Breaking News

ಲಕ್ಷಣರಹಿತ ಸೋಂಕಿತರಿಗೆ ಪ್ರತಿ ತಾಲ್ಲೂಕಿನಲ್ಲಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭ: ಜಿಲ್ಲಾಧಿಕಾರಿ

Spread the love

ಲಕ್ಷಣರಹಿತ ಸೋಂಕಿತರಿಗೆ ಪ್ರತಿ ತಾಲ್ಲೂಕಿನಲ್ಲಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್ ಆರಂಭ: ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ

ಬೆಳಗಾವಿ; ಜು18: ಲಕ್ಷಣರಹಿತ ಕೋವಿಡ್ ಸೋಂಕಿತರನ್ನು ಪ್ರತ್ಯೇಕವಾಗಿ ಇರಿಸಲು ಅನುಕೂಲವಾಗುವಂತೆ ಜಿಲ್ಲೆಯ ಹತ್ತು ತಾಲ್ಲೂಕಿನಲ್ಲಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್‌ ಆರಂಭಿಸಲಾಗಿದೆ. ಅದೇ ರೀತಿ ಪ್ರತಿ ತಾಲ್ಲೂಕಿನ ಆಸ್ಪತ್ರೆಯಲ್ಲಿ ಆಕ್ಸಿಜನ್ ವ್ಯವಸ್ಥೆ ಹೊಂದಿರುವ 30 ಬೆಡ್ ಕೂಡ ಸಿದ್ಧವಾಗಿಟ್ಟುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದರು.

ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶನಿವಾರ (ಜು.18) ನಡೆದ ಪತ್ರಿಕಾಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

10 ತಾಲ್ಲೂಕಿನಲ್ಲಿ ಕೋವಿಡ್ ಕೇರ ಸೆಂಟರ್ ಸ್ಥಾಪನೆ, ಲಕ್ಷಣರಹಿತ ರೋಗಿಗಳನ್ನು ಇರಿಸಲಾಗುತ್ತಿದೆ.
ಬೈಲಹೊಂಗಲ, ಸವದತ್ತಿ, ರಾಮದುರ್ಗ ಮತ್ತು ಗೋಕಾಕ ನಲ್ಲಿ ಈಗಾಗಲೇ ಲಕ್ಷಣರಹಿತರಿಗೆ ಚಿಕಿತ್ಸೆ ಆರಂಭಿಸಲಾಗಿದ್ದು, ವೈದ್ಯರ ತಂಡ ನಿಯೋಜಿಸಲಾಗಿದೆ.

ಗಂಭೀರ ಪ್ರಕರಣ ಹಾಗೂ ಚಿಕಿತ್ಸೆ ಅಗತ್ಯವಿರುವ ವರಿಗೆ ಮಾತ್ರ ಬಿಮ್ಸ್ ಗೆ ದಾಖಲು ಮಾಡಲಾಗುತ್ತಿದೆ.
ಲಕ್ಷಣರಹಿತರಿಗೆ ತಾಲ್ಲೂಕು ಮಟ್ಟದಲ್ಲಿ ಹತ್ತು ದಿನಗಳ ಕಾಲ ಸರ್ಕಾರದ ಮಾರ್ಗಸೂಚಿ ಪ್ರಕಾರ ಊಟೋಪಹಾರ ಮತ್ತು ಚಿಕಿತ್ಸೆ ವ್ಯವಸ್ಥೆ ಮಾಡಲಾಗಿದೆ.
768 ಬೆಡ್ ಗಳು ಹತ್ತು ಕೋವಿಡ್ ಕೇರ್ ಸೆಂಟರ್ ನಲ್ಲಿ ಲಭ್ಯವಿವೆ. ಖುದ್ದಾಗಿ ಪರಿಶೀಲನೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಲ್ಲಿ ಇನ್ನೂ ಹೆಚ್ಚಿನ ಬೆಡ್ ಕಲ್ಪಿಸುವ ಅವಕಾಶ ಇದೆ.

ಇ.ಎಸ್.ಐ/ಕೆ.ಎಲ್.ಇ ಆಸ್ಪತ್ರೆಯಲ್ಲಿ ಹಾಸಿಗೆ ಲಭ್ಯ:

ಬೆಳಗಾವಿ ನಗರದ ಇ.ಎಸ್.ಐ. ಆಸ್ಪತ್ರೆಯಲ್ಲೂ 25 ಬೆಡ್ ಸಜ್ಜುಗೊಳಿಸಲಾಗಿದ್ದು, ಕೆ.ಎಲ್.ಇ ಆಸ್ಪತ್ರೆಯಲ್ಲಿ 65 ಬೆಡ್ ವ್ಯವಸ್ಥೆ ಮಾಡಲಾಗಿದೆ. ಇನ್ನೂ 30 ಬೆಡ್ ಕಲ್ಪಿಸಲು ಕೋರಲಾಗಿದೆ ಎಂದು ಜಿಲ್ಲಾಧಿಕಾರಿ ಹಿರೇಮಠ ವಿವರಿಸಿದರು.
ಜಿಲ್ಲಾ ಆಸ್ಪತ್ರೆ ಯಲ್ಲಿ ಇನ್ನೂ ನೂರು ಬೆಡ್ ಹೆಚ್ಚಳ ಮಾಡಲಾಗಿದೆ.
ಕೋವಿಡ್ ಹೊರತುಪಡಿಸಿ ಇತರೆ ರೋಗಿಗಳನ್ನು ಸರಕಾರದ ಯೋಜನೆಯಡಿ ಖಾಸಗಿ ಆಸ್ಪತ್ರೆಗಳಿಗೆ ಕಳಿಸಲಾಗುವುದು. ಖಾಸಗಿ ಆಸ್ಪತ್ರೆಯವರು ಕೂಡ ಇತರೆ ರೋಗಿಗಳ ಚಿಕಿತ್ಸೆಗೆ ಮುಂದಾಗಿವೆ.
ಕೆಲ ಸಣ್ಣ ಆಸ್ಪತ್ರೆಯ ವೈದ್ಯರು ಸರ್ಕಾರಿ ಅಥವಾ ಇತರೆ ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗೆ ಆಸಕ್ತಿ ತೋರಿಸಿದ್ದಾರೆ. ಅವರ ಪಟ್ಟಿ ತಯಾರಿಸಿ ಅವರ ಸೇವೆಯನ್ನು ಬಳಸಿಕೊಳ್ಳಲಾಗುವುದು.

ಜಿಲ್ಲೆಯಲ್ಲಿ 21 ಮರಣ:

ಜಿಲ್ಲೆಯಲ್ಲಿ ಇದುವರೆಗೆ 33,271 ಮಾದರಿ ಪರೀಕ್ಷೆ
28950 ವರದಿಗಳು ನೆಗೆಟಿವ್ ಬಂದಿದ್ದು, 795 ಜನರಲ್ಲಿ ಸೋಂಕು ದೃಢಪಟ್ಟಿರುತ್ತದೆ. ಇದುವರೆಗೆ 507 ಜನರು ಗುಣಮುಖರಾಗಿ ಬಿಡುಗಡೆ ಹೊಂದಿದ್ದಾರೆ.

ಜಿಲ್ಲೆಯಲ್ಲಿ ತಜ್ಞರ ತಂಡ ಕೂಡ ಕಾರ್ಯನಿರ್ವಹಿಸುತ್ತಿದ್ದು, ಅವರು ಕೂಡ ಸಲಹೆ-ಸೂಚನೆಗಳನ್ನು ನೀಡುತ್ತಿದೆ.
ಜಿಲ್ಲೆಯಲ್ಲಿ ಇದುವರೆಗೆ 21 ಮರಣ ಸಂಭವಿಸಿದ್ದು, ಈ ಮರಣ ಪ್ರಮಾಣವನ್ನು ತಡೆಗಟ್ಟುವುದು ನಮ್ಮ ಆದ್ಯತೆಯಾಗಿದೆ.
ಜಿಲ್ಲೆಗೆ ಒಂದು ಸಾವಿರ ರ್ಯಾಪಿಡ್ ಆಂಟಿಜೆನ್ ಕಿಟ್ ಬಂದಿದ್ದು, ಮಾದರಿ ಪರೀಕ್ಷಿಸಿದ ಹದಿನೈದು ನಿಮಿಷಗಳಲ್ಲಿ ಫಲಿತಾಂಶ ದೊರೆಯಲಿದೆ.

ಕುಟುಂಬಕ್ಕೆ ಶವ ಹಸ್ತಾಂತರ ಅಥವಾ ಶವಸಂಸ್ಕಾರ ವಿಷಯದಲ್ಲಿ ಹೆಚ್ಚಿನ ಜಾಗರೂಕತೆ ವಹಿಸಲಾಗಿದೆ. ಯಾವುದೇ ರೀತಿಯ ಲೋಪವಾಗದಂತೆ ಎಲ್ಲ ರೀತಿಯ ಎಚ್ಚರಿಕೆ ವಹಿಸಲಾಗುವುದು.

ಜಿಲ್ಲಾ ಆಸ್ಪತ್ರೆಯಲ್ಲಿ ವೃದ್ಧನ ಮರಣ ತನಿಖೆಗೆ ಆದೇಶ ನೀಡಲಾಗಿದೆ.
ಉಸಿರಾಟ ತೊಂದರೆ ಇರುವ ರೋಗಿಗಳನ್ನು ಖಾಸಗಿ ಆಸ್ಪತ್ರೆಯವರು ತಕ್ಷಣವೇ ಬಿಮ್ಸ್ ಆಸ್ಪತ್ರೆಗೆ ಕಳಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು.

ಮಾದರಿ ಪರೀಕ್ಷೆ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ಆದ್ದರಿಂದ ಸೋಂಕಿತರ ಪ್ರಮಾಣದಲ್ಲಿ ಹೆಚ್ಚಳ ಕಂಡುಬಂದಿದೆ. ಆತಂಕ ಪಡುವ ಅಗತ್ಯವಿಲ್ಲ ಎಂದರು.
ಕ್ವಾರಂಟೈನ್ ನಿಯಮಾವಳಿ ಉಲ್ಲಂಘಿಸಿದವರ ವಿರುದ್ಧ ಜಿಲ್ಲೆಯಲ್ಲಿ ಇದುವರೆಗೆ 161 ಪ್ರಕರಣ ದಾಖಲು ಮಾಡಲಾಗಿದೆ.

ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಕ್ಕಾರ ಮತ್ತಿತರರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
****


Spread the love

About Yuva Bharatha

Check Also

ಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದ ಮೃಣಾಲ್ ಕಾಮತ್ ಗೆ ರಾಷ್ಟ್ರ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ ಪ್ರಶಸ್ತಿ

Spread the loveಬೆಳಗಾವಿ ಆರ್ ಎಲ್ ಕಾನೂನು ಮಹಾವಿದ್ಯಾಲಯದ ಮೃಣಾಲ್ ಕಾಮತ್ ಗೆ ರಾಷ್ಟ್ರ ಮಟ್ಟದ ಮೂಟ್ ಕೋರ್ಟ್ ಸ್ಪರ್ಧೆಯಲ್ಲಿ …

Leave a Reply

Your email address will not be published. Required fields are marked *

four × 4 =