Breaking News

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು

Spread the love

ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡಬೇಕು

ಯುವ ಭಾರತ ಸುದ್ದಿ ಬಸವನಬಾಗೇವಾಡಿ :
ಸಂಸ್ಕಾರ ಇಲ್ಲದವನು ಪಶುಕ್ಕೆ ಸಮಾನ ಎಂಬ ಮಾತು ಇದೆ. ಈ ಹಿನ್ನೆಲೆಯಲ್ಲಿ ಪಾಲಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವ ಜೊತೆಗೆ ಉತ್ತಮ ಸಂಸ್ಕಾರವನ್ನು ನೀಡುವದು ತುಂಬಾ ಅಗತ್ಯವಿದೆ ಎಂದು ಬಸವನಬಾಗೇವಾಡಿ ಹಿರೇಮಠದ ಶಿವಪ್ರಕಾಶ ಶಿವಾಚಾರ್ಯ ಸ್ವಾಮೀಜಿ ಹೇಳಿದರು.
ತಾಲೂಕಿನ ಹೂವಿನಹಿಪ್ಪರಗಿಯ ಆಶೀರ್ವಾದ ಪಬ್ಲಿಕ್ ಸ್ಕೂಲ್ ಹಾಗೂ ಪರಿವರ್ತನಾ ವಿದ್ಯಾಮಂದಿರದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಸರಸ್ವತಿ ಪೂಜಾ ಸಮಾರಂಭ ಹಾಗೂ ಪಾಲಕರ ಪಾದಪೂಜಾ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಪಾಲಕರು ತಮ್ಮ ಮಕ್ಕಳಿಗೆ ಆಸ್ತಿಯನ್ನು ಮಾಡದೇ ಉತ್ತಮ ಶಿಕ್ಷಣವನ್ನು ಕೊಡುವ ಮೂಲಕ ಅವರನ್ನೇ ಆಸ್ತಿಯನ್ನಾಗಿ ಮಾಡಬೇಕು. ಯೋಗ್ಯವಾದ ಶಾಲೆಗೆ ಕಳುಹಿಸುವ ಮೂಲಕ ಮಕ್ಕಳನ್ನು ಆದರ್ಶ ವಿದ್ಯಾರ್ಥಿಗಳನ್ನಾಗಿ ಮಾಡಬೇಕು. ಮಕ್ಕಳನ್ನು ಪ್ರೀತಿಸುವ ಜೊತೆಗೆ ಉತ್ತಮ ರೀತಿಯಲ್ಲಿ ಸಂಸ್ಕಾರ ಕಲಿಸಬೇಕೆಂದರು.
ಜೀವನದಲ್ಲಿ ಕಷ್ಟ ಪಟ್ಟರೆ ಮಾತ್ರ ಸುಖ ಕಾಣಲು ಸಾಧ್ಯ ಎಂಬುವದನ್ನು ಅರಿತುಕೊಳ್ಳಬೇಕು. ವಿದ್ಯೆ ಎಂಬುವದು ದೊಡ್ಡ ಶಕ್ತಿ. ವಿದ್ಯೆಯಿಂದ ಸುಖ-ಶಾಂತಿ ಸಿಗುವದು. ಶಿಕ್ಷಕರು ತಮ್ಮ ಮಕ್ಕಳಿಗೆ ಕಲಿಯುವ ಸಂದರ್ಭದಲ್ಲಿ ಶಿಕ್ಷೆ ನೀಡುವದು ಅವರ ಭವಿಷ್ಯದ ಹಿತದೃಷ್ಟಿಯಿಂದ ಎಂಬುವದನ್ನು ಪಾಲಕರು ತಿಳಿದುಕೊಳ್ಳಬೇಕಾದ ಅಗತ್ಯವಿದೆ. ಜನ್ಮದಾತರಾದ ತಂದೆ-ತಾಯಿ ನಮ್ಮ ಜೀವನದಲ್ಲಿ ಬಹಳ ಗೌರವ ನೀಡುವ ಜೊತೆಗೆ ಗುರು-ಹಿರಿಯರನ್ನು ತುಂಬಾ ಗೌರವದಿಂದ ಕಾಣಬೇಕೆಂದರು.
ಅಧ್ಯಕ್ಷತೆ ವಹಿಸಿದ್ದ ಆಶೀರ್ವಾದ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎಸ್.ವ್ಹಿ.ಸಜ್ಜನ ಮಾತನಾಡಿ, ನಮ್ಮ ಶಿಕ್ಷಣ ಸಂಸ್ಥೆಯನ್ನು ಬೆಳೆಸುವಲ್ಲಿ ಪಾಲಕರು ತುಂಬಾ ಸಹಕಾರ ನೀಡುತ್ತಿದ್ದಾರೆ. ನಾವು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಜೊತೆಗೆ ಸಂಸ್ಕಾರಯುತ ಜೀವನ ನಡೆಸಲು ಬೇಕಾದ ಮೌಲ್ಯಗಳನ್ನು ನಮ್ಮ ಸಿಬ್ಬಂದಿ ಮಕ್ಕಳಿಗೆ ಕಲಿಸುತ್ತಾರೆ. ಕೋವಿಡ್-೧೯ ಸಂದರ್ಭದಲ್ಲಿ ಶಿಕ್ಷಣ ಸಂಸ್ಥೆ ನಡೆಸುವುದು ತುಂಬಾ ಕಷ್ಟವಾಯಿತು. ಮುಂಬರುವ ದಿನಗಳಲ್ಲಿಯೂ ನಮ್ಮ ಸಂಸ್ಥೆಯ ಅಭಿವೃದ್ಧಿಗೆ ಎಲ್ಲರೂ ಸಹಕಾರ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ಬಿ.ಬಿ.ತಿಳಿಗೊಳ, ಪಿ.ಜಿ.ಗೋಠೆದ, ಹಣಮಂತರಾಯ ಗುಣಿ, ಶಿವಣ್ಣ ಗುಂಡಾನವರ, ಅಜೀಜ ಬಳಬಟ್ಟಿ, ಎಚ್.ಕೆ.ನಾಟೀಕಾರ, ಎಸ್.ವೈ.ಶಿವಯೋಗಿ, ಮಲ್ಲನಗೌಡ ನಾಡಗೌಡ, ವಿ.ಎಸ್.ಸಜ್ಜನ, ಸೋಮಶೇಖರ ಮುಧೋಳ ಇತರರು ಇದ್ದರು. ಬಿ.ಟಿ.ದೊಡಮನಿ ಸ್ವಾಗತಿಸಿ,ನಿರೂಪಿಸಿದರು. ಎಚ್.ಪಿ. ಹೊಸೂರು ವಂದಿಸಿದರು.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

thirteen − eleven =