5 ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ ಉಚಿತ ಬೇಸಿಗೆ ಶಿಬಿರ
ಯುವ ಭಾರತ ಸುದ್ದಿ ಬೆಳಗಾವಿ :
ಬೆಳಗಾವಿ ಜಿಲ್ಲಾ ಬಾಲಭವನ ಹಾಗೂ ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ 5 ರಿಂದ 16 ವರ್ಷದೊಳಗಿನ ಮಕ್ಕಳಿಗಾಗಿ 15 ದಿನಗಳ ಉಚಿತ ಬೇಸಿಗೆ ಶಿಬಿರವನ್ನು ಮೇ 16 ರಿಂದ ಮೇ 30 ರವರೆಗೆ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಆಯೋಜಿಸಲಾಗಿದೆ.
ಶಿಬಿರದಲ್ಲಿ ಮಕ್ಕಳ ಸರ್ವಾಂಗೀಣ ವಿಕಾಸಕ್ಕೆ ಅನುಕೂಲವಾಗುವ ಉಪನ್ಯಾಸ, ಚಿತ್ರಕಲೆ, ಕರಕುಶಲ ಕಲೆ, ಜೇಡಿ ಮಣ್ಣಿನ ಕಲೆ, ಸಮೂಹ ನೃತ್ಯ, ಸಮೂಹ ಗೀತೆ, ಯೋಗ, ಕರಾಟೆ ಆಯೋಜಿಸಲಾಗುವುದು. ಶಿಬಿರ ಕಣಬರ್ಗಿ ರಸ್ತೆಯ ಭಾರತ ಕಾಲೋನಿಯಲ್ಲಿರುವ ಮಹಿಳಾ ಕಲ್ಯಾಣ ಸಂಸ್ಥೆಯ ಸಭಾಗೃಹದಲ್ಲಿ ಜರುಗುವುದು.
ಶಿಬಿರದಲ್ಲಿ ಭಾಗವಹಿಸಲು ಇಚ್ಛಿಸುವ ವಿದ್ಯಾರ್ಥಿಗಳು ಮೇ 15 ರ ಸಂಜೆ 5 ಗಂಟೆಯೊಳಗೆ ಹೆಸರು ನೊಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಎಮ್. ಎಸ್. ಚೌಗಲಾ, ದೂರವಾಣಿ ಸಂಖ್ಯೆ: 9663218860 ಇವರನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಬಾಲಭವನ ಸಮಿತಿ ಕಾರ್ಯದರ್ಶಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.