವನ್ಯಜೀವಿ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ನೀಡಿದ್ದಾರೆ. ಬೆಂಗಳೂರಿನ ತಮ್ಮ ಕಚೇರಿಯಲ್ಲಿಂದು ಭೇಟಿಯಾಗಿದ್ದ ಬೈಲಹೊಂಗಲ ಶಾಸಕ ಮಹಾಂತೇಶ ಶಿವಾನಂದ ಕೌಜಲಗಿ ನೇತೃತ್ವದ ನಿಯೋಗದೊಂದಿಗೆ …
Read More »ಬಸವೋತ್ತರ ಶರಣರ ಕೊಡುಗೆ ಅನನ್ಯ : ಡಾ. ಬಿ.ಟಿ.ಚೇತನ
ಬಸವೋತ್ತರ ಶರಣರ ಕೊಡುಗೆ ಅನನ್ಯ : ಡಾ. ಬಿ.ಟಿ.ಚೇತನ ಬೆಳಗಾವಿ : 12 ನೇ ಶತಮಾನದಲ್ಲಿ ಇಡೀ ಭಾರತ ಖಂಡದಲ್ಲಿಯೇ ಅಪ್ರತಿಮ ಕ್ರಾಂತಿಗೈದ ಬಸವಾದಿ ಶಿವಶರಣರ ತತ್ವಾದರ್ಶಗಳು ಈ 21 ನೇ ಶತಮಾನದಲ್ಲಿಯೂ ಪ್ರಸ್ತುತವಾಗಿವೆ. ಅವರ ತತ್ವಗಳನ್ನು ಇಂದಿನ ಸಮಾಜಕ್ಕೆ ಮುಟ್ಟಿಸುವಲ್ಲಿ ಅನೇಕ ಶರಣರ ತ್ಯಾಗ ಪರಿಶ್ರಮವಿದೆ ಎನ್ನುವುದರಲ್ಲಿ ಎರಡು ಮಾತಿಲ್ಲ ಎಂದು ಕಣಕುಂಬಿಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ಬಿ.ಟಿ.ಚೇತನ ಹೇಳಿದರು. ಬೆಳಗಾವಿ ಜಿಲ್ಲಾ ಘಟಕದ ಅಖಿಲ ಭಾರತ …
Read More »ಬೆಳಗಾವಿ; ಜೈನ ಮುನಿ ಕೊಲೆ ಪ್ರಕರಣದ ತನಿಖೆ ಸಿಐಡಿಗೆ
ಬೆಳಗಾವಿ; ಜೈನ ಮುನಿ ಕೊಲೆ ಪ್ರಕರಣದ ತನಿಖೆ ಸಿಐಡಿಗೆ ಬೆಂಗಳೂರು : ಕರ್ನಾಟಕದಲ್ಲಿ ಜೈನ ಮುನಿ ಕಾಮಕುಮಾರ ನಂದಿಮಹಾರಾಜ ಭೀಕರ ಹತ್ಯೆ ಪ್ರಕರಣದ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಕರ್ನಾಟಕ ಸರ್ಕಾರ ಈ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸುವುದಾಗಿ ಘೋಷಣೆ ಮಾಡಿದೆ. ಬುಧವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸಭೆ ಕಲಾಪದಲ್ಲಿ ಈ ಕುರಿತು ಘೋಷಣೆ ಮಾಡಿದರು. ಜೈನ ಮುನಿಗಳ ಹತ್ಯೆ ಪ್ರಕರಣದ ತನಿಖೆಯನ್ನು ಸಿಐಡಿ ತನಿಖೆಗೆ ವಹಿಸಲಾಗುತ್ತದೆ ಎಂದರು. ಬೆಳಗಾವಿ …
Read More »ಬಿಜೆಪಿಯ 10 ಶಾಸಕರ ಅಮಾನತು
ಬಿಜೆಪಿಯ 10 ಶಾಸಕರ ಅಮಾನತು ಬೆಂಗಳೂರು: ವಿಧಾನಸಭೆ ಕಲಾಪದ ವೇಳೆ ಅತಿರೇಕದ ವರ್ತನೆ ತೋರಿದ ಹಿನ್ನೆಲೆಯಲ್ಲಿ ಬಿಜೆಪಿಯ ಹತ್ತು ಮಂದಿ ಶಾಸಕರನ್ನು ಬುಧವಾರ ಅಮಾನತು ಮಾಡಲಾಗಿದೆ. ಬಿಜೆಪಿಯ 10 ಶಾಸಕರನ್ನು ಅಧಿವೇಶನ ಮುಗಿಯುವವರೆಗೂ ಸ್ಪೀಕರ್ ಯು.ಟಿ. ಖಾದರ್ ಅಮಾನತು ಮಾಡಿದ್ದಾರೆ. ಬಿಜೆಪಿ ಶಾಸಕರಾದ ಆರ್. ಅಶೋಕ, ಅಶ್ವತ್ಥನಾರಾಯಣ, ಅರವಿಂದ್ ಬೆಲ್ಲದ, ಯಶಪಾಲ ಸುವರ್ಣ, ಅರಗ ಜ್ಞಾನೇಂದ್ರ, ವೇದವ್ಯಾಸ ಕಾಮತ್, ಧೀರಜ್ ಮುನಿರಾಜು, ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ ಹಾಗೂ ಸುನಿಲಕುಮಾರ …
Read More »ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಿ ಸರ್ಕಾರ ಆದೇಶ
ಮುಜರಾಯಿ ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಿ ಸರ್ಕಾರ ಆದೇಶ ಬೆಂಗಳೂರು : ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯಲ್ಲಿ ಬರುವ ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತು ಧಾರ್ಮಿಕ ಮತ್ತು ದತ್ತಿ ಇಲಾಖೆ ಆದೇಶ ಹೊರಡಿಸಿದೆ. ಈ ಹಿಂದೆ ತಮಿಳುನಾಡಿನಲ್ಲಿ ದೇವಸ್ಥಾನಗಳಲ್ಲಿ ಮೊಬೈಲ್ ಬಳಕೆ ಮಾಡುವುದನ್ನು ನಿಷೇಧಿಸಲಾಗಿತ್ತು. ಇದೀಗ ಕರ್ನಾಟಕದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳ ಒಳಗಡೆ ಮೊಬೈಲ್ ಫೋನ್ ಬಳಕೆಗೆ ನಿಷೇಧ ಹೇರಲಾಗಿದೆ. ಇತ್ತೀಚಿನ …
Read More »ಓಮೆನ್ ಚಾಂಡಿ ನಿಧನಕ್ಕೆ ಮುಖ್ಯಮಂತ್ರಿ ಶೋಕ
ಓಮೆನ್ ಚಾಂಡಿ ನಿಧನಕ್ಕೆ ಮುಖ್ಯಮಂತ್ರಿ ಶೋಕ ಬೆಂಗಳೂರು : ಹಿರಿಯ ರಾಜಕೀಯ ಮುತ್ಸದ್ದಿ, ಕೇರಳ ರಾಜ್ಯದ ಮಾಜಿ ಮುಖ್ಯಮಂತ್ರಿ ಓಮೆನ್ ಚಾಂಡಿ ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. ನನಗೆ ಅತ್ಯಂತ ಆತ್ಮೀಯರಾಗಿದ್ದ ಓಮೆನ್ ಚಾಂಡಿಯವರ ನಿಧನದ ಸುದ್ದಿ ಆಘಾತಕಾರಿ. ಕೇರಳ ರಾಜ್ಯವನ್ನು ಮಾನವ ಅಭಿವೃದ್ಧಿಯ ಸೂಚ್ಯಂಕಗಳಲ್ಲಿ ಉನ್ನತ ಸ್ಥಾನದಲ್ಲಿ ಇರಿಸಲು ಕಾರಣರಾದ ಮುಖ್ಯಮಂತ್ರಿಗಳಲ್ಲಿ ಓಮನ್ ಚಾಂಡಿ ಕೂಡ ಒಬ್ಬರಾಗಿದ್ದರು. ಎರಡು ಬಾರಿ ಕೇರಳ ರಾಜ್ಯದ …
Read More »ಖಾನಾಪುರ ತಾಲೂಕಿನ ಸಮಗ್ರ ಅಭಿವೃದ್ದಿಗೆ ಸರಕಾರದ ಮೇಲೆ ಒತ್ತಡ ಹೇರಿದ ಶಾಸಕ ವಿಠ್ಠಲ ಹಲಗೇಕರ
ಖಾನಾಪುರ ತಾಲೂಕಿನ ಸಮಗ್ರ ಅಭಿವೃದ್ದಿಗೆ ಸರಕಾರದ ಮೇಲೆ ಒತ್ತಡ ಹೇರಿದ ಶಾಸಕ ವಿಠ್ಠಲ ಹಲಗೇಕರ ಬೆಳಗಾವಿ : ಖಾನಾಪುರ ಬಿಜೆಪಿ ಶಾಸಕ ವಿಠ್ಠಲ ಹಲಗೇಕರ ಅವರು ಸೋಮವಾರ ವಿಧಾನಸಭೆಯಲ್ಲಿ ಖಾನಾಪುರ ತಾಲೂಕಿನ ಜನತೆ ಎದುರಿಸುತ್ತಿರುವ ಸಮಗ್ರ ಸಮಸ್ಯೆಗಳನ್ನು ವಿಧಾನಸಭೆಯಲ್ಲಿ ಅನಾವರಣಗೊಳಿಸಿ ಗಮನ ಸೆಳೆದರು. ಮೊದಲಿಗೆ ಅವರು ಅಪ್ರತಿಮ ಸ್ವಾತಂತ್ರ್ಯ ಸೇನಾನಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನಿಗೆ ಬ್ರಿಟಿಷರು ಗಲ್ಲು ಶಿಕ್ಷೆ ವಿಧಿಸಿದ ನಂದಗಡ ವೀರಭೂಮಿಯನ್ನು ರಾಜ್ಯ ಸರಕಾರ ಈ ಕೂಡಲೇ ಅಭಿವೃದ್ಧಿಗೊಳಿಸುವಂತೆ …
Read More »ಗೃಹ ಜ್ಯೋತಿ, ಗೃಹ ಲಕ್ಷ್ಮೀ ನಕಲಿ ಆಪ್ ಗಳ ಹಾವಳಿ
ಗೃಹ ಜ್ಯೋತಿ, ಗೃಹ ಲಕ್ಷ್ಮೀ ನಕಲಿ ಆಪ್ ಗಳ ಹಾವಳಿ ಬೆಳಗಾವಿ : ರಾಜ್ಯ ಸರ್ಕಾರದ ಗೃಹಲಕ್ಷ್ಮೀ, ಮತ್ತು ಗೃಹ ಜ್ಯೋತಿ ಯೋಜನೆಗಳ ಹೆಸರಲ್ಲಿ ನಕಲಿ ಆಪ್ ಗಳ ಮೂಲಕ ಸೈಬರ್ ಕಳ್ಳರು ಸಾರ್ವಜನಿಕರಿಗೆ ಮೋಸ ಮಾಡುತ್ತಿದ್ದಾರೆ. ಈ ಯೋಜನೆಗಳ ಬಗ್ಗೆ ಪ್ಲೇ ಸ್ಟೋರ್ ಮತ್ತು ಇತರ ಸಾರ್ವಜನಿಕ ಜಾಲತಾಣಗಳಲ್ಲಿ ನಕಲಿ ಆಪ್ ಗಳು ಕಾರ್ಯ ನಿರ್ವಹಿಸುತ್ತವೆ. ಅವುಗಳನ್ನು ಬಳಸಿದರೆ ಜನರ ವೈಯಕ್ತಿಕ ಮಾಹಿತಿ ಕಲೆ ಹಾಕಿ ಅದನ್ನು ದುರ್ಬಳಕೆ …
Read More »ಪತ್ರಿಕೋದ್ಯಮ ಮತ್ತು ಸಂವಿಧಾನದ ಆಶಯಗಳ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಸದಾ ಸಿದ್ದ: ಕೆ.ವಿ.ಪ್ರಭಾಕರ್
ಪತ್ರಿಕೋದ್ಯಮ ಮತ್ತು ಸಂವಿಧಾನದ ಆಶಯಗಳ ರಕ್ಷಣೆಗೆ ಸಿಎಂ ಸಿದ್ದರಾಮಯ್ಯ ಸದಾ ಸಿದ್ದ: ಕೆ.ವಿ.ಪ್ರಭಾಕರ್ ಹಾಸನ : ಸಂವಿಧಾನದ ಆಶಯಗಳು ಮತ್ತು ಪತ್ರಿಕೋದ್ಯಮದ ಆಶಯಗಳು ಒಂದೇ ಆಗಿವೆ. ಹಾಗೆಯೇ ಸಂವಿಧಾನದ ಮತ್ತು ಪತ್ರಿಕೋದ್ಯಮದ ಆಶಯಗಳೇ ಸಿದ್ದರಾಮಯ್ಯ ಅವರ ಆಶಯಗಳಾಗಿವೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಅಭಿಪ್ರಾಯ ಪಟ್ಟರು. ಹಾಸನ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಹಮ್ಮಿಕೊಂಡಿದ್ದ ಮಾಧ್ಯಮ ದಿನಾಚರಣೆಯಲ್ಲಿ ಪ್ರಧಾನ ಉಪನ್ಯಾಸ ನೀಡಿ ಅವರು ಮಾತನಾಡಿದರು. ಸಂವಿಧಾನದ ಆಶಯಗಳಿಗೆ …
Read More »ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ವಾತಾವರಣ ಇದೆ : ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಕೈಗಾರಿಕಾ ಸ್ನೇಹಿ ವಾತಾವರಣ ಇದೆ : ಸಿಎಂ ಸಿದ್ದರಾಮಯ್ಯ ಬೆಂಗಳೂರು: ದೇವನಹಳ್ಳಿಯ ಐಟಿಐಆರ್ ವಲಯದಲ್ಲಿ ಫಾಕ್ಸ್ ಕಾನ್ ಕಂಪನಿಯು ಸ್ಥಾಪಿಸಲು ಉದ್ದೇಶಿಸಿರುವ ಐಫೋನ್ ತಯಾರಿಕಾ ಘಟಕಕ್ಕೆ ಪೂರಕವಾಗಿ ತುಮಕೂರಿನಲ್ಲಿ ಮತ್ತೊಂದು ಘಟಕ ಸ್ಥಾಪಿಸುವ ಪ್ರಸ್ತಾವನೆ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಕಂಪನಿಯ ಸಿಇಓ ಬ್ರ್ಯಾಂಡ್ ಚೆಂಗ್ ನೇತೃತ್ವದ ಎಫ್ಐಐ ನಿಯೋಗದ ಜೊತೆ ಉನ್ನತ ಮಟ್ಟದ ಸಭೆ ವಿಧಾನಸೌಧ ಸಮಿತಿ ಕೊಠಡಿಯಲ್ಲಿ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ, …
Read More »