Breaking News

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love

ಸಾರ್ವತ್ರಿಕ ಚುನಾವಣೆಗೆ ಸಜ್ಜಾಗಿ : ಕಾರ್ಯಕರ್ತರಿಗೆ ಕರೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಯಡಿಯೂರಪ್ಪ, ಸಿಎಂ ಬೊಮ್ಮಾಯಿ ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ : ಬಾಲಚಂದ್ರ ಜಾರಕಿಹೊಳಿ

ಯುವ ಭಾರತ ಸುದ್ದಿ ಮೂಡಲಗಿ :                          ಎರಡು ತಿಂಗಳೊಳಗೆ ಸಾರ್ವತ್ರಿಕ ಚುನಾವಣೆ ನಡೆಯಲಿದ್ದು, ಈಗಿನಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಬೇಕು. ಪ್ರತಿ ಮತಗಟ್ಟೆಗಳ ಮೂಲಕ ಕಾರ್ಯಕರ್ತರ ಪಡೆಯನ್ನು ಸಂಘಟಿಸಿ ಅರಭಾವಿ ಕ್ಷೇತ್ರದಲ್ಲಿ ಮತ್ತೊಮ್ಮೆ ಕಮಲ ಅರಳಲು ಕಾರ್ಯಕರ್ತರು ಶ್ರಮಿಸುವಂತೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು.
ಶುಕ್ರವಾರ ಸಂಜೆ ತಾಲೂಕಿನ ಸುಣಧೋಳಿ ಗ್ರಾಮದ ಜಡಿಸಿದ್ಧೇಶ್ವರ ದೇವಸ್ಥಾನದ ಆವರಣದಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಯಾಗಿ ಅರಭಾವಿ ಕ್ಷೇತ್ರದಿಂದಲೇ ಕಣಕ್ಕಿಳಿಯುವುದಾಗಿ ಅವರು ತಿಳಿಸಿದರು.
ಅರಭಾವಿ ಕ್ಷೇತ್ರದಲ್ಲಿ ಕಳೆದ 20 ವರ್ಷಗಳಿಂದ ಜನರ ಆಶೋತ್ತರಗಳಿಗೆ ಶಕ್ತಿಮೀರಿ ಪ್ರಯತ್ನಿಸಿದ್ದೇನೆ. ಬೇರು ಮಟ್ಟದಿಂದ ಪಕ್ಷವನ್ನು ವ್ಯವಸ್ಥಿತವಾಗಿ ಸಂಘಟನೆ ಮಾಡಿದ್ದೇನೆ. ಎಲ್ಲ ಸಮಾಜಗಳನ್ನು ಒಗ್ಗೂಡಿಸಿ ಸಾಮಾಜಿಕ ನ್ಯಾಯದ ಆಧಾರದಲ್ಲಿ ಪ್ರತಿ ಸಮಾಜಗಳಿಗೆ ಸಾಮಾಜಿಕ ಹಾಗೂ ರಾಜಕೀಯ ಅಧಿಕಾರ ಕಲ್ಪಿಸಿದ್ದೇನೆ. ಬರಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಕ್ಷೇತ್ರದ ಮತದಾರರ ಆಶೀರ್ವಾದದಿಂದ 6ನೇ ಬಾರಿಗೆ ಚುನಾವಣೆಗೆ ಸ್ಪರ್ಧೆ ಮಾಡುತ್ತಿದ್ದೇನೆ. ಇದಕ್ಕೆ ಎಲ್ಲರ ಸಹಕಾರ ಹಾಗೂ ಬೆಂಬಲ ಅಗತ್ಯವಾಗಿದೆ ಎಂದು ಹೇಳಿದರು.
ಬಿಜೆಪಿಯು ರಾಜ್ಯದ ಸಮಗ್ರ ಅಭಿವೃದ್ಧಿಗೆ ಶ್ರಮಿಸುತ್ತಿರುವ ಏಕೈಕ ರಾಷ್ಟ್ರೀಯ ಪಕ್ಷವಾಗಿದೆ. ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ಇಡೀ ಪ್ರಪಂಚವೇ ಭಾರತದತ್ತ ನೋಡುವಂತಹ ವಿಶ್ವ ಮೆಚ್ಚುವ ಆಡಳಿತವನ್ನು ನೀಡುತ್ತಿದ್ದಾರೆ. ಅದರಂತೆ ರಾಜ್ಯದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಮರ್ಥ ನೇತೃತ್ವ ವಹಿಸಿಕೊಂಡು ಸರ್ವಾಂಗೀಣ ಪ್ರಗತಿಗೆ ದುಡಿಯುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಹಾಗೂ ಸಿಎಂ ಬಸವರಾಜ ಬೊಮ್ಮಾಯಿ ಅವರ ಕೈ ಬಲಪಡಿಸಲು ಬಿಜೆಪಿಗೆ ಮತ ನೀಡಿ ಆಶೀರ್ವಾದ ಮಾಡುವಂತೆ ಮನವಿ ಮಾಡಿಕೊಂಡರು.
ಚುನಾವಣೆ ಎಂದ ಮೇಲೆ ಆರೋಪ ಪ್ರತ್ಯಾರೋಪ ಸಾಮಾನ್ಯವಾಗಿವೆ. ಕ್ಷೇತ್ರದ ಎಲ್ಲ ರಂಗಗಳಲ್ಲಿ ಅತ್ಯುತ್ತಮವಾಗಿ ಕಾರ್ಯ ಮಾಡುತ್ತಿದ್ದರೂ ಅದನ್ನು ರಾಜಕೀಯವಾಗಿ ಟೀಕಿಸುವವರು ನಮ್ಮ ಮುಂದೆ ಇದ್ದಾರೆ. ಜನಪರ ಕಾರ್ಯಗಳನ್ನು ಸಹಿಸದ ರಾಜಕಾರಣಿಗಳು ಸಹ ಇದ್ದಾರೆ. ಚುನಾವಣೆಗಳು ಸಮೀಪಿಸುತ್ತಿರುವಂತೆಯೇ ಜನರನ್ನು ಮರಳು ಮಾಡಲು ಸುಳ್ಳು ಆಶ್ವಾಸನೆಗಳನ್ನು ನೀಡಲಿಕ್ಕೆ ಬರುತ್ತಿದ್ದಾರೆ. ಅಂತಹವರ ಆಶ್ವಾಸನೆಗಳಿಗೆ ಎಂದಿಗೂ ಮರುಳಾಗಬೇಡಿ. ಬಿಜೆಪಿಯಿಂದಲೇ ಮಾತ್ರ ಅಭಿವೃದ್ಧಿ ಸಾಧ್ಯವಿದೆ. ಸ್ವಾಮೀಜಿಗಳ ಮಾರ್ಗದರ್ಶನದಲ್ಲಿ ಹಾಗೂ ಪಕ್ಷದ ನಾಯಕರುಗಳ ನೇತೃತ್ವದಲ್ಲಿ ಕ್ಷೇತ್ರದ ಸರ್ವತೋಮುಖ ಪ್ರಗತಿಗಾಗಿ ಪಣ ತೊಟ್ಟಿರುವುದಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.
ಸುಣಧೋಳಿ ಮಠದ ಶಿವಾನಂದ ಮಹಾಸ್ವಾಮಿಗಳು ಮತ್ತು ಸೊಗಲ ಮಠದ ಚಿದಾನಂದ ಸ್ವಾಮಿಗಳು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರಿಗೆ ಹೂಗಳ ಪುಷ್ಪಾರ್ಚನೆ ಮಾಡಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸುಣಧೋಳಿ ಗ್ರಾಪಂ ಅಧ್ಯಕ್ಷೆ ಶೋಭಾ ದೇವನಗಳ, ಮುಖಂಡ ಸಿ.ಎಸ್. ವಾಲಿ, ಜಿಪಂ ಮಾಜಿ ಸದಸ್ಯ ಡಾ.ರಾಜೇಂದ್ರ ಸಣ್ಣಕ್ಕಿ, ಎಪಿಎಂಸಿ ಮಾಜಿ ಅಧ್ಯಕ್ಷ ಅಜ್ಜಪ್ಪ ಗಿರಡ್ಡಿ, ವಾಯ್.ಆರ್. ಪಾಟೀಲ, ಗುರುರಾಜ ಪಾಟೀಲ, ಗೋಪಾಲ ಬಿಳ್ಳೂರ, ಸಹದೇವ ಕಮತಿ, ಶಿವನಗೌಡ ಪಾಟೀಲ, ಭೀಮಶಿ ಹೂವಣ್ಣವರ, ಸಿದ್ಧಾರೂಢ ಕಮತಿ, ಸಿದ್ದಪ್ಪ ದೇವರಮನಿ, ಶಿದ್ಲಿಂಗ ಅಜ್ಜಪ್ಪನವರ, ಪರಸಪ್ಪ ಕುಂಬಾರ, ಮಹಾದೇವ ಹಾರೂಗೇರಿ, ಬಿ.ಕೆ. ಗಂಗರಡ್ಡಿ, ಚಂದ್ರಶೇಖರ ಸಿದ್ದಾಪೂರ, ಬಸಪ್ಪ ಹೆಗಡೆ, ಸುರೇಶ ಸಣ್ಣಕ್ಕಿ, ಯಲ್ಲಪ್ಪ ಅಲಕನೂರ, ಪ್ರಕಾಶ ಪಾಟೀಲ, ಜಂಬು ಚಿಕ್ಕೋಡಿ, ಇಮಾಮ ಮೋಮಿನ್, ರಮೇಶ ಗಡಗಿ, ಸಂಜು ತೋಟಗಿ, ಮಕ್ತುಮ ಮೋಮಿನ್, ಸಂಜು ಗಡಗಿ, ಪಾಯಪ್ಪ ಉಪ್ಪೀನ, ಶ್ರೀಶೈಲ ಮೂಡಲಗಿ, ಭೀಮಶಿ ಕಮತಿ, ಪ್ರಕಾಶ ಪತ್ತಾರ, ರವಿ ಮಡಿವಾಳರ, ರೇವಪ್ಪ ನಾಯ್ಕ, ಮಹಾಂತೇಶ ಹಡಪದ, ಬಸಪ್ಪ ಕಪರಟ್ಟಿ, ಬಸು ಖಿಲಾರಿ, ಗಿರೆಪ್ಪ ಈರಡ್ಡಿ, ಪ್ರಕಾಶ ಸನದಿ, ರಾಯಪ್ಪ ಬಾಣಸಿ, ಹನಮಂತ ಅಂಬಿ, ಶಿದ್ರಾಯಿ ಬಿರಡಿ, ಅಶೋಕ ಪೂಜೇರಿ, ಬಸು ಬಿ.ಗೌಡರ, ಬಸವರಾಜ ಪಾಟೀಲ, ಉದ್ದಪ್ಪ ಮಾದರ, ಪರಶುರಾಮ ಭಜಂತ್ರಿ, ಸೇರಿದಂತೆ ತಿಗಡಿ, ಹೊನಕುಪ್ಪಿ, ಭೈರನಟ್ಟಿ, ಹುಣಶ್ಯಾಳ ಪಿವಾಯ್, ಹೊಸಟ್ಟಿ, ಮುಂತಾದ ಗ್ರಾಮಗಳ ಕಾರ್ಯಕರ್ತರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಸುಣಧೋಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿವಿಧ ಸಮಾಜಗಳ ಮುಖಂಡರು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರನ್ನು ಸತ್ಕರಿಸಿ ಬೆಳ್ಳಿ ಗಧೆ ನೀಡಿದರು.


Spread the love

About Yuva Bharatha

Check Also

16 ಕೋಟಿ ರೂ. ಆರ್‍ಡಿಪಿಆರ್ ಇಲಾಖೆಯ ರಸ್ತೆ ಸುಧಾರಣಾ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love16 ಕೋಟಿ ರೂ. ಆರ್‍ಡಿಪಿಆರ್ ಇಲಾಖೆಯ ರಸ್ತೆ ಸುಧಾರಣಾ ಕಾಮಗಾರಿಗಳಿಗೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ …

Leave a Reply

Your email address will not be published. Required fields are marked *

twenty − nine =