ದಿ.ಉಮೇಶ ಕತ್ತಿ ಮಾಡಿರುವ ಕೆಲಸ ಜನಮಾನಸದಲ್ಲಿ ಇರಲಿದೆ-ಗಿರೀಶ ಉಪ್ಪಾರ.! ಗೋಕಾಕ: ಆಹಾರ ಮತ್ತು ಅರಣ್ಯ ಸಚಿವ ಉಮೇಶ ಕತ್ತಿಯವರು ನಮ್ಮನ್ನಗಲಿದ್ದರು ಅವರು ಮಾಡಿರುವ ಕೆಲಸ, ಕೈಗಂಡ ಅಭಿವೃದ್ಧಿ ಕಾಮಗಾರಿಗಳ ಮೂಲಕ ಜನಮಾನಸದಲ್ಲಿ ಸದಾಕಾಲ ಇರಲಿದ್ದಾರೆ ಎಂದು ಉಪ್ಪಾರ ಸಭಿವೃದ್ಧಿ ನಿಗಮದ ಅಧ್ಯಕ್ಷ ಗಿರೀಶ ಉಪ್ಪಾರ ಹೇಳಿದರು. ಅವರು, ನಗರದಲ್ಲಿ ಭಗೀರಥ ಉಪ್ಪಾರ ಸಮಾಜದಿಂದ ಹಮ್ಮಿಕೊಂಡ ಶ್ರದ್ಧಾಂಜಲಿ ಸಭೆಯಲ್ಲಿ, ದಿ.ಉಮೇಶ ಕತ್ತಿಯವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ, ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಿ …
Read More »ಮೃತ ಉಮೇಶ ಕತ್ತಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಾಲಚಂದ್ರ ಜಾರಕಿಹೊಳಿ.!
ಮೃತ ಉಮೇಶ ಕತ್ತಿ ಕುಟುಂಬಕ್ಕೆ ಸಾಂತ್ವನ ಹೇಳಿದ ಬಾಲಚಂದ್ರ ಜಾರಕಿಹೊಳಿ.! ಗೋಕಾಕ: ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗುರುವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ …
Read More »ನೀಟ್ ಪರೀಕ್ಷೆ – ಗೋಕಾಕ ತಾಲೂಕು ಹಿರೇನಂದಿ ಗ್ರಾಮದ ರಮೇಶ ಪೂಜೇರಿ ಸಾಧನೆ!!
ನೀಟ್ ಪರೀಕ್ಷೆ – ಗೋಕಾಕ ತಾಲೂಕು ಹಿರೇನಂದಿ ಗ್ರಾಮದ ರಮೇಶ ಪೂಜೇರಿ ಸಾಧನೆ!! ಯುವ ಭಾರತ ಸುದ್ದಿ ಗೋಕಾಕ : ವೈದ್ಯಕೀಯ ಅರ್ಹತಾ ಪರೀಕ್ಷೆ(ನೀಟ್)ಯಲ್ಲಿ ಗೋಕಾಕ ತಾಲೂಕು ಹಿರೇನಂದಿ ಗ್ರಾಮದ ರಮೇಶ ಬಡಕಪ್ಪ ಪೂಜೇರಿ ಅತ್ಯುತ್ತಮ ಸಾಧನೆ ಮಾಡಿದ್ದಾರೆ. ವೈದ್ಯಕೀಯ ಅರ್ಹತಾ ಪರೀಕ್ಷೆಯಲ್ಲಿ ಅವರು 645 ಅಂಕ ಪಡೆದುಕೊಂಡಿದ್ದಾರೆ. 1861 ನೇ ರ್ಯಾಂಕ್ ಪಡೆಯುವ ಮೂಲಕ ಗೋಕಾಕ ತಾಲೂಕು ಹಾಗೂ ಹಿರೇನಂದಿ ಗ್ರಾಮಕ್ಕೆ ಕೀರ್ತಿ ತಂದಿದ್ದಾರೆ. ರಮೇಶ ಅವರು ಬೆಂಗಳೂರು …
Read More »ಉಮೇಶ ಕತ್ತಿ ಅವರ ನಿಧನದಿಂದ ಇಡೀ ರಾಜ್ಯಕ್ಕೆ ಅಪಾರ ಹಾನಿಯಾಗಿದೆ – ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ!
ಉಮೇಶ ಕತ್ತಿ ಅವರ ನಿಧನದಿಂದ ಇಡೀ ರಾಜ್ಯಕ್ಕೆ ಅಪಾರ ಹಾನಿಯಾಗಿದೆ – ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ! ಗೋಕಾಕ : ಸದಾ ಅಭಿವೃದ್ಧಿಯ ಬಗ್ಗೆ ಚಿಂತಿಸುತ್ತಿದ್ದ ನಾಡಿನ ಹಿರಿಯ ರಾಜಕಾರಣಿ, ಸಚಿವ ಉಮೇಶ ಕತ್ತಿ ಅವರ ನಿಧನದಿಂದ ಇಡೀ ರಾಜ್ಯಕ್ಕೆ ಅಪಾರ ಹಾನಿಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಸಂತಾಪ ಸೂಚಿಸಿದರು. ಇಲ್ಲಿಯ ತಮ್ಮ ಗೃಹ ಕಛೇರಿ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಬುಧವಾರದಂದು ಅಗಲಿದ …
Read More »ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ!
ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ ಯುವ ಭಾರತ ಸುದ್ದಿ ಗೋಕಾಕ: ರಾಜ್ಯದ ಹಿರಿಯ ಶಾಸಕ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕತ್ತಿ ಅವರ ನಿಧನದಿಂದ ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ಕತ್ತಿ ಅವರ ಮಧ್ಯೆ ಸುಮಾರು 2 ದಶಕದ …
Read More »ನಮ್ಮಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ದರ್ಜೆಯ ಹುದ್ದೆಗಳನ್ನು ಅಲಂಕರಿಸಬೇಕು-ಶಾಸಕ ಬಾಲಚಂದ್ರ ಜಾರಕಿಹೊಳಿ!!
ನಮ್ಮಲ್ಲಿನ ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು ಉನ್ನತ ದರ್ಜೆಯ ಹುದ್ದೆಗಳನ್ನು ಅಲಂಕರಿಸಬೇಕು-ಶಾಸಕ ಬಾಲಚಂದ್ರ ಜಾರಕಿಹೊಳಿ ಅರಭಾವಿಯಲ್ಲಿ ಜರುಗಿದ ಮೂಡಲಗಿ ತಾಲೂಕು ಮಟ್ಟದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ. ಜ್ಯೂನಿಯರ್ ಕಾಲೇಜುಗಳ ಆರಂಭಕ್ಕೆ ಸರ್ಕಾರಕ್ಕೆ ಪ್ರಸ್ತಾವಣೆ ಸಲ್ಲಿಕೆ. ಮೂಡಲಗಿ: ಗೋಕಾಕ ಹಾಗೂ ಮೂಡಲಗಿ ತಾಲೂಕಿನ ವಿದ್ಯಾರ್ಥಿಗಳು ಉನ್ನತವಾದ ಸ್ಥಾನ ಪಡೆಯಬೇಕೆಂಬುದು ನಮ್ಮ ಇರಾದೆಯಾಗಿದ್ದು, ಈ ದಿಸೆಯಲ್ಲಿ ಉಭಯ ತಾಲೂಕಿನಲ್ಲಿ ಉತ್ತಮ ಗುಣಮಟ್ಟದ …
Read More »ಗೋಕಾಕನಲ್ಲಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ!!
ಗೋಕಾಕನಲ್ಲಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ!! ಯುವ ಭಾರತ ಸುದ್ದಿ ಗೋಕಾಕ: ತಾಲೂಕಿನಾಧ್ಯಂತ ಸೋಮವಾರ ಒಂದು ಗಂಟೆಗೂ ಹೆಚ್ಚು ಕಾಲ ನಿರಂತರವಾಗಿ ಸುರಿದ ಭಾರಿ ಮಳೆಗೆ ಇನ್ನಿಲ್ಲದ ಆವಾಂತರಗಳು ಸೃಷ್ಟಿಯಾಗಿವೆ. ಗೋಕಾಕ ನಗರ ಸೇರಿ ತಾಲೂಕಿನ ವಿವಿಧೆಡೆ ಮಳೆಯಿಂದಾಗಿ ರಸ್ತೆ ಮೇಲೆ ಹೊಳೆಯಂತೆ ನೀರು ಹರಿಯುವ ದೃಶ್ಯ ಕಂಡು ಬಂದಿತು. ಅಲ್ಲದೇ ನೂರಾರು ಮನೆ ಮತ್ತು ವಾಣಿಜ್ಯ ಮಳಿಗೆಗಳಲ್ಲಿ ನೀರು ನುಗ್ಗಿರುವ ಹಿನ್ನಲೆ ನೀರು ಹೋರಹಾಕಲು ಜನರು ಪರದಾಟ …
Read More »ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯ-ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ.!
ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯ-ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ.! ಗೋಕಾಕ: ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯವಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಿ ಶಿಕ್ಷಕರು ಕಾರ್ಯನಿರ್ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ …
Read More »ಆರ್‌ಡಿಪಿಆರ್‌ನಿಂದ ರಸ್ತೆಗಳ ಅಭಿವೃದ್ಧಿಗೆ 16 ಕೋಟಿ ರೂ. ಬಿಡುಗಡೆ – ಶಾಸಕ ಬಾಲಚಂದ್ರ ಜಾರಕಿಹೊಳಿ!!
ಆರ್‌ಡಿಪಿಆರ್‌ನಿಂದ ರಸ್ತೆಗಳ ಅಭಿವೃದ್ಧಿಗೆ 16 ಕೋಟಿ ರೂ. ಬಿಡುಗಡೆ – ಶಾಸಕ ಬಾಲಚಂದ್ರ ಜಾರಕಿಹೊಳಿ!! ಯುವ ಭಾರತ ಸುದ್ದಿ ಮೂಡಲಗಿ : ಅರಭಾವಿ ವಿಧಾನಸಭಾ ಮತಕ್ಷೇತ್ರದ ಗ್ರಾಮೀಣ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ ರಾಜ್ ಇಲಾಖೆ (ಆರ್‌ಡಿಪಿಆರ್)ಯಿಂದ 16 ಕೋಟಿ ರೂ.ಗಳ ವಿಶೇಷ ಅನುದಾನ ಬಿಡುಗಡೆಯಾಗಿದೆ ಎಂದು ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಅರಭಾವಿ ಕ್ಷೇತ್ರದಲ್ಲಿ ಹದಗೆಟ್ಟ ರಸ್ತೆಗಳ ಅಭಿವೃದ್ಧಿಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು …
Read More »ಇದೆ 24ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ಶಿವಪುತ್ರ ಜಕಬಾಳ.!
ಇದೆ 24ರಂದು ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ-ಶಿವಪುತ್ರ ಜಕಬಾಳ.! ಗೋಕಾಕ: ಹಿಂದುಳಿದ ಸಮುದಾಯವಾಗಿರುವ ಉಪ್ಪಾರ ಸಮುದಾಯದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶೈಕ್ಷಣಿಕ ಕ್ಷೇತ್ರದಲ್ಲಿ ಇನ್ನಷ್ಟು ಸಾಧನೆ ಮಾಡಲು ಮಕ್ಕಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಜಿಲ್ಲಾ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಇದೆ ದಿ.೨೪ರ ಶನಿವಾರದಂದು ಹಮ್ಮಿಕೊಳ್ಳಲಾಗಿದೆ ಎಂದು ಗೋಕಾಕ ತಾಲೂಕ ಭಗೀರಥ ಉಪ್ಪಾರ ಸಮಾಜದ ಅಧ್ಯಕ್ಷ ಶಿವಪುತ್ರ ಜಕಬಾಳ ಹೇಳಿದರು. ಅವರು, ಶನಿವಾರದಂದು ನಗರದ ಪ್ರವಾಸಿ ಮಂದಿರದಲ್ಲಿ ಕರೇದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, …
Read More »
YuvaBharataha Latest Kannada News