ಯುವ ಭಾರತ ಸುದ್ದಿ, ಗೋಕಾಕ್: ಸದಾ ರೈತ ಪರ, ಜನಪರ ಕಾಳಜಿ ತೋರುತ್ತಾ ಬರುತ್ತಿರುವ ಹಾಗೂ ಸಮಾಜದ ಸರ್ವ ಜನಾಂಗದ ಅಭಿವೃದ್ಧಿಗೆ ತಮ್ಮನ್ನು ತಾವು ಅರ್ಪಿಸಿಕೊಂಡಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ನೂರು ವರ್ಷ ಸುಖವಾಗಿ ಬಾಳಲಿ ಎಂದು ಜಲಸಂಪನ್ಮೂಲ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಅವರು, ನಗರದ ತಮ್ಮ ಕಾರ್ಯಾಲಯದಲ್ಲಿ ಭಾರತೀಯ ಜನತಾ ಪಾರ್ಟಿ ಗೋಕಾಕ ನಗರ ಹಾಗೂ ಗ್ರಾಮೀಣ ಮಂಡಲದ ವತಿಯಿಂದ ಸಂತ ರವಿದಾಸ್ ಅವರ ಜನ್ಮ ದಿನಾಚರಣೆ ಹಾಗೂ ಮುಖ್ಯಮಂತ್ರಿ ಬಿ ಎಸ್ ಯಡಿಯೂರನವರ ಜನ್ಮದಿನದ ನಿಮಿತ್ಯ ಹಮ್ಮಿಕೊಂಡ ಕಾರ್ಯಕ್ರಮದಲ್ಲಿ ಸಂತ ರವಿದಾಸ್ ಅವರ ಭಾವಚಿತ್ರಕ್ಕೆ ಸಚಿವರಾದ ರಮೇಶ ಜಾರಕಿಹೊಳಿ ಪೂಜೆ ಸಲ್ಲಿಸಿ ಪುಷ್ಪಾರ್ಪಣೆ ಮಾಡಿ, ಮಾತನಾಡಿದರು.
ಮುಖ್ಯಮಂತ್ರಿ ಯಡಿಯೂರಪ್ಪನವರು, ತಮ್ಮ ಇಳಿ ವಯಸ್ಸಿನಲ್ಲೂ ಯುವಕರಂತೆ ನಾಡಿನ ಅಭಿವೃದ್ಧಿಗಾಗಿ ದುಡಿಯುತ್ತಿದ್ದಾರೆ. ಪ್ರಗತಿಪರ ಚಿಂತನೆಗಳನ್ನು ಮೈಗೂಡಿಸಿಕೊಂಡು, ಕನ್ನಡ ನಾಡು-ನುಡಿ, ನೆಲ-ಜಲಕ್ಕೆ ಸದಾ ಮಿಡಿಯುತ್ತಿರುವ ನೇಗಿಲ ಯೋಗಿಯಾಗಿದ್ದಾರೆ. ಸಮಗ್ರ ಕರ್ನಾಟಕದ ಅಭಿವೃದ್ಧಿಯ ಕನಸುಗಾರರಾಗಿರುವ ಯಡಿಯೂರಪ್ಪನವರು ಜನಪ್ರಿಯ ಮುಖ್ಯಮಂತ್ರಿಗಳಾಗಿದ್ದಾರೆ ಎಂದರು.
ನಂತರ ಬಿಜೆಪಿ ನಗರ ಹಾಗೂ ಗ್ರಾಮೀಣ ಮುಖಂಡರು ಹಾಗೂ ಕಾರ್ಯಕರ್ತರು ಇಲ್ಲಿಯ ಸರಕಾರಿ ಆಸ್ಪತ್ರೆಯ ರೋಗಿಗಳಿಗೆ ಹಾಗೂ ಶಿವಾ ಫೌಂಡೇಶನ್ನ ಮಕ್ಕಳಿಗೆ ಹಣ್ಣು ಹಂಪಲು ವಿತರಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳ, ಗೋಕಾಕ ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮನ್ನವರ, ಗ್ರಾಮೀಣ ಅಧ್ಯಕ್ಷ ರಾಜೇಂದ್ರ ಗೌಡಪ್ಪಗೋಳ, ಮುಖಂಡರಾದ ಎಸ್ ವ್ಹಿ ದೇಮಶೆಟ್ಟಿ, ಸುರೇಶ ಸನದಿ, ಕಾಂತು ಎತ್ತಿನಮನಿ, ಎಸ್ಸಿ ಮೋರ್ಚಾ ಅಧ್ಯಕ್ಷ ಮಂಜುನಾಥ ಮಾವರಕರ, ಓಬಿಸಿ ಮೋರ್ಚಾ ಅಧ್ಯಕ್ಷ ಲಕ್ಷ್ಮಣ ಖಡಬಾಂವಿ, ಲಕ್ಷ್ಮಣ ತಳ್ಳಿ, ಲಕ್ಕಪ್ಪ ತಹಶೀಲ್ದಾರ, ಸುರೇಶ ಪಾಟೀಲ ಸೇರಿದಂತೆ ಬಿಜೆಪಿ ಮುಖಂಡರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.