ದಾನಗಳಲ್ಲಿ ರಕ್ತದಾನ ಶ್ರೇಷ್ಠವಾಗಿದ್ದು, ರಕ್ತದಾನ ಮಾಡಿ ಜೀವ ಉಳಿಸುವ-ಸನತ ಜಾರಕಿಹೊಳಿ!!
ಯುವ ಭಾರತ ಸುದ್ದಿ ಗೋಕಾಕ: ಎಲ್ಲಾ ದಾನಗಳಲ್ಲಿ ರಕ್ತದಾನ ಶ್ರೇಷ್ಠವಾಗಿದ್ದು, ರಕ್ತದಾನ ಮಾಡಿ ಜೀವ ಉಳಿಸುವ ಪವಿತ್ರ ಕಾರ್ಯದಲ್ಲಿ ವಿದ್ಯಾರ್ಥಿಗಳು ಪಾಲ್ಗೋಳುವಂತೆ ಲಕ್ಷ್ಮೀ ಎಜ್ಯುಕೇಷನ್ ಟ್ರಸ್ಟ್ ನ ವ್ಯವಸ್ಥಾಪಕ ನಿರ್ದೇಶಕ ಸನತ ಜಾರಕಿಹೊಳಿ ಹೇಳಿದರು.
ಬುಧವಾರದಂದು ನಗರದ ಲಕ್ಷ್ಮೀ ಎಜ್ಯುಕೇಷನ್ ಸಭಾಂಗಣದಲ್ಲಿ ಎಚ್.ಡಿ.ಎಫ್.ಸಿ ಬ್ಯಾಂಕ್, ರೋಟರಿ ಸಂಸ್ಥೆ ಹಾಗೂ ಶ್ರೀ ಲಕ್ಷ್ಮಣರಾವ ಜಾರಕಿಹೊಳಿ ಪದವಿ ಮಹಾವಿದ್ಯಾಲಯದ ಎನ್.ಎಸ್.ಎಸ್ ಘಟಕದ ಇವುಗಳ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಕ್ತವನ್ನು ಉತ್ಪಾದಿಸಲು ಸಾಧ್ಯವಿಲ್ಲ, ಅದನ್ನು ದಾನಿಗಳಿಂದಲೆ ಪಡೆಯಬೇಕು. ರಕ್ತದಾನ ಮಾಡಿ ಜೀವ ಉಳಿಸಿ, ವಿದ್ಯಾರ್ಥಿಗಳು ವಿದ್ಯಾರ್ಥಿ ಜೀವನದಲ್ಲಿ ಸಮಾಜಿಕ ಕಳಕಳಿಯ ಕಾರ್ಯಗಳಲ್ಲಿ ಪಾಲ್ಗೋಳುವ ಮನೋಭಾವ ಬೆಳೆಸಿಕೊಳ್ಳಬೇಕು. ಶಿಕ್ಷಣದೊಂದಿಗೆ ಉತ್ತಮ ಸಂಸ್ಕಾರವAತರಾಗಿ ಒಳ್ಳೆಯ ನಾಗರಿಕರಾಗಿರೆಂದು ಹಾರೈಸಿದರು.
ಈ ಸಂದರ್ಭದಲ್ಲಿ ಎಚ್.ಡಿ.ಎಫ್.ಸಿ ಬ್ಯಾಂಕ್ ವ್ಯವಸ್ಥಾಪಕ ಪ್ರಕಾಶ ಪಾಟೀಲ, ರೋಟರಿ ಸಂಸ್ಥೆಯ ಡಾ.ಬಿ.ಆರ್.ಕಪ್ಪಲಗುದ್ದಿ, ವಿನೋದ ಸುಪಲಿ, ಪ್ರಾಚಾರ್ಯರಾದ ಐ.ಎಸ್.ಪವಾರ, ಅರುಣ್ ಪೂಜೇರ, ಎ.ಬಿ.ಪಾಟೀಲ ಇದ್ದರು.