ಅಂಬಿರಾವ್ ಪಾಟೀಲ ಹಾಗೂ ಗಣ್ಯರಿಂದ ಯೋಧನ ಅಂತಿಮ ದರ್ಶನ.!![](http://yuvabharatha.com/wp-content/uploads/2021/07/IMG-20210713-WA0045-300x169.jpg)
ಯುವ ಭಾರತ ಸುದ್ದಿ, ಗೋಕಾಕ್: ನಾಗಾಲ್ಯಾಂಡನ ಗಡಿ ಪ್ರದೇಶದಲ್ಲಿ ಅಪಘಾತದಲ್ಲಿ ಮೃತರಾದ ವೀರ ಯೋಧನ ಮಂಜುನಾಥ ಗೌಡಣ್ಣವರ ಅಂತ್ಯಕ್ರಿಯೆ ಶಿವಾಪುರದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಜರುಗಿತು.
ಮಂಗಳವಾರದಂದು ಬೆಳಿಗ್ಗೆ 7 ಗಂಟೆಗೆ ಬೆಂಗಳೂರಿನಿಂದ ತಾಲ್ಲೂಕಿನ ಶಿವಾಪುರ ಗ್ರಾಮಕ್ಕೆ ರಸ್ತೆ ಮೂಲಕ ಪಾರ್ಥಿವ ಶರೀರವನ್ನು ತರಲಾಯಿತು.
ಯೋಧನ ಪಾರ್ಥಿವ ಶರೀರವನ್ನು ಕೆಲವು ಸಮಯ ಶಿವಾಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಅಂತಿಮ ದರ್ಶನಕ್ಕಾಗಿ ಇಡಲಾಯಿತು. ನಂತರ ಗ್ರಾಮದಲ್ಲಿ ಪಾರ್ಥಿವ ಶರೀರವನ್ನು ಮೆರವಣಿಗೆ ಮಾಡಲಾಯಿತು.
ಸಂಸದೆ ಮಂಗಲಾ ಅಂಗಡಿ, ಮಾಜಿ ಸಚಿವ ಹಾಗೂ ಶಾಸಕ ರಮೇಶ ಜಾರಕಿಹೊಳಿ ಅಳಿಯ ಹಾಗೂ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ, ಜಿಲ್ಲಾಧಿಕಾರಿ ಎಮ್ ಜಿ ಹಿರೇಮಠ, ತಹಶಿಲ್ದಾರ ಪ್ರಕಾಶ ಹೊಳೆಪ್ಪಗೋಳ ವೀರ ಯೋಧನಿಗೆ ಅಂತಿಮ ನಮನ ಸಲ್ಲಿಸಿದರು.
ಮೃತ ಯೋಧನ ಅಂತ್ಯಸಂಸ್ಕಾರವನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ. ಮೂರು ಸುತ್ತಿನ ಗುಂಡು ಹಾರಿಸುವ ಮೂಲಕ ಅಂತ್ಯಕ್ರಿಯೆ ನಡೆಯಿತು.
ಅಂತ್ಯಕ್ರಿಯೆಯಲ್ಲಿ ಜಿಲ್ಲೆಯ ಸಾವಿರಾರು ಜನ ಪಾಲ್ಗೊಂಡಿದ್ದರು.