Breaking News

ಕನ್ನಡ ಚಿತ್ರರಂಗದ ಪ್ರಸಿದ್ದ ಹಿರಿಯ ನಿರ್ದೇಶಕ ಎಸ್ .ಕೆ. ಭಗವಾನ್ (95) ನಿಧನರಾಗಿದ್ದಾರೆ

Spread the love

ಕನ್ನಡ ಚಿತ್ರರಂಗದ ಪ್ರಸಿದ್ದ ಹಿರಿಯ ನಿರ್ದೇಶಕ ಎಸ್ .ಕೆ. ಭಗವಾನ್ (95) ನಿಧನರಾಗಿದ್ದಾರೆ

ಸುಮಾರು 20 ವರ್ಷದಿಂದ ಹೃದಯದ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು, ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೇ, ಸೋಮವಾರ ಬೆಳಗ್ಗೆ 6.10ರಲ್ಲಿ ಅವರು ಇಹಲೋಕ ತ್ಯಜಿಸಿದರು. ಮಧ್ಯಾಹ್ನ 12.30ರ ನಂತರ ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಅವರ ಕುಟುಂಬಸ್ಥರು ತಿಳಿಸಿದ್ದಾರೆ.

ಭಗವಾನ್‌ ಅವರ ನಿಧನಕ್ಕೆ ಕನ್ನಡ ಚಿತ್ರರಂಗ, ಗಣ್ಯರು, ಅಭಿಮಾನಿಗಳು ಕಂಬನಿ ಮಿಡಿದಿದ್ದಾರೆ. ಮೈಸೂರಿನಲ್ಲಿ ಜನಿಸಿದ್ದ ಎಸ್‌.ಕೆ.ಭಗವಾನ್‌ ಬೆಂಗಳೂರಿನಲ್ಲಿ ಶಿಕ್ಷಣ ಪಡೆದರು. ಹಿರಣ್ಣಯ್ಯ ಮಿತ್ರ ಮಂಡಳಿ ನಾಟಕಗಳ ಮೂಲಕ ಬಣ್ಣದ ಬದುಕನ್ನು ಆರಂಭಿಸಿದ್ದ ಭಗವಾನ್‌, ‘ಭಾಗ್ಯೋದಯ’ ಸಿನಿಮಾ ಮೂಲಕ ನಟನಾಗಿ ಚಿತ್ರರಂಗಕ್ಕೆ ಹೆಜ್ಜೆ ಇಟ್ಟರು. ಕ್ಯಾಮೆರಾಮೆನ್‌ ಆಗಿದ್ದ ದೊರೆರಾಜ್‌ ಜೊತೆಗೆ ಮದ್ರಾಸ್‌ ನಲ್ಲಿದ್ದುಕೊಂಡು, ಸಹಾಯಕ ನಿರ್ದೇಶಕರಾಗಿ ಕೆಲಸ ಮಾಡಿ, ವರನಟ ಡಾ.ರಾಜ್‌ಕುಮಾರ್‌ ಅವರ ಹಲವು ಸಿನಿಮಾಗಳಿಗೆ ಸಂಭಾಷಣೆಕಾರರಾಗಿಯೂ ಅವರು ಕಾರ್ಯನಿರ್ವಹಿಸಿದ್ದರು.ದೊರೆ–ಭಗವಾನ್‌ ಅವರ ಜೋಡಿ ಕನ್ನಡ ಚಿತ್ರರಂಗದಲ್ಲಿ ಖ್ಯಾತಿ ಗಳಿಸಿತ್ತು. ‘ಜೇಡರ ಬಲೆ’ ದೊರೆ–ಭಗವಾನ್‌ ಜೋಡಿಯ ನಿರ್ದೇಶನದ ಮೊದಲ ಸಿನಿಮಾ. ‘ಗೋವಾದಲ್ಲಿ ಸಿ.ಐ.ಡಿ 99’, ‘ಆಪರೇಷನ್‌ ಡೈಮಂಡ್‌ ರಾಕೆಟ್‌’,‘ಆಪರೇಷನ್‌ ಜಾಕ್‌ಪಾಟ್‌ನಲ್ಲಿ ಸಿ.ಐ.ಡಿ 999’, ‘ಗಿರಿಕನ್ಯೆ’, ‘ಎರಡು ಕನಸು’, ‘ನಾನೊಬ್ಬ ಕಳ್ಳ’ ಹೀಗೆ ರಾಜ್‌ಕುಮಾರ್‌ ಅವರ 32 ಚಿತ್ರಗಳಿಗೆ ನಿರ್ದೇಶಕರಾಗಿ ಭಗವಾನ್‌ ಕಾರ್ಯನಿರ್ವಹಿಸಿದ್ದರು.

‘ಚಂದನದ ಗೊಂಬೆ’, ‘ಮುನಿಯನ ಮಾದರಿ’, ‘ಗಾಳಿ ಮಾತು’, ‘ಕಸ್ತೂರಿ ನಿವಾಸ’, ಹೊಸ ಬೆಳಕು ಮುಂತಾದುವುಗಳು ಅವರ ಇತರೆ ಸಿನಿಮಾಗಳು.

ಭಗವಾನ್‌ ಅವರ ಪಾರ್ಥಿವ ಶರೀರವನ್ನು ಸಹಕಾರ ನಗರದಲ್ಲಿರುವ ಅವರ ನಿವಾಸದಲ್ಲಿ ಮಧ್ಯಾಹ್ನ 12ರ ವರೆಗೆ ಸಾರ್ವಜನಿಕರ ದರ್ಶನಕ್ಕೆ ಇರಿಸಲಾಗಿದೆ.


Spread the love

About Yuva Bharatha

Check Also

ಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ

Spread the loveಪ್ರಮೋದ್ ಮುತಾಲಿಕ್ ನಿವೃತ್ತಿ, ಶ್ರೀ ರಾಮಸೇನೆ ರಾಷ್ಟ್ರೀಯ ಅಧ್ಯಕ್ಷರಾಗಿ ಸಿದ್ದಲಿಂಗ ಸ್ವಾಮಿ ಆಯ್ಕೆ ಬೆಂಗಳೂರು : ಶ್ರೀ …

Leave a Reply

Your email address will not be published. Required fields are marked *

9 + 20 =