Breaking News

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ.-ಡಿಡಿಪಿಐ ಮೋಹನಕುಮಾರ ಹಂಚಾಟೆ.!

Spread the love

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ.-ಡಿಡಿಪಿಐ ಮೋಹನಕುಮಾರ ಹಂಚಾಟೆ.!


ಗೋಕಾಕ: ಗೋಕಾಕ ಶೈಕ್ಞಣಿಕ ವಲಯದ ಸರಕಾರಿ ಶಾಲೆಗಳ ಅಭಿವೃದ್ಧಿಯ ಜೊತೆಗೆ ಮಕ್ಕಳ ಶೈಕ್ಷಣಿಕ ಪ್ರಗತಿಗೆ ಶಾಸಕ ರಮೇಶ ಜಾರಕಿಹೊಳಿ ಅವರು ಶ್ರಮಿಸುತ್ತಿದ್ದಾರೆ. ಶಾಲಾಪ್ರಾರಂಭೋತ್ಸವ ದಿನದಂದು ಎಲ್ಲ ಮಕ್ಕಳು ಶಾಲೆಗಳಿಗೆ ಹಾಜರಾಗುವಂತೆ ಪತ್ರ ಬರೆದು ರಾಜ್ಯದಲ್ಲೇ ಮಾದರಿ ಶಾಸಕರಾಗಿದ್ದಾರೆ ಎಂದು ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಡಿಡಿಪಿಐ ಮೋಹನಕುಮಾರ ಹಂಚಾಟೆ ಹೇಳಿದರು.
ಅವರು, ತಾಲೂಕಿನ ಬೆಣಚಿನಮರ್ಡಿ ಗ್ರಾಮದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ವತಿಯಿಮದ ಹಮ್ಮಿಕೊಂಡ “ಕಲಿಕಾ ಚೇತರಿಕೆ” ಹಾಗೂ “ಶಾಲಾ ಪ್ರಾರಂಭೋತ್ಸವ ಕಾರ್ಯಕ್ರಮದಲ್ಲಿ ಮುಖ್ಯತಿಥಿಗಳಾಗಿ ಭಾಗವಹಿಸಿ ಮಾತನಾಡಿದರು.
ಮಕ್ಕಳ ಶಿಕ್ಷಣದ ಬಗ್ಗೆ ಕಾಳಜಿ ಹೊಂದಿರುವ ಶಾಸಕರು, ಶಿಕ್ಷಣ ಇಲಾಖೆಗೆ ಹುರಿದುಂಬಿಸಿ ವಿನೂತನ ಕಾರ್ಯಕ್ರಮಗಳು ಆಯೋಜನೆಗೆ ಪ್ರೇರೆಪಿಸಿ, ಗೋಕಾಕ ವಲಯದ ಶಿಕ್ಷಣಾಧಿಕಾರಿಗಳ ನೇತ್ರತ್ವದಲ್ಲಿ ಅನೇಕ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಲ್ಲಿ ಸಹಕರಿಸಿದ್ದಾರೆ. ಮುಂಬರುವ ದಿನಗಳಲ್ಲಿ ಶಿಕ್ಷಣ ಇಲಾಖೆಯ ಸಹಕಾರದೊಂದಿಗೆ ಗ್ರಾಮೀಣಾಭಿವೃದ್ಧಿ ಇಲಾಖೆ ಮೂಲಕ ಶಾಲೆಗಳಿಗೆ ಮೂಲಭೂತ ಸೌಕರ್ಯಗಳ ಒದಗಿಸಿಕೊಡುವ ಮೂಲಕ ಶಾಲೆಯನ್ನು ಮಾದರಿ ಶಾಲೆಯನ್ನಾಗಿ ಮಾಡಲು ಶ್ರಮಿಸುತ್ತಾರೆ ಎಂಬ ಆಶಾಭಾವನೆ ವ್ಯಕ್ತಪಡಿಸಿದರು.


ಬೆಣಚಿನಮರ್ಡಿ ಗ್ರಾಮದ ಸರಕಾರಿ ಶಾಲೆ ಜಿಲ್ಲೆಯಲ್ಲ್ಲಿಯೇ ಅತಿ ಹೆಚ್ಚು ವಿದ್ಯಾರ್ಥಿಗಳನ್ನು ಹೊಂದಿರುವ ಹೆಗ್ಗಳಿಕೆಗೆ ಪಾತ್ರವಾಗಿದೆ. ಇದು ಸರಕಾರಿ ಶಾಲೆಯಲ್ಲ ನಮ್ಮೂರಿನ ಶಾಲೆ ಎಂದು ಗಮನಿಸಿರುವ ಗ್ರಾಮಸ್ಥರು ಮಕ್ಕಳ ಶಿಕ್ಷಣಕ್ಕೆ ಪ್ರೇರಣೆ ನೀಡುತ್ತಿದ್ದಾರೆ. ಅಲ್ಲದೇ ಗ್ರಾಮದಾಧ್ಯಂತ ಹಬ್ಬದ ವಾತಾವರಣ ಸೃಷ್ಠಿ ಮಾಡಿದ್ದಾರೆ. ಈ ಶಾಲೆಗಳಲ್ಲಿ ಶಿಕ್ಷಕರು ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಕಾರ್ಯದಲ್ಲಿ ತೋಡಗಿದ್ದಾರೆ. ಜಿಲ್ಲೆಯಲ್ಲಿ ಶಿಕ್ಷಕರ ಕೊರತೆ ನೀಗಿಸಲು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದರು.
ಕ್ಷೇತ್ರ ಶಿಕ್ಷಣಾಧಿಕಾರಿ ಜಿ ಬಿ ಬಳಗಾರ ಮಾತನಾಡಿ, ಕಳೆದ ಸಾಲಿನಿಂದ ೨೮ಸಾವಿರ ಮಕ್ಕಳು ಸರಕಾರಿ ಶಾಲೆಯಲ್ಲಿ ಅಧ್ಯಯನ ಮಾಡುತ್ತಿದ್ದಾರೆ. ರಾಜ್ಯದಲ್ಲಿ ವಿಶಿಷ್ಠವಾದ ಕಾರ್ಯಕ್ರಮ ವಾಗಿರುವ ಅಕ್ಷರ ಬಂಡಿ ಕಾರ್ಯಕ್ರಮದ ಮೂಲಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಅವರ ಮಾರ್ಗದರ್ಶನದಲ್ಲಿ ಮಕ್ಕಳ ದಾಖಲಾತಿ ಹೆಚ್ಚಿಸುವ ಕಾರ್ಯವನ್ನು ಗೋಕಾಕ ವಲಯ ಹಮ್ಮಿಕೊಂಡಿದ್ದು, ಗ್ರಾಮಸ್ಥರ ಉತ್ಸಾಹ ಹುಮ್ಮಸ್ಸು ದಾಖಲಾತಿ ಹೆಚ್ಚಿಸುವಲ್ಲಿ ಪ್ರಮುಖ ಪಾತ್ರವಹಿಸಲಿದೆ. ಎಲ್ಲ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡುವ ಮೂಲಕ ಉತ್ತಮ ನಾಗರಿಕರನ್ನಾಗಿ ಮಾಡುವ ಮಹತ್ತರ ಜವಾಬ್ದಾರಿ ಹೊಂದಬೇಕಿದೆ ಎಂದರು.
ಕಾರ್ಯಕ್ರಮವನ್ನು ಕಾರ್ಮಿಕ ಮುಖಂಡರಾದ ಅಂಬಿರಾವ ಪಾಟೀಲ ಅವರು ಶಾಲೆಗೆ ಹೊಸದಾಗಿ ದಾಖಲಾತಿ ಪಡೆದ ಮಕ್ಕಳೊಂದಿಗೆ ಉದ್ಘಾಟನೆ ನೆರವೆರಿಸಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಪೂಜ್ಯ ಶ್ರೀ ಶಿವಾನಂದ ಹಿರೇಮಠ ಸ್ವಾಮಿಜಿ ವಹಿಸಿದ್ದರು.
ಈ ಸಂದರ್ಭದಲ್ಲಿ ಶಿಕ್ಷಣಾಧಿಕಾರಿ ಎ ಸಿ ಗಂಗಾಧರ, ಬಿಸಿಯೂಟ ಯೋಜನಾಧಿಕಾರಿ ಅಶೋಕ ಮಲಬನ್ನವರ, ಜಿಪಂ ಮಾಜಿ ಸದಸ್ಯರಾದ ಟಿ ಆರ್ ಕಾಗಲ, ಎಮ್ ಎಲ್ ತೋಳಿನವರ, ಎಸ್.ಡಿ.ಎಮ್.ಸಿ ಅಧ್ಯಕ್ಷ ಯಲ್ಲಪ್ಪ ಬೀರನಗಡ್ಡಿ, ಎಪಿಎಮ್‌ಸಿ ನಿರ್ದೇಶಕ ಲಕ್ಕಪ್ಪ ಮಾಳಗಿ, ಗ್ರಾಪಂ ಅಧ್ಯಕ್ಷೆ ರೇಣುಕಾ ಹರಿಜನ, ಲಗಮನಗೌಡ ಪಾಟೀಲ ಸೇರಿದಂತೆ ಗ್ರಾಮದ ಹಿರಿಯರು, ಜನಪ್ರತಿನಿಧಿಗಳು ಅನೇಕರು ಇದ್ದರು.
ಶಾಲೆಯ ಮುಖ್ಯಶಿಕ್ಷಕ ಎನ್ ಟಿ ಬಡವಣ್ಣಿ ಸ್ವಾಗತಿಸಿದರು. ಎಮ್ ಕೆ ಪಾಟೀಲ ನಿರೂಪಿಸಿ, ವಂದಿಸಿದರು.
ನೂತನ ಕೋಠಡಿಗಳ ಶಂಕುಸ್ಥಾಪನೆ: ತಾಲೂಕಿನ ಬೆಣಚಿನಮರ್ಡಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಸುಮಾರು ೪೪ಲಕ್ಷ ರು ವೆಚ್ಚದಲ್ಲಿ ೪ಕೋಠಡಿಗಳ ಕಟ್ಟಡ ಕಾಮಗಾರಿಗೆ ಶಾಸಕ ರಮೇಶ ಜಾರಕಿಹೊಳಿ ಅವರ ಮಾರ್ಗದರ್ಶನದಲ್ಲಿ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಅವರ ನೇತ್ರತ್ವದಲ್ಲಿ ಚಾಲನೆ ನೀಡಲಾಯಿತು.
ಬೆಣಚಿನಮರ್ಡಿ ಗ್ರಾಮದಾಧ್ಯಂತ ಹಬ್ಬದ ವಾತಾವರಣ.!
ಗೋಕಾಕ ಕ್ಷೇತ್ರಶಿಕ್ಷಣಾಧಿಕಾರಿಗಳ ಕಾರ್ಯಾಲಯದಿಂದ ಹೊಸದಾಗಿ ದಾಖಲಾತಿ ಪಡೆಯುವ ಮಕ್ಕಳನ್ನು ಸಾಂಪ್ರದಾಯಿಕ ಉಡುಗೆಗಳನ್ನು ತೊಡಿಸಿ ಎತ್ತಿನ ಬಂಡಿಗಳಲ್ಲಿ ಶಿಕ್ಷಕರು, ಗ್ರಾಮಸ್ಥರು, ಜನಪ್ರತಿನಿಧಿಗಳು, ಎಸ್‌ಡಿಎಮ್‌ಸಿ ಸದಸ್ಯರು ಸೇರಿದಂತೆ ಗ್ರಾಮಸ್ಥರು ಸ್ಥಳೀಯ ಜಾನಪದ ವಾದ್ಯ ಮೇಳದೊಂದಿಗೆ ಹಾಗೂ ಗೃಹಿಣಿಯರ ಆರತಿ ಕುಂಭ ಮೇಳದೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮೂಲಕ ಮಕ್ಕಳನ್ನು ಶಾಲೆಗೆ ಕರೆ ತಂದರು. ಶಾಲೆಗೆ ಆಗಿಮಿಸುವ ಮಕ್ಕಳಿಗೆ ಕಾರ್ಮಿಕ ಮುಖಂಡ ಅಂಬಿರಾವ ಪಾಟೀಲ ಹಾಗೂ ಗಣ್ಯರು ಪುಷ್ಪವೃಷ್ಠಿ ಸುರಿಸಿ ಬರಮಾಡಿಕೊಂಡರು.
ಶಾಲೆಯ ಆವರಣ ನವ ವಧುವಿನಂತೆ ರಂಗೋಲಿ, ತಳಿರು ತೋರಣಗಳಿಂದ ಅಲಂಕೃತವಾಗಿತ್ತು. ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳನ್ನು ವಿಶೇಷ ಅಲಂಕೃತವಾದ ಅಕ್ಷರ ಬಂಡಿಯಲ್ಲಿ ಮೆರವಣಿಗೆ ಮುಖಾಂತರ ಶಾಲಾ ದೇಗುಲಕ್ಕೆ ಕರೆ ತಂದು ದಾಖಲಾತಿ ಮಾಡಿಕೊಳ್ಳಲಾಯಿತು. ಈ ಭವ್ಯ ಹಬ್ಬದಲ್ಲಿ ಗ್ರಾಮಸ್ಥರು, ಮಕ್ಕಳ ಪೋಷಕರು ಭಾಗವಹಿಸಿದ್ದರು. ಶಾಲೆಗೆ ಆಗಮಿಸಿದ ಮಕ್ಕಳಿಗೆ ಬೂರಿ ಭೋಜನ ವ್ಯವಸ್ಥೆ ಮಾಡಲಾಗಿತ್ತು.

 


Spread the love

About Yuva Bharatha

Check Also

ಅಕ್ಕಾ ಅಂದ್ರೆ ಅವರೇ ಅಂತ ಯಾಕೆ ತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್-ಮಾಜಿ ಶಾಸಕ ಸಂಜಯ ಪಾಟೀಲ.!

Spread the loveನಾನು ಭಾಷಣದಲ್ಲಿ ಹೆಬ್ಬಾಳಕರ ಹೆಸರನ್ನೆ ತಗೊಂಡಿಲ್ಲ. -ಮಾಜಿ ಶಾಸಕ ಸಂಜಯ ಪಾಟೀಲ.! ಯುವಭಾರತ ಸುದ್ದಿ ಬೆಳಗಾವಿ: ನಾನು …

Leave a Reply

Your email address will not be published. Required fields are marked *

five × three =