ಗೋಕಾಕ: ಬೆಳಗಾವಿ ಲೋಕಸಭಾ ಉಪಚುನಾವಣೆ ಹಿನ್ನಲೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಬಿಜೆಪಿ ಅಭ್ಯರ್ಥಿ ಮಂಗಲಾ ಸುರೇಶ ಅಂಗಡಿ ಅವರ ಪರ ರೋಡ ಶೋ ಮೂಲಕ ನಗರದಲ್ಲಿ ಮತಯಾಚನೆ ನಡೆಸಲಿದ್ದಾರೆ.
ಬುಧವಾರದಂದು ಸಂಜೆ ೪ ಗಂಟೆಗೆ ನಗರದ ಕೊಳವಿ ಮಾರುತಿ ದೇವಸ್ಥಾನದಿಂದ ಸಂಗೋಳ್ಳಿ ರಾಯಣ್ಣ ವೃತ್ತ ಮಾರ್ಗವಾಗಿ ಬಸವೇಶ್ವರ ವೃತ್ತದ ವರೆಗೆ ರೋಡ ಶೋ ಜರುಗಲಿದೆ. ಬಸವೇಶ್ವರ ವೃತ್ತದಲ್ಲಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರು ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುವರು.
ರೋಡ ಶೋ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಕರ್ನಾಟಕ ರಾಜ್ಯ ಸಚಿವರಾದ ಜಗದೀಶ ಶೆಟ್ಟರ, ಉಮೇಶ ಕತ್ತಿ, ಮಾಜಿ ಸಚಿವ ಹಾಗೂ ಗೋಕಾಕ ಶಾಸಕ ರಮೇಶ ಜಾರಕಿಹೊಳಿ, ಕೆಎಮ್‌ಎಫ್ ಅಧ್ಯಕ್ಷ ಹಾಗೂ ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಸೇರಿದಂತೆ ಬಿಜೆಪಿ ರಾಜ್ಯ ನಾಯಕರು ಆಗಮಿಸಲಿದ್ದಾರೆಂದು ನಗರ ಮಂಡಲ ಅಧ್ಯಕ್ಷ ಭೀಮಶಿ ಭರಮಣ್ಣವರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
