ಗೋಕಾಕ: ಪ್ರತಿಯೊಬ್ಬರ ಜೀವಕ್ಕೂ ಬೆಲೆಯಿದ್ದು, ರಸ್ತೆ ನಿಯಮ ಪಾಲಿಸಿ ಅಪಘಾತಗಳನ್ನು ತಡೆಯಬೇಕು ಎಂದು ಡಿವೈಎಸ್‌ಪಿ ಜಾವೇದ ಇನಾಮದಾರ ಹೇಳಿದರು.
ಅವರು, ನಗರದ ವಾಲ್ಮೀಕಿ ಕ್ರೀಡಾಂಗಣದಲ್ಲಿ ನಡೆದ ಬೆಳಗಾವಿ ಜಿಲ್ಲಾ ಪೋಲಿಸ್, ಗೋಕಾಕ ನಗರದ ವ್ಯಾಪ್ತಿಯಲ್ಲಿ ಹಮ್ಮಿಕೊಂಡ ರಾಷ್ಟಿçÃಯ ರಸ್ತೆ ಸುರಕ್ಷತಾ ಮಾಸ ೨೦೨೧ರ ಬೃಹತ ಸಂಚಾರ ಸುರಕ್ಷತಾ ಮಾಸ ೨೦೨೧ರ ಬೃಹತ ಸಂಚಾರ ಸುರಕ್ಷತಾ ಮೇಳ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ವಾಹನ ಸವಾರರು ವಾಹನ ಚಾಲನೆ ಮಾಡುವಾಗ ರಸ್ತೆ ನಿಯಮ ಪಾಲಿಸದೇ, ಅನೇಕ ಅಪಘಾತಗಳು ಸಂಭವಿಸುತ್ತವೆ. ಪ್ರತಿ ವಾಹನ ಸವಾರರಿಗೂ ರಸ್ತೆ ನಿಯಮಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿಸಿದಾಗ ಮಾತ್ರವೇ ಸಪ್ತಾಹಕ್ಕೆ ಅರ್ಥ ಬರುತ್ತದೆ. ಈ ನಿಟ್ಟಿನಲ್ಲಿ ಸರಕಾರ ಹಾಗೂ ಪೋಲಿಸ್ ಇಲಾಖೆ ರಸ್ತೆ ನಿಯಮಗಳ ಕುರಿತು ಜಾಗೃತಿ ಮೂಢಿಸುತ್ತಿದ್ದು, ಬೈಕ್ ಸವಾರರು ಪ್ರತಿಯೊಬ್ಬರು ಕಡ್ಡಾಯವಾಗಿ ಹೆಲ್ಮೇಟ ಧರಿಸುವಂತೆ ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಕಡಿಮೆಯ ಬೆಲೆಯಲ್ಲಿ ಉನ್ನತ ಗುಣಮಟ್ಟದ ಹೆಲ್ಮೇಟಗಳನ್ನು ಕಡಿಮೆ ಬೆಲೆಗೆ ಮಾರಾಟ, ಕಡಿಮೆ ದರದಲ್ಲಿ ಇನ್ಷುರನ್ಸ್ ಹಾಗೂ ಪಿಯೂಸಿ ಟೆಸ್ಟ್ಗೆ ಅವಕಾಶ ಕಲ್ಪಿಸಿಕೊಟ್ಟು ರಸ್ತೆ ನಿಮಗಳ ಬಗ್ಗೆ ಜಾಗೃತಿ ಮೂಢಿಸಲಾಯಿತು.
ಕಾರ್ಯಕ್ರಮದಲ್ಲಿ ಸಿಪಿಐ ಗೋಪಾಲ ರಾಠೋಡ, ಶಹರ ಠಾಣೆ ಪಿಎಸ್‌ಐ ಕಿರಣ ವಾಲಿಕಾರ, ಹಾಗೂ ಪೋಲಿಸ್ ಸಿಬ್ಬಂಧಿಗಳು, ನಗರದ ಗಣ್ಯರು ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಇದ್ದರು.
