Breaking News

ಮೊದಲ ಪಟ್ಟಿಯಲ್ಲಿ ತಂದೆ-ಮಕ್ಕಳಿಗೆ ಟಿಕೆಟ್ ನೀಡಿದ ಕಾಂಗ್ರೆಸ್‌ : ಕುಟುಂಬ ರಾಜಕಾರಣಕ್ಕೆ ಮಣೆ

Spread the love

ಮೊದಲ ಪಟ್ಟಿಯಲ್ಲಿ ತಂದೆ-ಮಕ್ಕಳಿಗೆ ಟಿಕೆಟ್ ನೀಡಿದ ಕಾಂಗ್ರೆಸ್‌ : ಕುಟುಂಬ ರಾಜಕಾರಣಕ್ಕೆ ಮಣೆ

ಯುವ ಭಾರತ ಸುದ್ದಿ ಬೆಂಗಳೂರು :
2023 ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್‍ನಿಂದ ಮೊದಲ ಪಟ್ಟಿ ಬಿಡುಗಡೆಗೊಂಡಿದೆ. ಸಿದ್ದರಾಮಯ್ಯ ಅವರಿಗೆ ವರುಣಾದಿಂದ ಟಿಕೆಟ್‌ ನೀಡಲಾಗಿದ್ದರೆ ಡಿ.ಕೆ.ಶಿವಕುಮಾರ್ ಅವರಿಗೆ ಕನಕಪುರದಿಂದ ಟಿಕೆಟ್‌ ನೀಡಲಾಗಿದೆ.
ಇನ್ನು ಕಾಂಗ್ರೆಸ್‌ನಲ್ಲಿ 91 ವರ್ಷದ ಶಾಮನೂರು ಶಿವಶಂಕರಪ್ಪ ಅವರಿಗೂ ಟಿಕೆಟ್‌ ನೀಡಲಾಗಿದೆ. ಅನೇಕ ಕಡೆ ಪ್ರಮುಖ ನಾಯಕ ಜೊತೆಗೆ ಅವರ ಮಕ್ಕಳಿಗೂ ಟಿಕೆಟ್ ನೀಡಲಾಗಿದೆ. ಬೆಂಗಳೂರಿನಲ್ಲಿ ಮಾಜಿ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಬಿಟಿಎಂ ಲೇಔಟ್‌ನಿಂದ ಟಿಕೆಟ್‌ ನೀಡಲಾಗಿದ್ದರೆ ಜಯನಗರದಲ್ಲಿ ಅವರ ಪುತ್ರಿ ಸೌಮ್ಯ ಅವರಿಗೆ ಟಿಕೆಟ್‌ ನೀಡಲಾಗಿದೆ.

ಮಾಜಿ ಕೇಂದ್ರ ಸಚಿವ ಕೆ.ಹೆಚ್. ಮುನಿಯಪ್ಪ ಅವರಿಗೆ ದೇವನಹಳ್ಳಿ ಟಿಕೆಟ್ ನೀಡಿದ್ದರೆ ಅವರ ಮಗಳು ಹಾಗೂ ಹಾಲಿ ಶಾಸಕಿ ರೂಪಾಕಲಾ ಎಂ. ಅವರಿಗೆ ಕೋಲಾರ ಗೋಲ್ಡ್‌ ಮೈನ್‌ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ. ಟಿಕೆಟ್ ಘೋಷಣೆ ಮಾಡಲಾಗಿದೆ. ದಾವಣಗೆರೆ ದಕ್ಷಿಣದಿಂದ ಶಾಮನೂರು ಶಿವಶಂಕರಪ್ಪ ಅವರಿಗೆ ಟಿಕೆಟ್ ನೀಡಿದ್ದರೆ ಅವರ ಮಗ ಎಸ್.ಎಸ್. ಮಲ್ಲಿಕಾರ್ಜುನ ಅವರಿಗೆ ದಾವಣಗೆರೆ ಉತ್ತರದಿಂದ ಕ್ಷೇತ್ರದಲ್ಲಿ ಟಿಕೆಟ್ ನೀಡಲಾಗಿದೆ. ಬೆಂಗಳೂರಿನ ವಿಜಯನಗರ ಕ್ಷೇತ್ರಕ್ಕೆ ಎಂ. ಕೃಷ್ಣಪ್ಪ ಅವರಿಗೆ ಟಿಕೆಟ್‌ ನೀಡಿದ್ದರೆ ಅವರ ಪುತ್ರ ಪ್ರಿಯಕೃಷ್ಣ ಅವರಿಗೆ ಗೋವಿಂದರಾಜನಗರ ಕ್ಷೇತ್ರದಿಂದ ಟಿಕೆಟ್‌ ನೀಡಲಾಗಿದೆ.

ವರುಣಾದಲ್ಲಿ ಹಾಲಿ ಶಾಸಕ ಹಾಗೂ ಯತೀಂದ್ರ ಅವರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಟಿಕೆಟ್‌ ಘೋಷಣೆ ಮಾಡಲಾಗಿದೆ. ಮತ್ತೊಂದೆಡೆ ಪಾವಗಡದಲ್ಲಿ ವೆಂಕಟರಮಣಪ್ಪ ಅವರ ಬದಲಿಗೆ ಪುತ್ರ ಹೆಚ್.ವಿ. ವೆಂಕಟೇಶ ಅವರಿಗೆ ಟಿಕೆಟ್ ನೀಡಲಾಗಿದೆ.
ಕೆಲ ದಿನಗಳ ಹಿಂದೆ ಮೃತಪಟ್ಟಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ಧ್ರುವನಾರಾಯಣ ಅವರ ಪುತ್ರ ದರ್ಶನ್‍ ಅವರಿಗೆ ನಂಜನಗೂಡು ಕ್ಷೇತ್ರದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ. ದಿವಂಗತ ಮಹಾದೇವ ಪ್ರಸಾದ ಪುತ್ರ ಗಣೇಶಪ್ರಸಾದ ಅವರಿಗೂ ಟಿಕೆಟ್ ನೀಡಲಾಗಿದೆ. ಬೆಳ್ತಂಗಡಿಯಲ್ಲಿ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್‌ ಸಹೋದರ ಬಿ.ಕೆ.ಶಿವರಾಂ ಪುತ್ರ ರಕ್ಷಿತ್‌ ಶಿವರಾಮ್‌ ಅವರಿಗೆ ಟಿಕೆಟ್ ನೀಡಲಾಗಿದೆ.
ಹಾಲಿ ಶಾಸಕರು ಇರುವ ಪುಲಕೇಶಿನಗರ (ಅಖಂಡ ಶ್ರೀನಿವಾಸಮೂರ್ತಿ), ಹರಿಹರ ಕ್ಷೇತ್ರದಿಂದ ಎಂ. ರಾಮಪ್ಪ, ಕುಂದಗೋಳ ಕ್ಷೇತ್ರದಿಂದ ಕುಸುಮಾ ಶಿವಳ್ಳಿ, ಅಫಜಲಪುರದಿಂದ ಎಂ.ವೈ.ಪಾಟೀಲ, ಶಿಡ್ಲಘಟ್ಟದಿಂದ ವಿ.ಮುನಿಯಪ್ಪ ಕ್ಷೇತ್ರಗಳಿಗೆ ಅಭ್ಯರ್ಥಿಯ ಹೆಸರನ್ನು ಘೋಷಿಸಿಲ್ಲ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

5 × five =