ರೈತರಿಗೆ ನೀಡುವ ಹಾಲಿನ ಪ್ರೋತ್ಸಾಹ ಧನ ಕಡಿತಗೊಳಿಸದಂತೆ ಸೂಚನೆ ಕೊಟ್ಟ ಸಿಎಂ ಸಿದ್ದರಾಮಯ್ಯ
ಬೆಂಗಳೂರು:
ರೈತರಿಂದ ಖರೀದಿಸುವ ಹಾಲಿಗೆ ನಿಗದಿಪಡಿಸಿರುವ ದರದಲ್ಲಿ ಯಾವುದೇ ಕಡಿತ ಮಾಡದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಹಾಲು ಉತ್ಪಾದನೆ ಹೆಚ್ಚಳವಾದ ಹಿನ್ನೆಲೆಯಲ್ಲಿ ಬಮೂಲ್ ದರ ಕಡಿತ ಮಾಡಿದೆ ಎಂಬ ವರದಿ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಈ ಸೂಚನೆ ನೀಡಿದ್ದಾರೆ.
ಕರ್ನಾಟಕ ಹಾಲು ಮಹಾ ಮಂಡಳಿ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಮಾತನಾಡಿದ ಸಿಎಂ, ಏಕಾಏಕಿ ದರ ಕಡಿತ ಮಾಡುವಂತಿಲ್ಲ. ಈ ಕುರಿತು ಸರ್ಕಾರದ ಜೊತೆ ಚರ್ಚಿಸಬೇಕು.
ದರ ಕಡಿತ ಮಾಡಿದರೆ ರೈತರಿಗೆ ತೊಂದರೆಯಾಗುತ್ತದೆ. ಈ ಅಂಶವನ್ನು ಗಮನದಲ್ಲಿ ಇರಿಸಿಕೊಳ್ಳಬೇಕು ಎಂದು ತರಾಟೆಗೆ ತೆಗೆದುಕೊಂಡರು.