Breaking News

ಫೆಬ್ರುವರಿ ೧ರಿಂದ ನಾಲ್ಕು ದಿನಗಳ ಕಾಲ ೧೬ನೇ ಶರಣ ಸಂಸ್ಕೃತಿ ಉತ್ಸವ ಸಮಾರಂಭ.!

Spread the love


ಗೋಕಾಕ: ಪ್ರತಿ ವರ್ಷ ಶ್ರೀ ಮಠದಿಂದ ಕೊಡಮಾಡುವ ಕಾಯಕಶ್ರೀ ಪ್ರಶಸ್ತಿಗೆ ಈ ಬಾರಿ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಅಧ್ಯಕ್ಷ ಶ್ರೀ ರವಿಶಂಕರ್ ಗುರೂಜಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಶೂನ್ಯ ಸಂಪಾದನ ಮಠದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಹೇಳಿದರು.
ರವಿವಾರದಂದು ಸಾಯಂಕಾಲ ನಗರದ ಶೂನ್ಯ ಸಂಪಾದನ ಮಠದಲ್ಲಿ ನಡೆದ ೧೬ನೇ ಶರಣ ಸಂಸ್ಕೃತಿ ಉತ್ಸವ ಸಮಾರಂಭದ ಪೂರ್ಣಭಾವಿ ಸಭೆಯ ನೇತೃತ್ವ ವಹಿಸಿ ಅವರು ಮಾತನಾಡುತ್ತಿದ್ದರು.
ಈ ಬಾರಿಯು ಲಿಂಗೈಕ್ಯ ಬಸವ ಮಹಾಸ್ವಾಮಿಜಿಗಳವರ ೧೬ನೇ ಪುಣ್ಯಸ್ಮರಣೋತ್ಸವ ನಿಮಿತ್ತ ೧೬ನೇ ಶರಣ ಸಂಸ್ಕೃತಿ ಉತ್ಸವವನ್ನು ಫೆಬ್ರುವರಿ ೧ರಿಂದ ನಾಲ್ಕು ದಿನಗಳ ಕಾಲ ಶ್ರೀಮಠದ ಶ್ರೀ ಚೆನ್ನ ಬಸವೇಶ್ವರ ವಿದ್ಯಾಪೀಠದ ಆವರಣದಲ್ಲಿ ಸರಕಾರದ ಎಲ್ಲ ಮಾರ್ಗಸೂಚಿಗಳನ್ನು ಪಾಲಿಸಿ ಸರಳವಾಗಿ ಆಚರಿಸಲಾಗುವುದು.
ಫೆಬ್ರುವರಿ ೧ರಂದು ನಡೆಯುವ ಗೋಷ್ಠಿಯಲ್ಲಿ: ಆರ್ಟ್ ಆಫ್ ಲಿವಿಂಗ್ ಸಂಸ್ಥೆಯ ಶ್ರೀ ರವಿಶಂಕರ್ ಗುರೂಜಿ ಅವರಿಗೆ ಕಾಯಕಶ್ರೀ ಪ್ರಶಸ್ತಿ ಜೊತೆಗೆ ೧ಲಕ್ಷ ರೂ ನಗದು ನೀಡಿ ಗೌರವಿಸಲಾಗುವುದು. ಫೆಬ್ರುವರಿ ೨ರಂದು ನಡೆಯುವ ಯುವ ಗೋಷ್ಠಿಯಲ್ಲಿ ನಾಡಿನ ಖ್ಯಾತ ಪೊಲೀಸ್ ಅಧಿಕಾರಿ ಡಿಸಿಪಿ ರವಿ ಡಿ. ಚನ್ನಣ್ಣನವರ್ ಅವರು ಭಾಗವಹಿಸಿ ಯುವಕರಿಗೆ ಮಾರ್ಗದರ್ಶನ ಮಾಡಿಲಿದ್ದು, ಫೆಬ್ರುವರಿ ೩ರಂದು ನಡೆಯುವ ಮಹಿಳಾ ಗೋಷ್ಠಿಯಲ್ಲಿ ಗೃಹ ಇಲಾಖೆಯ ಕಾರ್ಯದರ್ಶಿ ಡಿ.ರೂಪಾ ಭಾಗವಹಿಸಲಿದ್ದಾರೆ ಎಂದ ಶ್ರೀ ಮುರುಘರಾಜೇಂದ್ರ ಮಹಾಸ್ವಾಮಿಗಳು ಕಳೆದ ೧೫ವರ್ಷಗಳಿಂದ ಶರಣ ಸಂಸ್ಕೃತಿ ಉತ್ಸವನ್ನು ಆಚರಿಸಿಕೊಂಡು ಬರುತ್ತಿದ್ದು, ಶರಣ ಸಂಸ್ಕೃತಿ ಉತ್ಸವವು ಗೋಕಾಕ ತಾಲೂಕಿನ ಹಬ್ಬವಾಗಿ ಪರಿವರ್ತನೆಯಾಗುತ್ತಿದ್ದೆ. ಯುವ ಜನಾಂಗಕ್ಕೆ ಅನುಕೂಲವಾಗುವ ಸದುದ್ದೇಶ ಹಾಗೂ ತಾಲೂಕಿನಲ್ಲಡೆ ಆಧ್ಯಾತ್ಮಿಕ ಚಿಂತನೆ ಹಬ್ಬಲಿ ಎಂಬ ಚಿಂತನೆಯನ್ನು ಇಟ್ಟುಕೊಂಡು ಈ ಉತ್ಸವ ಆಚರಿಸಲಾಗುತ್ತಿದೆ.
ಇದೇ ಸಂದರ್ಭದಲ್ಲಿ ಶರಣ ಸಂಸ್ಕೃತಿ ಉತ್ಸವ ಸಮಿತಿಯ ಅಧ್ಯಕ್ಷರನ್ನಾಗಿ ರಾಜ್ಯಸಭಾ ಸದಸ್ಯ ಈರಣ್ಣಾ ಕಡಾಡಿ ಹಾಗೂ ಕಾರ್ಯದರ್ಶಿಯಾಗಿ ವಿವೇಕ ಜತ್ತಿ ಅವರನ್ನು ಪುನರ್ ಆಯ್ಕೆ ಮಾಡಲಾಯಿತು. ಬಟಕುರ್ಕಿಯ ಬಸವ ಮಹಾಸ್ವಾಮಿಗಳು ಸಭೆಯ ಸಾನಿಧ್ಯವನ್ನು ವಹಿಸಿದ್ದರು.
ಈ ಸಂದರ್ಭದಲ್ಲಿ ಮುಖಂಡರುಗಳಾದ ಡಾ.ಸಿ.ಕೆ ನಾವಲಗಿ, ಶಂಕರ ಗರೋಶಿ, ಶಶಿಧರ ದೇಮಶೆಟ್ಟಿ, ಚಂದ್ರಶೇಖರ್ ಕೊಣ್ಣೂರ, ಅಡಿವೆಪ್ಪ ಕಿತ್ತೂರ, ಬಸವರಾಜ ಖಾನಪ್ಪನವರ, ಮಲ್ಲಿಕಾರ್ಜುನ ಈಟಿ, ಪ್ರಕಾಶ ಬಾಗೋಜಿ, ಶಿಕ್ಷಕ ರಮೇಶ ಮಿರ್ಜಿ ಸೇರಿದಂತೆ ಅನೇಕರು ಇದ್ದರು.


Spread the love

About Yuva Bharatha

Check Also

ಬೋರಗಾಂವ ಪಟ್ಟಣದ ಶ್ರೀ ಅರಿಹಂತ ಕೋ,ಆಪ್ ಸೌಹಾರ್ಧ ಸಹಕಾರಿ ಬ್ಯಾಂಕ ವಿರುದ್ಧ ರೈತರ ಪ್ರತಿಭಟನೆ ಬ್ಯಾಂಕ ವ್ಯವಸ್ಥಾಪಕರಿಗೆ ಮನವಿ ಸಲ್ಲಿಕೆ.!

Spread the loveಬೋರಗಾಂವ ಪಟ್ಟಣದ ಶ್ರೀ ಅರಿಹಂತ ಕೋ,ಆಪ್ ಸೌಹಾರ್ಧ ಸಹಕಾರಿ ಬ್ಯಾಂಕ ವಿರುದ್ಧ ರೈತರ ಪ್ರತಿಭಟನೆ ಬ್ಯಾಂಕ ವ್ಯವಸ್ಥಾಪಕರಿಗೆ …

Leave a Reply

Your email address will not be published. Required fields are marked *

nine − 3 =