ಯುವ ಭಾರತ ಸುದ್ದಿ, ಗೋಕಾಕ್: ಗೋಕಾಕ್ ಮತ್ತು ಚಿಕ್ಕೋಡಿ ಪ್ರತ್ಯೇಕ ಜಿಲ್ಲೆ ವಿಚಾರವಾಗಿ ನಗರದ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಸ್ವಾಮೀಜಿ ನೇತೃತ್ವದಲ್ಲಿ ಸಚಿವ ರಮೇಶ್ ಜಾರಕಿಹೋಳಿ ಭೇಟಿ ಮಾಡಿ ಮನವಿ ಸಲ್ಲಿಸಿದರು.
ಮನವಿ ಸಲ್ಲಿಸಿ, ನಿವಾಸದಲ್ಲಿ ಸಚಿವರನ್ನ ಭೇಟಿ ಮಾಡಿ ಮಾತುಕತೆ ಭೇಟಿ ನಂತರ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೋಳಿ ಮಾತನಾಡಿ, ಸಿದ್ಧರಾಮಯ್ಯ ಸಿಎಂ ಆಗಿದ್ದ ವೇಳೆ ಗೋಕಾಕ್-ಚಿಕ್ಕೋಡಿ ಜಿಲ್ಲೆ ರಚನೆ ಬಗ್ಗೆ ನಿರ್ಣಯ ಮಾಡಲಾಗಿತ್ತು. ಬೈಲಹೊಂಗಲದವರು ನಮಗೂ ಪ್ರತ್ಯೇಕ ಜಿಲ್ಲೆ ಕೊಡಿ ಅಂತ ಹೇಳಿದ್ದರಿಂದ ಈ ವಿಚಾರ ಅಷ್ಟಕ್ಕೆ ನಿಂತಿದೆ. ಹೊಸ ತಾಲೂಕು ರಚನೆ ಮಾಡಿ ಆ ನಂತರ ಗೋಕಾಕ್ ಪ್ರತ್ಯೇಕ ಜಿಲ್ಲೆ ರಚನೆ ಮಾಡಲು ಹೇಳಿದ್ದೇನೆ. ಇದೇ ತಾಂತ್ರಿಕ ಕಾರಣದಿಂದ ಗೋಕಾಕ್ ಜಿಲ್ಲೆಯಾಗುವುದು ಬಾಕಿ ಉಳಿದಿದೆ. ಕೋವೀಡ್ ಹಾಗೂ ಆರ್ಥಿಕ ಕಾರಣದಿಂದ ತಾಲೂಕು ರಚನೆ ಬಾಕಿ ಉಳಿದಿದೆ. ನನಗೆ ಸುಳ್ಳು ಹೇಳುವುದು ನನಗೆ ಬರೋದಿಲ್ಲ. ಬಳ್ಳಾರಿ ಜಿಲ್ಲೆ ವಿಭನೆ ಏಕೆ ಆಯ್ತು ಎನ್ನುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಬಜೆಟ್ ಮುಗಿದ ನಂತ್ರ ನಿಯೋಗ ಹೋಗಿ ಸಿಎಂ ಭೇಟಿ ಮಾಡೋಣ. ಐದಾರು ತಿಂಗಳಲ್ಲಿ ಗೋಕಾಕ್ ಪ್ರತ್ಯೇಕ ಜಿಲ್ಲೆ ರಚನೆ ಮಾಡೋಣ ಎಂದು ಹೋರಾಟಗಾರರಿಗೆ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಜಿಲ್ಲಾ ಹೋರಾಟ ಸಮಿತಿಯ ಸದಸ್ಯರು, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಹೋರಾಟಗಾರರು ಇತರರು ಇದ್ದರು.
Check Also
ಪತ್ರಿಕೋದ್ಯಮದ ಬೆಳವಣಿಗೆಯಲ್ಲಿ ಪತ್ರಿಕಾ ವಿತರಕರ ಪಾತ್ರ ಬಹಳ ದೊಡ್ಡದು.- ರಮೇಶ ಜಾರಕಿಹೊಳಿ.!
Spread the loveಪತ್ರಿಕೋದ್ಯಮದ ಬೆಳವಣಿಗೆಯಲ್ಲಿ ಪತ್ರಿಕಾ ವಿತರಕರ ಪಾತ್ರ ಬಹಳ ದೊಡ್ಡದು.- ರಮೇಶ ಜಾರಕಿಹೊಳಿ.! ಗೋಕಾಕ: ಪತ್ರಿಕೆಗಳನ್ನು ಮನೆಗಳಿಗೆ ಸರಿಯಾದ …