Breaking News

ರಾಜ್ಯ ಸರಕಾರದ ಮೊದಲ ವರ್ಷದ ಸಮಾರಂಭ: ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಪ್ರಸಾರ ಜು.27 ರಂದು

Spread the love

ರಾಜ್ಯ ಸರಕಾರದ ಮೊದಲ ವರ್ಷದ ಸಮಾರಂಭ: ಎಲ್ಲ ಜಿಲ್ಲೆಗಳಲ್ಲಿ ಏಕಕಾಲಕ್ಕೆ ಪ್ರಸಾರ ಜು.27 ರಂದು

ಬೆಳಗಾವಿ ,ಜು.26: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ನೇತೃತ್ವದ ರಾಜ್ಯ ಸರಕಾರ ಅಧಿಕಾರಕ್ಕೆ ಬಂದು ಒಂದು ವರ್ಷ ಪೂರ್ಣಗೊಳಿಸಿರುವ ಹಿನ್ನೆಲೆಯಲ್ಲಿ ಮೊದಲ ವರ್ಷದ ಸಮಾರಂಭವು ನವತಂತ್ರಜ್ಞಾನದ ವರ್ಚುವಲ್ ಪ್ಲಾಟ್‌ಫಾರಂ ಮೂಲಕ ಜು.27ರಂದು ಬೆಳಗ್ಗೆ 11ಕ್ಕೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯಲಿದೆ.

ಈ ಸಮಾರಂಭವು ರಾಜ್ಯದ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಏಕಕಾಲಕ್ಕೆ ಭಿತ್ತರವಾಗಲಿದೆ. ಅದೇ ರೀತಿ ಬೆಳಗಾವಿ ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಕೂಡ ಭಿತ್ತರಗೊಳ್ಳಲಿದೆ.

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ರಾಜ್ಯದ ಜನರನ್ನು ಉದ್ದೇಶಿಸಿ ಕಳೆದ ಒಂದು ವರ್ಷದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು ಮತ್ತು ಮುಂದೆ ಆಗಬೇಕಾದ ಕೆಲಸಗಳು ಸೇರಿದಂತೆ ಅನೇಕ ವಿಷಯಗಳ ಕುರಿತು ಮಾತನಾಡಲಿದ್ದಾರೆ.
ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಅವರು ಸಂವಾದಕ್ಕೂ ವೇದಿಕೆ ಕಲ್ಪಿಸಲಾಗಿದ್ದು, ನಡೆಸಲಿದ್ದಾರೆ.

ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ನವತಂತ್ರಜ್ಞಾನದ ವರ್ಚುವಲ್ ಪ್ಲಾಟ್‌ಫಾರಂ ಮೂಲಕ ಕಾರ್ಯಕ್ರಮದ ನೇರಪ್ರಸಾರಕ್ಕೆ ವ್ಯವಸ್ಥೆ ಮಾಡಲಾಗಿದ್ದು, ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಅವರು ಸೇರಿದಂತೆ ಜಿಲ್ಲೆಯ ಎಲ್ಲಾ ಶಾಸಕರು, ಜನಪ್ರತಿನಿಧಿಗಳು, ಅಧಿಕಾರಿಗಳು ವೀಕ್ಷಿಸಲಿದ್ದಾರೆ. ವಿವಿಧ ಯೋಜನೆಗಳ ಆಯ್ದ ಫಲಾನುಭವಿಗಳು ಮಾತ್ರ ಉಪಸ್ಥಿತರಿರಲಿದ್ದಾರೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಈ ಕಾರ್ಯಕ್ರಮವನ್ನು ಸಾರ್ವಜನಿಕರು ಸಹ ನೇರ ಪ್ರಸಾರದಲ್ಲಿhttps://www.youtube.com/watch?v=T8W0Fj-yngQ&feature=youtu.be ಮೂಲಕ ವೀಕ್ಷಿಸಬಹುದಾಗಿದೆ.
***


Spread the love

About Yuva Bharatha

Check Also

ಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾರಾಗಿ, ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಕರೆ.!

Spread the loveಪ್ರವಾಹ ಪರಿಸ್ಥಿತಿ ಎದುರಿಸಲು ಸನ್ನದ್ಧರಾರಾಗಿ, ಅಧಿಕಾರಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಕರೆ.! ಗೋಕಾಕ: ಅಧಿಕಾರಿಗಳು ನದಿ ತೀರದ …

Leave a Reply

Your email address will not be published. Required fields are marked *

15 + three =