ರಾಷ್ಟ್ರೀಯ ಸ್ವಚ್ಛತಾ ದಿನಾಚರಣೆ ನಿಮಿತ್ತ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ!
ಯುವ ಭಾರತ ಸುದ್ದಿ ಬಸವನಬಾಗೇವಾಡಿ : ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಆದೇಶದನ್ವಯ ಸೋಮವಾರ ರಾಷ್ಟ್ರೀಯ ಸ್ವಚ್ಛತಾ ಅಭಿಯಾನದಂಗವಾಗಿ ತಾಲೂಕು ಕಾನೂನು ಸೇವೆಗಳ ಸಮಿತಿ ಹಾಗೂ ನ್ಯಾಯವಾದಿಗಳ ಸಂಘದ ಸಹಯೋಗದಲ್ಲಿ ಸ್ವಚ್ಛತಾ ಅಭಿಯಾನ ಹಮ್ಮಿಕೊಳ್ಳಲಾಗಿತ್ತು.
ಬಸವನಬಾಗೇವಾಡಿಯ ನ್ಯಾಯಾಲಯಗಳ ಸಂಕೀರ್ಣವನ್ನು ಸ್ವಚ್ಛಗೊಳಿಸುವ ಮೂಲಕ ಹಿರಿಯ ಸಿವ್ಹಿಲ್ ನ್ಯಾಯಾಧೀಶ ಪ್ರಕಾಶ ಬನಸೋಡೆ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದರು.
ಹಿರಿಯ ಸಿವ್ಹಿಲ್ ನಾಯಾಧೀಶ ಪ್ರಕಾಶ ಅರ್ಜನ ಬನಸೋಡೆ ಅವರು ನ್ಯಾಯಾಲಯದ ಆವರಣದಲ್ಲಿ ಕಸಗೂಡಿಸುವ ಮೂಲಕ ಸ್ವಚ್ಛತಾ ಅಭಿಯಾನಕ್ಕೆ ಚಾಲನೆ ನೀಡಿದ ನಂತರ ಮಾತನಾಡಿದ ಅವರು, ನಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಚವಾಗಿಟ್ಟುಕೊಳ್ಳಬೇಕು. ನಮ್ಮ ಪರಿಸರ ಸ್ವಚ್ಛವಾಗಿದ್ದರೆ ನಾವೆಲ್ಲರೂ ಆರೋಗ್ಯಕರ ಜೀವನ ನಮ್ಮದಾಗುತ್ತದೆ. ಈ ನಿಟ್ಟಿನಲ್ಲಿ ಇಡೀ ಪಟ್ಟಣದಲ್ಲಿ ಸ್ವಚ್ಛತೆ ಕಡೆಗೆ ಎಲ್ಲರೂ ಗಮನ ಹರಿಸಬೇಕೆಂದರು.
ಈ ಸಂದರ್ಭದಲ್ಲಿ ಹೆಚ್ಚುವರಿ ಹಿರಿಯ ಸಿವ್ಹಿಲ್ ನ್ಯಾಯಾಧೀಶೆ ತಯ್ಯಬಾ ಸುಲ್ತನಾ, ಹೆಚ್ಚುವರಿ ಸಿವ್ಹಿಲ್ ನ್ಯಾಯಾಧೀಶೆ ಸೌಮ್ಯ ಹೂಲಿ, ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಪೂಜಾರಿ, ನ್ಯಾಯವಾದಿ ಸಂಘದ ಅಧ್ಯಕ್ಷ ಎನ್.ಎಸ್.ಪಾಟೀಲ, ವಕೀಲ ಬಿ.ಕೆ.ಕಲ್ಲೂರ, ಎಚ್.ಎಸ್.ಗುರಡ್ಡಿ, ಎಂ.ಎಸ್.ಗೊಳಸಂಗಿ, ಆರ್.ಬಿ.ಗಣಕುಮಾರ, ಜಿ.ಬಿ.ಬಾಗೇವಾಡಿ, ಎಂ.ಎಸ್.ಬಿರಾದಾರ, ಎಸ್.ಎಸ್.ಬಶೆಟ್ಟಿ, ವ್ಹಿ.ಬಿ.ಮರ್ತುರ, ಪುರಸಭೆ ಹಿರಿಯ ಆರೋಗ್ಯ ಸಹಾಯಕ ಸಿದ್ದಾರ್ಥ ಕಳ್ಳಿಮನಿ, ನ್ಯಾಯಾಲಯದ ಶಿರಸ್ತೇದಾರರಾದ ಮಹಾದೇವಿ ಕುಂಬಾರ, ಆರ್.ಆರ್.ಹೊಟ್ಕರ, ಜಿ.ಎಸ್.ಕೆಂಗಲಗುತ್ತಿ, ನ್ಯಾಯಾಲಯದ ಆಡಳಿತ ಸಹಾಯಕ ಎ.ಎಸ್.ಮೂರಮಾನ ಇತರರು ಇದ್ದರು.