ವೀರ ಕಂಬಳ ಸಿನೆಮಾದಲ್ಲಿ ಬಣ್ಣ ಹಚ್ಚಿದ ಧರ್ಮಸ್ಥಳ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ : ಫೋಟೋ ವೈರಲ್
ಯುವ ಭಾರತ ಸುದ್ದಿ ಮಂಗಳೂರು :
ಖ್ಯಾತ ನಿರ್ದೇಶಕ ಎಸ್.ವಿ ರಾಜೇಂದ್ರ ಸಿಂಗ್ ಬಾಬು ನಿರ್ದೇಶನದ ‘ವೀರ ಕಂಬಳ’ ಸಿನಿಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ಡಾ. ವೀರೇಂದ್ರ ಹೆಗ್ಗಡೆ ಅತಿಥಿ ಪಾತ್ರದಲ್ಲಿ ನಟಿಸುತ್ತಿದ್ದಾರೆ. ತುಳುನಾಡಿನ ಸುಪ್ರಸಿದ್ಧ ಕಂಬಳ ಸ್ಪರ್ಧೆಯನ್ನು ಕೇಂದ್ರವಾಗಿಟ್ಟುಕೊಂಡು ಈ ಚಿತ್ರವನ್ನು ನಿರ್ಮಾಣ ಮಾಡಲಾಗುತ್ತಿದೆ. ಇದರಲ್ಲಿ ಡಾ.ವೀರೇಂದ್ರ ಹೆಗ್ಗಡೆಯವರು ನಟಿಸುತ್ತಿದ್ದಾರೆ ಎಂದು ಫಿಲ್ಮ್‌ಬೀಟ್. ಕಾಮ್ ವರದಿ ಮಾಡಿದೆ.
‘ವೀರ ಕಂಬಳ’ ಸಿನಿಮಾ ಸಿನೆಮಾ ಕನ್ನಡ ಮಾತ್ರವಲ್ಲದೆ ತೆಲುಗು, ತಮಿಳು, ಹಿಂದಿ ಹಾಗೂ ತುಳು ಭಾಷೆಗಳಲ್ಲಿ ತೆರೆಗೆ ಬರಲಿದೆ. ತುಳು ಭಾಷೆಯಲ್ಲಿ ‘ಬಿರ್ದ್‌ದ ಕಂಬಳ’ ಹೆಸರಿನಲ್ಲಿ ಸಿನಿಮಾ ಮೂಡಿ ಬರುತ್ತಿದೆ. 7 ವರ್ಷಗಳ ಕಾಲ ಸಂಶೋಧನೆ ನಡೆಸಿ ಚಿತ್ರದ ಕಥೆ, ಚಿತ್ರಕಥೆ ಹೆಣೆಯಲಾಗಿದೆ ಎಂದು ವರದಿ ತಿಳಿಸಿದೆ.
ಅರುಣ್ ರೈ ತೋಡಾರ್ ಚಿತ್ರಕ್ಕೆ ಬಂಡವಾಳ ಹೂಡುತ್ತಿದ್ದಾರೆ. ಸದ್ಯ ಈ ಸಿನೆಮಾದಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿಗಳಾದ ವೀರೇಂದ್ರ ಹೆಗ್ಗಡೆ ಅವರು ಮೇಕಪ್ ಹಾಕಿಕೊಳ್ಳುತ್ತಿರುವ ಫೋಟೊ ವೈರಲ್ ಆಗುತ್ತಿದೆ. ತುಳುನಾಡಿನ ಪ್ರಸಿದ್ಧ ರಂಗಭೂಮಿ ಕಲಾವಿದರ ಜೊತೆಗೆ ಪ್ರಕಾಶ್ ರಾಜ್, ಆರ್ಮುಗ ರವಿಶಂಕರ್ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದಾರೆ. ಕಂಬಳದ ಕೋಣ ಓಡಿಸುವುದರಲ್ಲಿ ಪರಿಣಿತರಾಗಿರುವ ಶ್ರೀನಿವಾಸ್ ಗೌಡ ಹಾಗೂ ರಂಗಭೂಮಿ ಕಲಾವಿದ ಸ್ವರಾಜ್ ಶೆಟ್ಟಿ ಕಂಬಳದ ದೃಶ್ಯಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಆದಿತ್ಯಾ, ರಾಧಿಕಾ ಚೇತನ್, ಭೋಜರಾಜ್, ನವೀನ್ ಪಡೀಲ್ ಚಿತ್ರದಲ್ಲಿದ್ದಾರೆ. ತುಳುನಾಡಿನ ಭಾಷೆ, ಸಂಸ್ಕೃತಿ ಸೊಗಡನ್ನು ಈ ಸಿನಿಮಾದಲ್ಲಿದೆ.
ಸಾಮಾಜಿಕ , ಶೈಕ್ಷಣಿಕ , ಧಾರ್ಮಿಕ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸುತ್ತಿರುವ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಚಿತ್ರಕ್ಕೆ ಬಣ್ಣ ಹಚ್ಚುತ್ತಿರುವ ಫೋಟೋ ಫುಲ್ ವೈರಲ್ ಆಗಿದೆ. ಸುಮಾರು 7 ವರ್ಷಗಳ ಕಾಲ ಸಂಶೋಧನೆ ನಡೆಸಿ ನಿರ್ಮಿಸಲಾಗುತ್ತಿರುವ ವೀರ ಕಂಬಳ ಸಿನಿಮಾದ ಚಿತ್ರೀಕರಣ ಭರದಿಂದ ಸಾಗಿದ್ದು , ಕಂಬಳವನ್ನೇ ಕೇಂದ್ರವನ್ನಾಗಿಟ್ಟುಕೊಂಡು ಸಿನಿಮಾ ತಯಾರಾಗುತ್ತಿದೆ . ಈ ಚಿತ್ರ ಕನ್ನಡ ಮಾತ್ರವಲ್ಲದೇ ತೆಲುಗು , ತಮಿಳು , ಹಿಂದಿ ಹಾಗೂ ತುಳು ಭಾಷೆಗಳಲ್ಲಿಯೂ ತೆರೆಗೆ ಬರಲಿದೆ . ತುಳು ಭಾಷೆಯಲ್ಲಿ ‘ ಬಿರ್ದ್‌ದ ಕಂಬಳ ಹೆಸರಿನಲ್ಲಿ ಚಿತ್ರ ಮೂಡಿ ಬರಲಿದೆ .