ಗ್ಯಾರಂಟಿ ಕಾರ್ಡ್ ವಿತರಿಸಿ ಕೂಲಿ ಕಾರ್ಮಿಕರಿಗೆ ಅಡ್ಡಿಪಡಿಸುತ್ತಿರುವ ಕಾಂಗ್ರೆಸ್

ಯುವ ಭಾರತ ಸುದ್ದಿ ಬೆಳಗಾವಿ :
ಬೆಳಗಾವಿ ಗ್ರಾಮೀಣ ಶಾಸಕಿ ಹಾಗೂ ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಲಕ್ಷ್ಮಿ ಹೆಬ್ಬಾಳಕರ ಅವರ ಸುಪುತ್ರ ಮೃಣಾಲ ಹೆಬ್ಬಾಳಕರ ಅವರು ಉದ್ಯೋಗ ಖಾತರಿ ಯೋಜನೆ ಅಡಿ ಕೆಲಸ ಮಾಡುತ್ತಿರುವ ಕಾರ್ಮಿಕರಿಗೆ ಕೆಲಸಕ್ಕೆ ತಡೆಯೊಡ್ಡಿ ಚುನಾವಣಾ ಪ್ರಚಾರ ಮಾಡಿರುವುದು ಇದೀಗ ಬೆಳಕಿಗೆ ಬಂದಿದೆ.

ಗುರುವಾರ ಬೆಳಗಾವಿ ತಾಲೂಕು ಬೆಳಗುಂದಿ ಗ್ರಾಮದಲ್ಲಿ ಉದ್ಯೋಗ ಖಾತರಿ ಯೋಜನೆಯಡಿ ಕೆಲಸ ಮಾಡುತ್ತಿದ್ದವರನ್ನು ತಡೆದು ಈ ಬಾರಿ ಬೆಳಗಾವಿ ಗ್ರಾಮೀಣ ಮತ ಕ್ಷೇತ್ರದಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ತಮ್ಮ ತಾಯಿ ಲಕ್ಷ್ಮಿ ಹೆಬ್ಬಾಳಕರ ಅವರಿಗೆ ನೀವೆಲ್ಲರೂ ಮತ ಹಾಕಬೇಕು ಎಂದು ಕಾಂಗ್ರೆಸ್ ಪಕ್ಷದ ಗ್ಯಾರಂಟಿ ಕಾರ್ಡ್ ನೀಡಿ ಮನವಿ ಮಾಡಿದ್ದಾರೆ. ಇದರಿಂದ ಉದ್ಯೋಗ ಖಾತರಿ ಯೋಜನೆ ಅಡಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕರ ಕೆಲಸಕ್ಕೆ ಕೆಲಹೊತ್ತು ಅಡಚಣೆಯಾಗಿದೆ.

ಲಕ್ಷ್ಮೀ ಹೆಬ್ಬಾಳಕರ ಈ ಬಾರಿ ಹೇಗಾದರೂ ಮಾಡಿ ಚುನಾವಣೆಯಲ್ಲಿ ಗೆಲ್ಲಲೇ ಬೇಕು ಎಂಬ ಪ್ರಯತ್ನದಲ್ಲಿ ಕೂಲಿ ನಾಲಿ ಮಾಡಿ ಕೆಲಸ ಮಾಡುತ್ತಿರುವ ಜನರನ್ನು ತಡೆಯುತ್ತಿರುವುದಕ್ಕೆ ಕಾರ್ಮಿಕರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
YuvaBharataha Latest Kannada News