ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ; ರಾಹುಲ್ ಗಾಂಧಿ ಘೋಷಣೆ !

ಯುವ ಭಾರತ ಸುದ್ದಿ ಮಂಗಳೂರು :
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸರ್ಕಾರಿ ಬಸ್‌ನಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣ ಒದಗಿಸಲಾಗುವುದು ಎಂದು ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಘೋಷಣೆ ಮಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಲ್ಲಿ ಮಹಿಳೆಯರಿಗೆ ಸರ್ಕಾರಿ ಸಾರಿಗೆಯಲ್ಲಿ ಉಚಿತ ಪ್ರಯಾಣದ ಬಸ್ ಘೋಷಣೆ ಮಾಡಲಾಗಿದೆ . ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ರಾಜ್ಯ ಕಾಂಗ್ರೆಸಿನ ಐದನೇ ಗ್ಯಾರಂಟಿ ಘೋಷಣೆ ಮಾಡಿದ್ದಾರೆ.
ಮಂಗಳೂರಿನ ಅಡ್ಯಾರಿನ ಸಹ್ಯಾದ್ರಿ ಕಾಲೇಜು ಮೈದಾನದಲ್ಲಿ ನಡೆದ ಕಾಂಗ್ರೆಸ್ ಪ್ರಚಾರ ಸಭೆಯಲ್ಲಿ ಘೋಷಣೆ ಮಾಡಿದ್ದಾರೆ. ರಾಹುಲ್ ಹೊಸ ಮೋದಿಯವರೇ ನೀವು , ಕಾಂಗ್ರೆಸಿನ ನಾಲ್ಕು ಭರವಸೆ ಈಡೇರಿಸಲು ಆಗಲ್ಲ ಎಂದಿದ್ದೀರಿ . ಆದರೆ ನಾವು ಅಧಿಕಾರಕ್ಕೆ ಬಂದ ಮೊದಲ ದಿನವೇ ಕ್ಯಾಬಿನೆಟ್ ಮೀಟಿಂಗ್ ಕರೆದು ನಾಲ್ಕು ಅಲ್ಲ , ಐದು ಭರವಸೆಗಳನ್ನು ಅನುಷ್ಠಾನಕ್ಕೆ ತರಲಿದ್ದೇವೆ. ಮಹಿಳೆಯರಿಗೆ ಸರ್ಕಾರಿ ಸಾರಿಗೆಯಲ್ಲಿ ಉಚಿತ ಪ್ರಯಾಣಕ್ಕೆ ಅವಕಾಶ ಕೊಡುತ್ತೇವೆ. ನಿಮ್ಮ ಸರ್ಕಾರ ಮಹಿಳೆಯರಿಂದ ನಲ್ವತ್ತು ಪರ್ಸೆಂಟ್ ಕಳ್ಳತನ ಮಾಡಿದೆ. ನಮ್ಮ ಸರ್ಕಾರ ಬಂದಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕೊಟ್ಟು ಕಳವಾದ ಮೊತ್ತವನ್ನು ಈಡೇರಿಸುತ್ತೇವೆ ಎಂದು ಹೇಳಿದರು.
ಒಟ್ಟಾರೆ, ಕಾಂಗ್ರೆಸ್ ಇದೀಗ ತನ್ನ ಐದನೇ ಘೋಷಣೆ ಮಾಡುವ ಮೂಲಕ ಮತದಾರರನ್ನು ಸೆಳೆಯುವ ಪ್ರಯತ್ನ ಮಾಡಿದೆ.
YuvaBharataha Latest Kannada News