170-180 ಅಭ್ಯರ್ಥಿಗಳ ಬಿಜೆಪಿ ಮೊದಲ ಪಟ್ಟಿ ಬಿಡುಗಡೆಗೆ ಕ್ಷಣಗಣನೆ !

ಯುವ ಭಾರತ ಸುದ್ದಿ ಬೆಂಗಳೂರು:
ಕರ್ನಾಟಕ ವಿಧಾನಸಭಾ ಚುನಾವಣೆಗೆ ಆಡಳಿತಾರೂಢ ಬಿಜೆಪಿ ತನ್ನ 170 ರಿಂದ 180 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಇಂದು, ಸೋಮವಾರ (ಎಪ್ರಿಲ್ 10) ಸಂಜೆ ಬಿಡುಗಡೆ ಮಾಡಲಿದೆ ಎಂದು ಪಕ್ಷದ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.
ಇಂದು, ಸೋಮವಾರ ಸಂಜೆಯೊಳಗೆ ಪಟ್ಟಿಯನ್ನು ಬಿಡುಗಡೆ ಮಾಡಲಾಗುವುದು ಎಂದು ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ನವದೆಹಲಿಯಲ್ಲಿ ಸುದ್ದಿಗಾರರಿಗೆ ತಿಳಿಸಿದರು.
ಪಟ್ಟಿಯನ್ನು ಅಂತಿಮಗೊಳಿಸಲು ಇಂದು ಇನ್ನೂ ಒಂದು ಸಭೆ ಇದೆ, ಇಂದು ಸಂಜೆಯೊಳಗೆ ಬಿಡುಗಡೆ ಮಾಡುವ ವಿಶ್ವಾಸವಿದೆ ಎಂದು ಅವರು ಹೇಳಿದ್ದಾರೆ.
ಮೊದಲ ಪಟ್ಟಿಯಲ್ಲಿ 170 ರಿಂದ 180 ಹೆಸರುಗಳನ್ನು ಪ್ರಕಟಿಸಲಾಗುವುದು ಎಂದರು.
YuvaBharataha Latest Kannada News