ಭಾಗ್ಯಲಕ್ಷ್ಮೀ ಯೋಜನೆಗೆ ಕೊನೆಗೂ ಮಾರ್ಗಸೂಚಿ ಪ್ರಕಟ
ಬೆಂಗಳೂರು :
ಕುಟುಂಬದ ಯಜಮಾನಿಗೆ ಪ್ರತಿ ತಿಂಗಳು ₹2 ಸಾವಿರ ನೀಡುವ ‘ಗೃಹ ಲಕ್ಷ್ಮಿ’ ಯೋಜನೆಗೆ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಯಜಮಾನಿ ಅಥವಾ ಯಜಮಾನಿಯ ಪತಿ ಆದಾಯ ತೆರಿಗೆ ಪಾವತಿಸುತ್ತಿದ್ದರೆ, ಜಿಎಸ್‌ಟಿ ರಿಟರ್ನ್ಸ್ ಸಲ್ಲಿಸುವವರಾಗಿದ್ದಲ್ಲಿ ಅವರು ಈ ಯೋಜನೆಗೆ ಅರ್ಹರಲ್ಲ ಎಂದು ಹೇಳಲಾಗಿದೆ.
‘ಗೃಹ ಲಕ್ಷ್ಮಿ’ಯ ಇತರ ನಿಯಮಗಳು ಹೀಗಿವೆ:
ಅಂತ್ಯೋದಯ, ಬಿಪಿಎಲ್ ಮತ್ತು ಎಪಿಲ್ ಪಡಿತರ ಚೀಟಿಗಳಲ್ಲಿ ಕುಟುಂಬದ ಯಜಮಾನಿ ಎಂದು ನಮೂದಿಸಿರುವ ಮಹಿಳೆಗೆ ಈ ಯೋಜನೆಗೆ ಅರ್ಹರಾಗಿರುತ್ತಾರೆ. ಕುಟುಂಬದಲ್ಲಿ ಒಂದಕ್ಕಿಂತ ಹೆಚ್ಚು ಮಹಿಳೆಯರಿದ್ದಲ್ಲಿ ಒಬ್ಬರಿಗೆ ಮಾತ್ರ ಅರ್ಹತೆ
ಫಲಾನುಭವಿಗಳು ಜೂನ್ 15ರಿಂದ ಜುಲೈ 15ರವರೆಗೆ ಸೇವಾ ಸಿಂಧು ಪೋರ್ಟಲ್ ಅಥವಾ ಭೌತಿಕವಾಗಿ ಅರ್ಜಿ ಸಲ್ಲಿಸಬಹುದು. ಆ.15ರಂದು ಅವರ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡಲಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಆದೇಶ ಹೊರಡಿಸಿದೆ
ಅರ್ಜಿದಾರರ ಸ್ವಯಂ ಘೋಷಣೆ ಆಧಾರದಲ್ಲಿ ಮಂಜೂರಾತಿ ನೀಡಲಾಗುತ್ತದೆ. ನಂತರ ಅಂಶಗಳನ್ನು ಪರಿಶೀಲಿಸಿದಾಗ, ತಪ್ಪು ಮಾಹಿತಿ ಕಂಡುಬಂದರೆ ಅಂತಹವರಿಂದ ಹಣ ವಸೂಲು ಮಾಡಲಾಗುತ್ತದೆ
ಯೋಜನೆಯ ಸೌಲಭ್ಯ ಪಡೆಯಲು ಬ್ಯಾಂಕ್ ಖಾತೆ ಹಾಗೂ ಆಧಾರ್ ಸಂಖ್ಯೆ ಜೋಡಣೆ ಮಾಡಬೇಕು.