Breaking News

ಕೇಂದ್ರ ಸಚಿವ ಸುರೇಶ ಅಂಗಡಿ ಅಗಲಿಕೆಯಿಂದ ಅತೀವ ದುಃಖವಾಗಿದೆ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಕಂಬನಿ

Spread the love


ಗೋಕಾಕ : ಕೇಂದ್ರ ರೈಲ್ವೇ ಖಾತೆಯ ಸಹಾಯಕ ಸಚಿವ
ಸುರೇಶ ಅಂಗಡಿ ಅವರ ನಿಧನಕ್ಕೆ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಬುಧವಾರ ರಾತ್ರಿ ಕೊರೋನಾ ಸೋಂಕಿನಿಂದ
ಮೃತಪಟ್ಟಿರುವ ವಿಷಯ ಕೇಳಿ ದಿಗ್ಭ್ರಮೆಗೊಂಡೆ. ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವುದು ನಿಜಕ್ಕೂ ದುಃಖದ ಸಂಗತಿ. ಬೆಳಗಾವಿ ಲೋಕಸಭಾ ಕ್ಷೇತ್ರದಿಂದ 2004 ರಿಂದ ಸತತ 4 ಬಾರಿ ಸಂಸದರಾಗಿ ಆಯ್ಕೆಯಾಗಿ 2019 ರಲ್ಲಿ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರದಲ್ಲಿ ರೈಲ್ವೇ ಖಾತೆಯಂತಹ ಮಹತ್ವದ ಜವಾಬ್ದಾರಿ ವಹಿಸಿಕೊಂಡಿದ್ದರು. ಇವರ ಅಗಲಿಕೆಯಿಂದ ನಾಡಿಗೆ ಹಾಗೂ ಪಕ್ಷಕ್ಕೆ ಅಪಾರ ಹಾನಿಯಾಗಿದೆ ಎಂದು ಸಂತಾಪ ಸೂಚಕದಲ್ಲಿ ಅವರು ಹೇಳಿದ್ದಾರೆ.ಸುರೇಶ ಅಂಗಡಿ ಅವರು ಲೋಕಸಭಾ ಸದಸ್ಯರಾಗಿ, ಕೇಂದ್ರ ಸಚಿವರಾಗಿ ರಾಜ್ಯಕ್ಕೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ದೇಶಾಧ್ಯಂತ ಕಿಸಾನ್ ರೈಲು ವಿಸ್ತರಣೆ ಮಾಡಿರುವುದು. ಪ್ರಯಾಣಿಕರ ಬಹುದಿನಗಳ ಬೇಡಿಕೆಯಾಗಿದ್ದ ಬೆಳಗಾವಿ-ಕಿತ್ತೂರ-ಧಾರವಾಡ ಹೊಸ ಮಾರ್ಗ ತರುವಲ್ಲಿ ಅಂಗಡಿ ಅವರ ಪಾತ್ರ ಮಹತ್ವದ್ದಾಗಿದೆ.

ಶೈಕ್ಷಣಿಕ, ಔದ್ಯೋಗಿಕ, ಸಾಮಾಜಿಕ ಕ್ಷೇತ್ರಗಳಲ್ಲಿ ವಿಶಿಷ್ಟವಾಗಿ ಸೇವೆ ಸಲ್ಲಿಸಿದ್ದ ಅಂಗಡಿ ಅವರು ಸೌಜನ್ಯದ ಸಾಕಾರ ಮೂರ್ತಿಯಾಗಿದ್ದರು ಎಂದು ಹೇಳಿದ್ದಾರೆ.

ಪಕ್ಷಕ್ಕಾಗಿ ಅಂಗಡಿ ಅವರು ಸಲ್ಲಿಸಿದ ಸೇವೆ ಅನನ್ಯವಾಗಿದೆ. ಇವರ ಅಗಲಿಕೆಯಿಂದ ನಾನು ಉತ್ತಮ ಸ್ನೇಹಿತನೊಬ್ಬನನ್ನು ಕಳೆದುಕೊಂಡಂತಾಗಿದೆ. ಭಗವಂತನು ಮೃತರ ಆತ್ಮಕ್ಕೆ
ಚಿರಶಾಂತಿ ನೀಡಲಿ. ಅವರ ಕುಟುಂಬದಲ್ಲಾದ ದುಃಖದಲ್ಲಿ ನಾವು ಸಹಭಾಗಿಯಾಗಿ ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿ ದೇವರು ನೀಡಲೆಂದು ಪ್ರಾರ್ಥಿಸುವುದಾಗಿ ಶಾಸಕ ಹಾಗೂ ಕೆಎಂಎಫ್  ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಶೋಕ ಸಂದೇಶದಲ್ಲಿ
ತಿಳಿಸಿದ್ದಾರೆ.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

eight + 19 =