ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 11 ನೇ ಘಟಿಕೋತ್ಸವಕ್ಕೆ ದಿನ ನಿಗದಿ
ಯುವ ಭಾರತ ಸುದ್ದಿ ಬೆಳಗಾವಿ :
ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ 11 ನೇ ವಾರ್ಷಿಕ ಘಟಿಕೋತ್ಸವವನ್ನು ಮಾರ್ಚ್ 20 (ಸೋಮವಾರ)ರಂದು ಬೆಳಗಿನ 11:೦೦ ಗಂಟೆಗೆ ಸುವರ್ಣ ವಿಧಾನಸೌಧದ ಸಭಾಂಗಣದಲ್ಲಿ ಜರುಗಿಸಲಾಗುವುದು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕುಲಾಧಿಪತಿ ಹಾಗೂ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಹಿಸಲಿದ್ದಾರೆ ಎಂದು ರಾಜಭವನದ ರಾಜ್ಯಪಾಲರ ವಿಶೇಷ ಕಾರ್ಯದರ್ಶಿಗಳು ತಿಳಿಸಿರುತ್ತಾರೆ. ಉನ್ನತ ಶಿಕ್ಷಣ ಸಚಿವ ಹಾಗೂ ಸಹ ಕುಲಾಧಿಪತಿ ಡಾ. ಸಿ.ಎನ್. ಅಶ್ವತ್ಥ ನಾರಾಯಣ ಉಪಸ್ಥಿತರಿರುವರು. ಕರ್ನಾಟಕ ರಾಜ್ಯ ಉನ್ನತ ಶಿಕ್ಷಣ ಪರಿಷತ್ ಉಪಾಧ್ಯಕ್ಷ ಪ್ರೊ. ಬಿ. ತಿಮ್ಮೇಗೌಡ ಘಟಿಕೋತ್ಸವ ಭಾಷಣ ನಡೆಸಿಕೊಡಲಿದ್ದಾರೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.