Breaking News

ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ

Spread the love

ವಿದ್ಯಾರ್ಥಿಗಳಿಗೆ ಲ್ಯಾಪ್‍ಟಾಪ್ ವಿತರಣೆ

ಯುವ ಭಾರತ ಸುದ್ದಿ ಬೆಳಗಾವಿ :
ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಪ್ರತಿ ವರ್ಷದಂತೆ ಪ್ರಸಕ್ತ ವರ್ಷವೂ ತನ್ನ ಆಂತರಿಕ ಸಂಪನ್ಮೂಲದ ವತಿಯಿಂದ ಎಸ್.ಸಿ.ಎಸ್.ಪಿ./ಟಿ.ಎಸ್.ಪಿ. ಯೋಜನೆಗಳಡಿ ವಿ.ತಾ.ವಿ. ಬೆಳಗಾವಿ ಹಾಗೂ ಇತರೆ ಸ್ನಾತಕೋತ್ತರ ಕೇಂದ್ರಗಳಾದ ಮೈಸೂರು, ಮುದ್ದೇನಹಳ್ಳಿ, ಕಲಬುರ್ಗಿ ಮತ್ತು ವಿಶ್ವವಿದ್ಯಾಲಯದ ತಾಂತ್ರಿಕ ಮಹಾವಿದ್ಯಾಲಯ, ದಾವಣಗೆರೆಗಳಲ್ಲಿ ಪ್ರಥಮ ವರ್ಷದ ಸ್ನಾತಕೋತ್ತರ ಪದವಿಯಲ್ಲಿ ಮತ್ತು ಎಮ್.ಸಿ.ಎ. (ಲ್ಯಾಟರಲ್)ನ ಒಟ್ಟು 204 ಅನುಸೂಚಿತ ಜಾತಿ/ಅನುಸೂಚಿತ ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ಗಳನ್ನು ಖರೀದಿಸಿ ಆಯಾ ಸ್ನಾತಕೋತ್ತರ ಕೇಂದ್ರಗಳಿಗೆ ಸರಬರಾಜು ಮಾಡುತ್ತದೆ.

ಈ ಹಿನ್ನಲೆಯಲ್ಲಿ ಬೆಳಗಾವಿಯ ವಿತಾವಿ ಸ್ನಾತಕೋತ್ತರ ಕೇಂದ್ರದಲ್ಲಿ ಪ್ರಥಮ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಅನುಸೂಚಿತ ಜಾತಿ, ಅನುಸೂಚಿತ ಪಂಗಡ ಮತ್ತು ಇತರ ಹಿಂದುಳಿದ ಘಟಕ
ವಿದ್ಯಾರ್ಥಿಗಳಿಗೆ ಬುಧವಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

ಡಾ. ಟಿ. ಎನ್. ಶ್ರೀನಿವಾಸ, ಕುಲಸಚಿವ (ಮೌಲ್ಯಮಾಪನ) ಹಾಜರಿದ್ದರು. ಡಾ.ಪ್ರಲ್ಹಾದ್ ರಾಠೋಡ್, ಲೈಜನ್ ಆಫೀಸರ್, ಅನುಸೂಚಿತ ಜಾತಿ/ಅನುಸೂಚಿತ ಪಂಗಡ ಮತ್ತು ಇತರೆ ಹಿಂದುಳಿದ ಘಟಕ, ವಿ.ತಾ.ವಿ. ಬೆಳಗಾವಿ ಸಮಾರಂಭ ನಡೆಸಿಕೊಟ್ಟರು.

ಲ್ಯಾಪ್‌ಟಾಪ್‌ಗಳನ್ನು ವಿತರಿಸಿದ ಕುಲಪತಿ ಡಾ. ವಿದ್ಯಾಶಂಕರ ಎಸ್. ಮಾತನಾಡಿ, ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಅನುಸೂಚಿತ ಜಾತಿ/ಅನುಸೂಚಿತ ಪಂಗಡಗಳಿಗೆ ಸೇರಿದ ವಿದ್ಯಾರ್ಥಿಗಳಿಗೆ ನೀಡುತ್ತಿರುವ ಇತರೆ ಸವಲತ್ತುಗಳನ್ನು ಸದುಪಯೋಗ ಮಾಡಿಕೊಳ್ಳುವಂತೆ ಹಾಗೂ ಸ್ನಾತಕ/ ಸ್ನಾತಕೋತ್ತರ ಪದವಿಯಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದು ಉತ್ತಿರ್ಣರಾಗಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.
ಎಮ್.ಬಿ.ಎ. ವಿಭಾಗದ ಸಂಶೋಧನಾ ವಿದ್ಯಾರ್ಥಿನಿ ಮಿಲಾಗ್ರೇನ ಮೇರಿ ಕಾರ್ಯಾಗಾರ ನಡೆಸಿಕೊಟ್ಟರು.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

13 + 12 =