Breaking News

ಧರ್ಮೇಗೌಡರ ನಿಧನಕ್ಕೆ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಶೋಕ

Spread the love

ಗೋಕಾಕ: ವಿಧಾನ ಪರಿಷತ್ತಿನ ಉಪಸಭಾಪತಿಯಾಗಿದ್ದ ಎಸ್.ಎಲ್.ಧರ್ಮೇಗೌಡ ಅವರ ನಿಧನಕ್ಕೆ ಕೆಎಮ್‍ಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ.

ಸರಳ ಸಜ್ಜನಿಕೆ ವ್ಯಕ್ತಿಯಾಗಿದ್ದ ಧರ್ಮೇಗೌಡರು ವಿಧಾನ ಪರಿಷತ್ತಿನ ಉಪಸಭಾಪತಿಗಳಾಗಿ ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇವರ ನಿಧನದಿಂದ ಒಬ್ಬ ಆತ್ಮೀಯ ಗೆಳೆಯನೊಬ್ಬನನ್ನು ಕಳೆದುಕೊಂಡಂತಾಗಿದೆ. ಧರ್ಮೇಗೌಡರ ಆತ್ಮಕ್ಕೆ ಪರಮಾತ್ಮನು ಚಿರಶಾಂತಿ ನೀಡಲಿ. ಅವರ ಕುಟುಂಬದವರಿಗೆ ಅಗಲಿಕೆಯ ದು:ಖವನ್ನು ಸಹಿಸುವ ಶಕ್ತಿಯನ್ನು ಕರುಣ ಸಲಿ ಎಂದು ಪರಮಾತ್ಮನಲ್ಲಿ ಪ್ರಾರ್ಥಿಸುವದಾಗಿ ಕೆಎಮ್‍ಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.


Spread the love

About Yuva Bharatha

Check Also

ತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ

Spread the loveತಪಸಿ ಗ್ರಾಮದಲ್ಲಿ ಅಟಲ್ ಬಿಹಾರಿ ವಾಜಪೇಯಿ ವಸತಿ ಶಾಲೆ ಉದ್ಘಾಟನೆ ಶೀಘ್ರ-ಶಾಸಕ ಬಾಲಚಂದ್ರ ಜಾರಕಿಹೊಳಿ ಯುವ ಭಾರತ …

Leave a Reply

Your email address will not be published. Required fields are marked *

13 + 5 =