Breaking News

ಗೋಕಾಕ

ಉಪ್ಪಾರ ಸಮಾಜಕ್ಕೆ ಎಸ್‌ಟಿ ಮೀಸಲಾತಿ ನೀಡದಿದ್ದಲ್ಲಿ ಉಗ್ರ ಹೋರಾಟ-ಸಮಾಜ ಚಿಂತಕ ಕುಶಾಲ ಗುಡೇನ್ನವರ.!

ಯುವಭಾರತ ಸುದ್ದಿ ಗೋಕಾಕ: ಹಿಂದುಳಿ ಪ್ರವರ್ಗ ೧ರಲ್ಲಿ ಬರುವ ಉಪ್ಪಾರ ಸಮಾಜವನ್ನು ಎಸ್‌ಟಿಗೆ ಸೇರಿಸಬೇಕೆಂದು ಹಿರಿಯ ನ್ಯಾಯವಾದಿ ಹಾಗೂ ಉಪ್ಪಾರ ಸಮಾಜದ ಚಿಂತಕ ಕುಶಾಲ ಗುಡೇನ್ನವರ ಆಗ್ರಹಿಸಿದ್ದಾರೆ. ರವಿವಾರದಂದು ಪತ್ರಿಕಾ ಹೇಳಿಕೆ ನೀಡಿರುವ ಅವರು, ಪ್ರವರ್ಗ ೧ರಲ್ಲಿ ಶಿಕ್ಷಣ ಹಾಗೂ ಉದ್ಯೋಗ ಕ್ಷೇತ್ರದಲ್ಲಿ ಶೇ೪ ರಷ್ಟು ಮೀಸಲಾತಿ ಇದೆ. ಉಪ್ಪಾರ ಅಭಿವೃದ್ಧಿ ನಿಗಮಕ್ಕೆ ಬರುವ ಬಜೇಟನಲ್ಲಿ ೧೫೦ ಕೋಟಿ ರೂಪಾಯಿ ಅನುದಾನ ಮೀಸಲಿಡಬೇಕೆಂದರು. ಉಪ್ಪಾರ ಸಮಾಜದಲ್ಲಿ ೪೫ ಲಕ್ಷ ಜನಸಂಖ್ಯೆ …

Read More »

ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ

ಗೋಕಾಕ: ಸಾರ್ವಜನಿಕರಿಗೆ ಸಮರ್ಪಕವಾಗಿ ಪಡಿತರ ಧಾನ್ಯಗಳನ್ನು ವಿತರಿಸುತ್ತಿಲ್ಲ ಎಂಬ ವ್ಯಾಪಕ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೂಡಲೇ ಅಗತ್ಯ ಕ್ರಮ ಕೈಗೊಂಡು ನ್ಯಾಯಬೆಲೆ ಅಂಗಡಿಯವರಿಗೆ ಕಟ್ಟುನಿಟ್ಟಿನ ಕ್ರಮ ಜರುಗಿಸುವಂತೆ ಅರಭಾವಿ ಶಾಸಕ ಹಾಗೂ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಮಂಗಳವಾರ ಸಂಜೆ ಇಲ್ಲಿನ ತಹಶೀಲ್ದಾರ ಕಚೇರಿಯಲ್ಲಿ ಗೋಕಾಕ ಮತ್ತು ಮೂಡಲಗಿ ತಾಲೂಕುಗಳ ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದ ಅವರು, ಸಾರ್ವಜನಿಕರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ …

Read More »

50ನಿವೇಶನಗಳಿಗೆ ಮನೆ ಮಂಜೂರಾತಿ ಆದೇಶ ಪತ್ರ ವಿತರಿಸಿದ ಜಿಲ್ಲಾ ಉಸ್ತುವಾರಿ ಸಚಿವರು

ಗೋಕಾಕ: ಮಲ್ಲಾಪೂರ ಪಿಜಿ ಪಟ್ಟಣ ಪಂಚಾಯತಗೆ ಪ್ರಧಾನ ಮಂತ್ರಿ ಆವಾಸ ಯೋಜನೆಯಡಿಯಲ್ಲಿ ಮಂಜೂರಾದ 50ನಿವೇಶನಗಳಿಗೆ ಮನೆ ಮಂಜೂರಾತಿ ಆದೇಶ ಪತ್ರಗಳನ್ನು ಫಲಾನುಭವಿಗಳಿಗೆ ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಶನಿವಾರದಂದು ವಿತರಿಸಿದರು. ಈ ಸಂದರ್ಭದಲ್ಲಿ ಮಲ್ಲಾಪುರ ಪಿಜಿ ಪಟ್ಟಣ ಪಂಚಾಯಿತಿ ಸದಸ್ಯರಾದ ಸಲೀಂ ಕಬ್ಬೂರ್, ಮಲ್ಲು ಕೋಳಿ, ಮಾರುತಿ ಹುಚ್ಚೇರಿ, ಹಿರಿಯರಾದ ಡಿ ಎಮ್ ದಳವಾಯಿ, ಮಲ್ಲಿಕಾರ್ಜುನ ತುಕಾನಟ್ಟಿ, ಸುರೇಶ್ ಪೂಜಾರಿ, ಶಿವಪುತ್ರ ಕೋಗನೂರ, ಪಟ್ಟಣ …

Read More »

ಐದನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಡಾ. ಸಿ ಕೆ ನಾವಲಗಿ ಆಯ್ಕೆ.!

ಗೋಕಾಕ: ನಾಡಿನ ಹೆಸರಾಂತ ವಿಮರ್ಶಕರು, ಸಂಶೋಧಕರು, ವಿದ್ವಾಂಸರು ಡಾ ಸಿ ಕೆ ನಾವಲಗಿ ಅವರು ಗೋಕಾಕ ತಾಲೂಕಿನ ಐದನೇ ಕನ್ನಡ ಸಾಹಿತ್ಯ ಸಮ್ಮೇಳನ ಸರ್ವಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಶ್ರೀಯುತರು ನೂರಕ್ಕೂ ಹೆಚ್ಚು ಸಂಶೋಧನ ಹಾಗೂ ವಿಮರ್ಶೆ ಗ್ರಂಥ. ರಾಜ್ಯ ಹಾಗೂ ರಾಷ್ಟ್ರೀಯ ಸೇಮಿನಾರಗಳಲ್ಲಿ ಉಪನ್ಯಾಸ ನೀಡಿದ್ದಾರೆ. ನಿವೃತ್ತ ಕನ್ನಡ ಅಧ್ಯಾಪಕರು ಹಾಗೂ ಬೆಳಗಾವಿ ಜಿಲ್ಲೆಯ ಕರ್ನಾಟಕ ಜಾನಪದ ಪರಿಷತ್ತು ಜಿಲ್ಲಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅಲ್ಲದೆ ಸಾವಿರಾರು ವಿದ್ಯಾರ್ಥಿಗಳ ಬಾಳಿಗೆ ನಂದಾ ದೀಪವಾಗಿರು …

Read More »

ಶಿವನಗರದಲ್ಲಿ 1.17 ಕೋಟಿ ರೂಗಳ ವೆಚ್ಚದ ರಸ್ತೆ ಡಾಂಬರಿಕರಣ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗೆ ಗಣ್ಯರು ಚಾಲನೆ ನೀಡಿದ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ

ಗೋಕಾಕ: ನಗರಸಭೆಯ ಎಸ್‍ಎಸ್‍ಪಿ ವಿಶೇಷ ಅನುದಾನದ ವಾರ್ಡ ನಂ 11ರ ಶಿವನಗರದಲ್ಲಿ 1.17 ಕೋಟಿ ರೂಗಳ ವೆಚ್ಚದ ರಸ್ತೆ ಡಾಂಬರಿಕರಣ ಹಾಗೂ ಚರಂಡಿ ನಿರ್ಮಾಣದ ಕಾಮಗಾರಿಗೆ ಗಣ್ಯರು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಉಪಾಧ್ಯಕ್ಷ ಬಸವರಾಜ ಆರೆನ್ನವರ, ಸದಸ್ಯ ಶ್ರೀಶೈಲ ಯಕ್ಕುಂಡಿ, ಕ್ಷೇತ್ರ ಶಿಕ್ಷಣಾಧಿಕಾರಿ ಜಿ.ಬಿ.ಬಳಗಾರ, ಜಿ.ಆರ್.ಮಾಳಗಿ, ವಾರ್ಡಿನ ಪ್ರಮುಖರಾದ ಬಿ.ಆರ್.ಚಿಪ್ಪಲಕಟ್ಟಿ, ಕೆ.ಎನ್.ಸಂಗಮ, ಬಸವರಾಜ ಕುಬಸದ, ಬಿ.ಬಿ.ಕೊಪ್ಪದ, ರವಿ …

Read More »

ಗಣರಾಜ್ಯವು ದೇಶದ ನಾಗರೀಕರಿಗೆ ತನ್ನ ರಾಷ್ಟ್ರದ ಜವಾಬ್ದಾರಿಯನ್ನು ನೀಡಿದ ದಿನವಾಗಿದ್ದು, ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ಮಹತ್ವದ ದಿನವಾಗಿದೆ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ

ಗೋಕಾಕ: ಗಣರಾಜ್ಯವು ದೇಶದ ನಾಗರೀಕರಿಗೆ ತನ್ನ ರಾಷ್ಟ್ರದ ಜವಾಬ್ದಾರಿಯನ್ನು ನೀಡಿದ ದಿನವಾಗಿದ್ದು, ಗಣತಂತ್ರ ವ್ಯವಸ್ಥೆಯು ಭಾರತೀಯರಿಗೆ ಸಾರ್ವಭೌಮಾಧಿಕಾರವನ್ನು ಕಲ್ಪಿಸಿಕೊಟ್ಟ ಮಹತ್ವದ ದಿನವಾಗಿದೆ ಎಂದು ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ ಹೇಳಿದರು. ಮಂಗಳವಾರದಂದು ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ತಾಲೂಕಾಡಳಿತ ಹಾಗೂ ನಗರಸಭೆ ಇವುಗಳ ಆಶ್ರಯದಲ್ಲಿ ಜರುಗಿದ 72ನೇ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು ಗಣತಂತ್ರವು ವ್ಯಕ್ತಿ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯಗಳನ್ನು ನೀಡುವುದರ ಮೂಲಕ ಮೂಲಭೂತ ಹಕ್ಕುಗಳನ್ನು ನೀಡಿದೆ ಎಂದು ತಿಳಿಸಿದರು. …

Read More »

ಲಕ್ಷ್ಮೀ ಏಜುಕೇಶನ ಟ್ರಸ್ಟಿನ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಗಣರಾಜ್ಯೋತ್ಸವ ಆಚರನೆ

ಗೋಕಾಕ: ನಗರದ ಲಕ್ಷ್ಮೀ ಏಜುಕೇಶನ ಟ್ರಸ್ಟಿನ ಅಂಗ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ಆಚರಿಸಲಾದ ಗಣರಾಜ್ಯೋತ್ಸವದ ಧ್ವಜಾರೋಹಣವನ್ನು ಪದವಿ ಪೂರ್ವ ಮಹಾವಿದ್ಯಾಲಯದ ಪ್ರಾಚಾರ್ಯ ಎನ್.ಕೆ.ಮಿರಾಸಿ ಅವರು ನೆರವೇರಿಸಿದರು. ಈ ಸಂದರ್ಭದಲ್ಲಿ ಲಕ್ಷ್ಮೀ ಏಜುಕೇಶನ ಟ್ರಸ್ಟಿನ ವ್ಯವಸ್ಥಾಪಕ ನಿರ್ದೇಶಕ ಸನತ್ ಜಾರಕಿಹೊಳಿ, ವಿವಿಧ ಅಂಗ ಸಂಸ್ಥೆಗಳ ಮುಖ್ಯಸ್ಥರಾದ ಬಿ.ಕೆ.ಕುಲಕಣ ್, ಪಿ.ವಿ.ಚಚಡಿ, ಎಚ್.ವಿ.ಪಾಗನೀಸ್, ಆಯ್.ಎಸ್.ಪವಾರ ಎಚ್.ಎಸ್.ಅಡಿಬಟ್ಟಿ, ಡಾ| ಎಸ್.ಎನ್.ನದಾಫ, ಕೆ.ಎ.ಅಂಬೇಕರ, ಆರ್.ಆರ್.ಮೊರೆ, ದೈಹಿಕ ಶಿಕ್ಷಕ ಎಸ್.ಕೆ.ಹುಲ್ಯಾಳ ಹಾಗೂ ಶಿಕ್ಷಕರು ಸಿಬ್ಬಂದಿ ವರ್ಗದವರು ಇದ್ದರು.   …

Read More »

3 ವರ್ಷದಗಳಿಂದ ಏಕತಾ ಅನ್ನದಾಸೋಹ ಬಡ ರೋಗಿಗಳಿಗೆ ಉಚಿತ ಅನ್ನದಾನ

3 ವರ್ಷದಗಳಿಂದ ಏಕತಾ ಅನ್ನದಾಸೋಹ ಬಡ ರೋಗಿಗಳಿಗೆ ಉಚಿತ ಅನ್ನದಾನ! ಯುವ ಭಾರತ ಸುದ್ದಿ,  ಗೋಕಾಕ್: ಕಳೆದ 3 ವರ್ಷದಗಳಿಂದ ಏಕತಾ ಅನ್ನದಾಸೋಹ ಸಮಿತಿ ಬಡ ರೋಗಿಗಳಿಗೆ ಉಚಿತ ಅನ್ನದಾನ ಮಾಡುತ್ತಿರುವ ಕಾರ್ಯ ಶ್ಲಾಘನೀಯವಾಗಿದೆ ಎಂದು ಮಮದಾಪೂರ ಗ್ರಾಮ ಪಂಚಾಯಿತಿ ಸದಸ್ಯ ಸುರೇಶ ಸನದಿ ಹೇಳಿದರು. ಮಂಗಳವಾರದಂದು ನಗರದ ಸರಕಾರಿ ಆಸ್ವತ್ರೆಯ ಆವರಣದಲ್ಲಿ ಇಲ್ಲಿನ ಏಕತಾ ಅನ್ನದಾಸೋಹ ಸಮಿತಿ ಅವರು ಹಮ್ಮಿಕೊಂಡ ಉಚಿತ ಅನ್ನದಾನ ಕಾರ್ಯಕ್ಕೆ ಚಾಲನೆ ನೀಡಿ ಅವರು …

Read More »

ಧರ್ಮೇಗೌಡರ ನಿಧನಕ್ಕೆ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ

ಗೋಕಾಕ: ವಿಧಾನ ಪರಿಷತ್ತಿನ ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ಅವರ ನಿಧನಕ್ಕೆ ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದ ಧರ್ಮೇಗೌಡರು ವಿಧಾನ ಪರಿಷತ್ತಿನ ಉಪಸಭಾಪತಿಗಳಾಗಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ನಿಧನದಿಂದ ಒಬ್ಬ ಆತ್ಮೀಯ ಗೆಳೆಯನೊಬ್ಬನನ್ನು ಕಳೆದುಕೊಂಡಂತಾಗಿದೆ. ಧರ್ಮೇಗೌಡರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿ ನೀಡಲಿ. ಅವರ ಕುಟುಂಬದವರಿಗೆ ಅಗಲಿಕೆಯ ದು:ಖವನ್ನು ಸಹಿಸುವ ಶಕ್ತಿಯನ್ನು ಕರುಣ ಸಲಿ ಎಂದು ಪರಮಾತ್ಮನಲ್ಲಿ ಪ್ರಾರ್ಥಿಸುವದಾಗಿ …

Read More »

ಶಿಕ್ಷಕರ ಸಂಘದಿಂದ ನಾಗಪ್ಪ ಶೇಖರಗೋಳ ಅವರಿಗೆ ಸತ್ಕಾರ

ಗೋಕಾಕ: ಶಿಕ್ಷಕರು ತಮ್ಮ ಕರ್ತವ್ಯದ ಜೊತೆಗೆ ಸಂಘದ ಪ್ರಗತಿಗೂ ಶ್ರಮಿಸಿ, ಶಿಕ್ಷಕರ ಸಂಘವನ್ನು ಮಾದರಿ ಸಂಘವನ್ನಾಗಿ ರೂಪಿಸಲು ಅರಭಾವಿ ಶಾಸಕರ ಆಪ್ತ ಸಹಾಯಕ ನಾಗಪ್ಪ ಶೇಖರಗೋಳ ಹೇಳಿದರು. ಶನಿವಾರದಂದು ನಗರದ ಎನ್‍ಎಸ್‍ಎಫ್ ಅತಿಥಿ ಗೃಹದಲ್ಲಿ ಮೂಡಲಗಿ ವಲಯದ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಪದಾಧಿಕಾರಿಗಳು ನೀಡಿದ ಸತ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಶಿಕ್ಷಕರು ರಾಷ್ಟ್ರದ ಶಿಲ್ಪಿಗಳಾಗಿದ್ದು, ಸಮಾಜವನ್ನು ಬದಲಿಸುವ ಶಕ್ತಿ ಶಿಕ್ಷಕರಿಗಿದೆ ಎಂದು ತಿಳಿಸಿದರು. ನೂತನವಾಗಿ ಸಂಘಕ್ಕೆ ಆಯ್ಕೆಯಾದ ಪದಾಧಿಕಾರಿಗಳು …

Read More »