Breaking News

ಗಣೇಶೋತ್ಸವ ಸಂಪೂರ್ಣ ನಿಷೇಧ ಬೇಡ- ಮನವಿ

Spread the love

ಗಣೇಶೋತ್ಸವ ಸಂಪೂರ್ಣ ನಿಷೇಧ ಬೇಡ- ಮಹಾ ಮಂಡಳ ಮನವಿ
ಮಾರ್ಗಸೂಚಿ ಪ್ರಕಾರ ಆಚರಣೆಗೆ ಅವಕಾಶ: ಜಿಲ್ಲಾಧಿಕಾರಿ ಹಿರೇಮಠ

ಬೆಳಗಾವಿ, ಜು.24: ಕೋವಿಡ್-೧೯ ಹಿನ್ನಲೆಯಲ್ಲಿ ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಸರಕಾರದ ಮಾರ್ಗಸೂಚಿ ಪ್ರಕಾರ ಅವಕಾಶವನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಹೇಳಿದರು.

ಗಣೇಶೋತ್ಸವಕ್ಕೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಶುಕ್ರವಾರ (ಜು.24) ನಡೆದ ಗಣೇಶೋತ್ಸವ ಮಂಡಳಗಳ ಪದಾಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗಣೇಶೋತ್ಸವ ಮಂಡಳಿಯ ಅಭಿಪ್ರಾಯಗಳನ್ನು ಕ್ರೋಢೀಕರಿಸಿ ಸರಕಾರಕ್ಕೆ ಕಳಿಸಲಾಗುವುದು.
ಐಸಿಎಂಆರ್ ಮಾರ್ಗಸೂಚಿ ಬಂದ ಬಳಿಕ ಮತ್ತೊಮ್ಮೆ ಎಲ್ಲ ಮಂಡಳಗಳ ಸಭೆ ಕರೆದು ಚರ್ಚೆ ನಡೆಸಲಾಗುವುದು.
ಅದೇ ರೀತಿ ಮಹಾಮಂಡಳದ ಅಭಿಪ್ರಾಯಗಳನ್ನು ತಕ್ಷಣವೇ ಸರಕಾರದ ಗಮನಕ್ಕೆ ತರಲಾಗುವುದು. ಕೋವಿಡ್-೧೯ ಹಿನ್ನಲೆಯಲ್ಲಿ ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಹಿರೇಮಠ ಹೇಳಿದರು.

ಕೊರೊನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವುದರಿಂದ ಇದನ್ನು ತಡೆಗಟ್ಟುವ ಬಗ್ಗೆ ನಾವು ಎಚ್ಚರಿಕೆ ವಹಿಸಬೇಕಿದೆ. ಆದ್ದರಿಂದ ಸರಕಾರದ ನಿರ್ದೇಶನದ ಮೇರೆಗೆ ಅವಕಾಶ ಕಲ್ಪಿಸಲಾಗುವುದು ಎಂದು ಪೊಲೀಸ್ ಆಯುಕ್ತರಾದ ಕೆ.ತ್ಯಾಗರಾಜನ್ ಹೇಳಿದರು.

ಹಬ್ಬಗಳ ಸಾಲು ಆರಂಭಗೊಂಡಿದ್ದು, ಇದರೊಂದಿಗೆ ಕೋವಿಡ್ ನಿಯಂತ್ರಣದ ಕಡೆಯೂ ಗಮನಹರಿಸಬೇಕಿದೆ. ಎರಡು ಮೂರು ದಿನಗಳಲ್ಲಿ ಸರಕಾರ ಮಾರ್ಗಸೂಚಿ ಬಿಡುಗಡೆ ಮಾಡಲಿದೆ. ಬೆಳಗಾವಿ ನಗರ ಸೇರಿದಂತೆ ಜಿಲ್ಲೆಯಾದ್ಯಂತ ಸುಮಾರು ಐದು ಸಾವಿರ ಮೂರ್ತಿಗಳ ಪ್ರತಿಷ್ಠಾಪನೆ ನಡೆಯಲಿದೆ. ಆದ್ದರಿಂದ ಮಾರ್ಗಸೂಚಿ ಏನೇ ಇರಲಿ; ಎಲ್ಲರೂ ಸಹಕರಿಸಬೇಕು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ ಹೇಳಿದರು.
ಮಾರ್ಗಸೂಚಿ ಬಿಡುಗಡೆಯಾದ ಬಳಿಕ ಮತ್ತೊಮ್ಮೆ ಸಭೆ ಕರೆದು ಚರ್ಚೆ ನಡೆಸಲಾಗುವುದು ಎಂದರು.

ಕೋವಿಡ್-೧೯ ಹಿನ್ನಲೆಯಲ್ಲಿ ಈ ವರ್ಷ ಸರಳ ರೀತಿಯಲ್ಲಿ ಆಚರಿಸಲು ಗಣೇಶೋತ್ಸವ ಮಂಡಳಗಳ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಗಿದೆ ಎಂದು ಮಹಾಮಂಡಳದ ಪದಾಧಿಕಾರಿಗಳು ತಿಳಿಸಿದರು.

ಸಾಮಾಜಿಕ ಅಂತರ ಕಾಯ್ದುಕೊಂಡು ಸರಳ ಧಾರ್ಮಿಕ ರೀತಿಯಲ್ಲಿ ಆಚರಣೆ. ಸಣ್ಣ ಸಣ್ಣ ವೇದಿಕೆಗಳಲ್ಲಿ ಚಿಕ್ಕ ಗಾತ್ರದ ಮೂರ್ತಿಗಳನ್ನು ಪ್ರತಿಷ್ಠಾಪಿಸಲು ನಿರ್ಧರಿಸಲಾಗಿದೆ.
ಕೆಲವು ಮಂಡಳಿಗಳು ಮುಂಚಿತವಾಗಿಯೇ ಬೃಹತ್ ಮೂರ್ತಿ ಆರ್ಡರ್ ನೀಡಲಾಗಿದೆ.
ಜಿಲ್ಲಾಡಳಿತದ ಮಾರ್ಗದರ್ಶನ ಮೇರೆಗೆ ಗಣೇಶೋತ್ಸವ ಆಚರಣೆಗೆ ಎಲ್ಲರೂ ಸಹಕಾರ ನೀಡಲಿದ್ದೇವೆ.

ಏಕಮುಖವಾಗಿ ಗಣೇಶೋತ್ಸವ ಆಚರಿಸದಂತೆ ನಿರ್ಬಂಧಿಸಿದರೆ ಅದಕ್ಕೆ ಆಕ್ಷೇಪವಿದೆ. ಆದರೆ ಸರಕಾರ ನೀಡುವ ಮಾರ್ಗಸೂಚಿ ಪ್ರಕಾರ ಆಚರಣೆಗೆ ಎಲ್ಲ ಮಂಡಳಿಗಳು ಬದ್ಧವಾಗಿವೆ ಎಂದು ಮುಖಂಡರು ಭರವಸೆ ನೀಡಿದರು.

ಪ್ರಮುಖ ಧಾರ್ಮಿಕ ಹಬ್ಬವಾಗಿರುವುದರಿಂದ ಸಂಪೂರ್ಣ ನಿಷೇಧ ಬೇಡ. ಸೂಕ್ತ ಮಾರ್ಗಸೂಚಿ ಜತೆಗೆ ಅನುಮತಿ ನೀಡಲು ಕೋರಿಕೆ.
ಮಹಾರಾಷ್ಟ್ರ ರಾಜ್ಯದಲ್ಲೂ ಗಣೇಶೋತ್ಸವ ಆಚರಣೆಗೆ ಸರಕಾರ ಕೆಲ ಮಾರ್ಗಸೂಚಿ ನೀಡಿದೆ. ಅದೇ ಪ್ರಕಾರ ಇಲ್ಲಿಯೂ ಆದಷ್ಟು ಬೇಗನೇ ಮಾರ್ಗಸೂಚಿ ಬಿಡುಗಡೆ ಮಾಡಿದರೆ ಆಚರಣೆಗೆ ಅನುಕೂಲ ಆಗಲಿದೆ.

ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಆಯುಕ್ತರಾದ ಜಗದೀಶ್, ಉಪ ವಿಭಾಗಾಧಿಕಾರಿಗಳಾದ ಅಶೋಕ ತೇಲಿ ಸೇರಿದಂತೆ ಹಿರಿಯ ಅಧಿಕಾರಿಗಳು ಮತ್ತು ಗಣೇಶೋತ್ಸವ ಮಂಡಳಗಳ ಪದಾಧಿಕಾರಿಗಳು ಸಭೆಯಲ್ಲಿ ಭಾಗವಹಿಸಿದ್ದರು.
***


Spread the love

About Yuva Bharatha

Check Also

ಗೋಕಾಕನಲ್ಲಿ ಬಿಜೆಪಿಯಿಂದ ಕಾಂಗ್ರೇಸ್ ವಿರುದ್ಧ ಪ್ರತಿಭಟನೆ.!

Spread the loveಗೋಕಾಕನಲ್ಲಿ ಬಿಜೆಪಿಯಿಂದ ಕಾಂಗ್ರೇಸ್ ವಿರುದ್ಧ ಪ್ರತಿಭಟನೆ.! ಗೋಕಾಕ: ವಿಜಯಪುರ ಸೇರಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯ ಹಿಂದು ಧಾರ್ಮಿಕ …

Leave a Reply

Your email address will not be published. Required fields are marked *

4 × 5 =