Breaking News

ಬೋರಗಾಂವದ ಟೆಕ್ಸ್ ಟೈಲ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ : ಯಂತ್ರೋಪಕರಣ ಸೇರಿ ಲಕ್ಷಾಂತರ ಸಾಮಗ್ರಿಗಳು ಬೆಂಕಿಗೆ ಆಹುತಿ

Spread the love

ಬೋರಗಾಂವದ ಟೆಕ್ಸ್ ಟೈಲ್ ನಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ : ಯಂತ್ರೋಪಕರಣ ಸೇರಿ ಲಕ್ಷಾಂತರ ಸಾಮಗ್ರಿಗಳು ಬೆಂಕಿಗೆ ಆಹುತಿ

ಯುವ ಭಾರತ ಸುದ್ದಿ ಬೆಳಗಾವಿ :
ನಿಪ್ಪಾಣಿ ತಾಲೂಕಿನ ಬೋರಗಾಂವ ಪಟ್ಟಣದ ಟೆಕ್ಸ್ ಟೈಲ್ ಲ್ಲಿ ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಆಕಸ್ಮಿಕವಾಗಿ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಯಂತ್ರೋಪಕರಣಗಳು ಮತ್ತು ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಸಂಭವಿಸಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ.

ಫೆ.25ರoದು ಬೆಳಗಿನ ಜಾವ 4 ಗಂಟೆಯ ಸಮಯದಲ್ಲಿ ಬೋರಗಾoವ ಪಟ್ಟಣ ಹದ್ದಿಯ ಶ್ರೀ ಗಣೇಶ್ ಟೆಕ್ಸ್ ಟೈಲ್ ಲ್ಲಿ ಆಕಸ್ಮಿಕವಾಗಿ ವಿದ್ಯುತ್ ಶಾರ್ಟ್ ಸರ್ಕಿಟ್ ನಿಂದ ಬೆಂಕಿ ಹತ್ತಿ 9 ಪಾವರ್ ಲೂಮ್ ಮಷಿನ್ ಮತ್ತು ಕಚ್ಚಾ ಮಟೀರಿಯಲ್ ಗಳು ಬೆಂಕಿಗೆ ಆಹುತಿಯಾಗಿವೆ.

ಈ ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ದೌಡಾಯಿಸಿದ ಸದಲಗಾ ಪೊಲೀಸರು ಸ್ಥಳ ಪರಿಶೀಲನೆ ನಡೆಸಿದ್ದಾರೆ. ಈ ಘಟನೆಯಿಂದ ಯಾವುದೇ ರೀತಿಯ ಪ್ರಾಣ ಹಾನಿ ಆಗಿಲ್ಲ. ಸದಲಗಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Yuva Bharatha

Check Also

13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ

Spread the love13 ನೇ ಎಂ. ಕೆ. ನಂಬಿಯಾರ್ ರಾಷ್ಟ್ರಮಟ್ಟದ ಅಣಕು ನ್ಯಾಯಾಲಯ ಸ್ಪರ್ಧೆ ಉದ್ಘಾಟನೆ ಬೆಳಗಾವಿ: “ವಕೀಲರು ನ್ಯಾಯಾಲಯದ …

Leave a Reply

Your email address will not be published. Required fields are marked *

2 × one =