ಕೈನಲ್ಲಿ ಬಂಡಾಯ-ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧೆ : ಚುನಾವಣೆಗೆ ಟವಲ್ ಹಾಸಿ ಹಣ ಸಂಗ್ರಹ !

ಯುವ ಭಾರತ ಸುದ್ದಿ ಕಡೂರು :
ಕಾಂಗ್ರೆಸ್ ಪಕ್ಷ ತನ್ನ ಎರಡನೇ ಅಭ್ಯರ್ಥಿಗಳ ಪಟ್ಟಿಯನ್ನು ಘೋಷಣೆ ಮಾಡಿದೆ. ಇದರಿಂದ
ಟಿಕೆಟ್ ವಂಚಿತಗೊಂಡಿರುವ ಮಾಜಿ ಶಾಸಕರೊಬ್ಬರು ಇದೀಗ ಬಂಡಾಯವೆದ್ದು ಪಕ್ಷೇತರರಾಗಿ ಸ್ಪರ್ಧಿಸುವ ಘೋಷಣೆ ಮಾಡಿದ್ದಾರೆ.
ಜೆಡಿಎಸ್ ತ್ಯಜಿಸಿ ಕಾಂಗ್ರೆಸ್ ಸೇರಿದ್ದ ಮಾಜಿ ಶಾಸಕ ವೈ ಎಸ್ ವಿ ದತ್ತಾ ಅವರಿಗೆ ಕಡೂರು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೈತಪ್ಪಿದೆ. ಇದೀಗ ಪಕ್ಷೇತರರಾಗಿ ಸ್ಪರ್ಧಿಸಲು ಅವರು ತೀರ್ಮಾನಿಸಿದ್ದಾರೆ.
ಇಂದು ಕಡೂರಿನಲ್ಲಿ ಸ್ವಾಭಿಮಾನಿ ಸಮಾವೇಶ ನಡೆಸಿ ಅಭಿಮಾನಿಗಳ ಜೊತೆ ಚರ್ಚೆ ನಡೆಸಿದ್ದಾರೆ. ಭಾರೀ ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳ ಅಭಿಪ್ರಾಯದಂತೆ ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಅವರು ನಿರ್ಧರಿಸಿದ್ದಾರೆ. ಟವಲ್ ಗುರುತಿನಿಂದ ಸ್ಪರ್ಧಿಸುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ವಿರುದ್ಧ ಬಂಡಾಯದ ಕಹಳೆ ಮೊಳಗಿಸಿದ್ದಾರೆ. ಚುನಾವಣಾ ಖರ್ಚಿಗೆ ಹಣ ಸಂಗ್ರಹಕ್ಕೆ ಮುಂದಾಗಿದ್ದು ಸಮಾವೇಶದಲ್ಲೇ ಟವಲ್ ಹಾಕಿ ಹಣ ಸಂಗ್ರಹಿಸಿದ್ದು ವಿಶೇಷವಾಗಿತ್ತು.
YuvaBharataha Latest Kannada News