Breaking News

ಜಾರಕಿಹೊಳಿ ಸಹೋದರರಿಂದ ಮಹಾಲಕ್ಷ್ಮೀ ಸಭಾ ಭವನ ಉದ್ಘಾಟನೆ.!

Spread the love

ಜಾರಕಿಹೊಳಿ ಸಹೋದರರಿಂದ ಮಹಾಲಕ್ಷ್ಮೀ ಸಭಾ ಭವನ ಉದ್ಘಾಟನೆ.!

ಗೋಕಾಕ: ಜನಸಾಮಾನ್ಯರ ಅನುಕೂಲಕ್ಕಾಗಿ ಅತ್ಯಾಧುನಿಕವಾಗಿ ಗೋಕಾಕ ನಗರದಲ್ಲಿ ಮಹಾಲಕ್ಷ್ಮೀ ಸಭಾ ಭವನ ನಿರ್ಮಿಸಲಾಗಿದ್ದು, ಇದನ್ನು ಸಾರ್ವಜನಿಕರು ಸದ್ಬಳಕೆ ಮಾಡಿಕೊಳ್ಳುವಂತೆ ಶಾಸಕ ಹಾಗೂ ಮಾಜಿ ಸಚಿವ ರಮೇಶ ಜಾರಕಿಹೊಳಿ ತಿಳಿಸಿದರು.
ಇಲ್ಲಿಯ ಮಹಾಲಕ್ಷಿö್ಮÃ ದೇವಸ್ಥಾನದ ಆವರಣದಲ್ಲಿ ಗುರುವಾರದಂದು ೪.೫೦ ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತವಾಗಿ ನಿರ್ಮಿಸಿದ ಮಹಾಲಕ್ಷಿö್ಮÃ ಸಭಾ ಭವನವನ್ನು ಉದ್ಘಾಟಿಸಿ ಮಾತನಾಡಿದ ಅವರು, ಈ ಸಭಾ ಭವನ ನಿರ್ಮಾಣದಿಂದ ಜನ ಸಾಮಾನ್ಯರಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಹೇಳಿದರು.

ಶಾಸಕ ರಮೇಶ ಜಾರಕಿಹೊಳಿ ಅವರು ಗೋಕಾಕದಲ್ಲಿ ೪.೫೦ ಕೋಟಿ ರೂ. ವೆಚ್ಚದಲ್ಲಿ ಭವ್ಯವಾಗಿ ನಿರ್ಮಿಸಿರುವ ಮಹಾಲಕ್ಷ್ಮೀ ಸಭಾ ಭವನವನ್ನು ಲೋಕಾರ್ಪಣೆ ಮಾಡಿದರು. ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಉಪಸ್ಥಿತರಿದ್ದರು.

ಗೋಕಾಕ ನಗರದ ಜನತೆಯ ಬಹು ದಿನಗಳ ಬೇಡಿಕೆಯಂತೆ ಇಂದು ಸಭಾ ಭವನವನ್ನು ಲೋಕಾರ್ಪಣೆ ಮಾಡಲಾಗಿದೆ. ಈ ಸಭಾ ಭವನವು ಮದುವೆ ಸೇರಿದಂತೆ ಇತರೇ ಎಲ್ಲ ಕಾರ್ಯಕ್ರಮಗಳಿಗೆ ಬಳಕೆಯಾಗಲಿದೆ. ಅತ್ಯಾಧುನಿಕವಾಗಿ ನಿರ್ಮಿಸಿದ್ದು ನಾಗರೀಕರಿಗೆ ಸಕಲ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗಿದೆ. ಇದು ಗೋಕಾಕ ಜನತೆಯ ಕನಸೂ ಕೂಡಾ ಆಗಿತ್ತು. ಸಾರ್ವಜನಿಕರ ಸಹಕಾರದೊಂದಿಗೆ ಈ ಸಭಾ ಭವನ ನಿರ್ಮಾಣವಾಗಿದ್ದು, ತಮ್ಮ ಸಹೋದರರು ಸಹ ಆರ್ಥಿಕವಾಗಿ ನೆರವು ಕಲ್ಪಿಸಿಕೊಟ್ಟಿದ್ದಾರೆಂದು ಅವರು ಹೇಳಿದರು.
ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಸ್ಥಳೀಯ ಶೂನ್ಯ ಸಂಪಾದನ ಮಠದ ಮುರುಘರಾಜೇಂದ್ರ ಮಹಾಸ್ವಾಮಿಗಳು ವಹಿಸಿದ್ದರು. ಜ್ಯೋತಿ ಪ್ರಜ್ವಲಿಸುವ ಮೂಲಕ ಧಾರ್ಮಿಕ ಕಾರ್ಯಕ್ರಮಗಳಿಗೆ ಚಾಲನೆ ನೀಡಿದರು.

ಸ್ಥಳೀಯ ಮುರುಘರಾಜೇಂದ್ರ ಮಹಾಸ್ವಾಮಿಗಳು ಮಹಾಲಕ್ಷ್ಮೀ ಸಭಾ ಭವನದ ಧಾರ್ಮಿಕ ಕಾರ್ಯಕ್ರಮಗಳಿಗೆ ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಿದರು.

 

ಕೆಎಂಎಫ್ ಅಧ್ಯಕ್ಷ ಹಾಗೂ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಹಾಗೂ ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಅವರು ಜಂಟಿಯಾಗಿ ಭೋಜನಾಲಯವನ್ನು ಉದ್ಘಾಟಿಸಿದರು.
ಶಾಸಕ ಬಾಲಚಂದ್ರ ಜಾರಕಿಹೊಳಿ ಈ ಸಂದರ್ಭದಲ್ಲಿ ಮಾತನಾಡಿ, ಕೋವಿಡ್ ಹಿನ್ನೆಲೆಯಲ್ಲಿ ಪ್ರತಿ ೫ ವರ್ಷಕ್ಕೊಮ್ಮೆ ೨೦೨೦ ರಲ್ಲಿ ನಡೆಯಬೇಕಾಗಿದ್ದ ಗ್ರಾಮದೇವತೆ ಜಾತ್ರೆಯನ್ನು ಮುಂದೂಡಲಾಗಿತ್ತು. ಈ ವರ್ಷವೂ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವುದರಿಂದ ಯುಗಾದಿಗೆ ಜಾತ್ರಾ ಕಮೀಟಿಯವರು ಸಭೆ ಸೇರಿ ಜಾತ್ರೆಯ ಬಗ್ಗೆ ನಿರ್ಣಯ ಕೈಗೊಳ್ಳಲಿದ್ದಾರೆ. ಅಚ್ಚುಕಟ್ಟಾಗಿ ಸುಂದರವಾಗಿ ನಿರ್ಮಾಣವಾಗಿರುವ ಮಹಾಲಕ್ಷಿö್ಮÃ ಸಭಾ ಭವನದ ಕಾಮಗಾರಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಇದಕ್ಕಾಗಿ ಶ್ರಮಿಸಿದ ಜಾತ್ರಾ ಕಮೀಟಿ ಸದಸ್ಯರಿಗೆ ಅಭಿನಂದನೆ ಸಲ್ಲಿಸಿದರು.

ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಮಹಾಲಕ್ಷಿö್ಮÃ ಸಭಾ ಭವನದ ವಸತಿ ಕೊಠಡಿಗಳನ್ನು ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ಮಹಾಲಕ್ಷಿö್ಮÃ ದೇವಸ್ಥಾನ ಜಾತ್ರಾ ಕಮೀಟಿ ಉಪಾಧ್ಯಕ್ಷ ಅಶೋಕ ಬಿ.ಪಾಟೀಲ, ಕಾರ್ಯದರ್ಶಿ ಪ್ರಭಾಕರ ಚವ್ಹಾಣ, ಸದಸ್ಯರಾದ ಶಿದ್ಲಿಂಗಪ್ಪ ದಳವಾಯಿ, ಬಸವಣ್ಣೆಪ್ಪ ಬನ್ನಿಶೆಟ್ಟಿ, ನಾಗರಾಜ ದೇಶಪಾಂಡೆ, ಅಶೋಕ ತುಕ್ಕಾರ, ಅಶೋಕ ಹೆಗ್ಗಣ್ಣವರ, ರಾಯಪ್ಪ ಭಂಡಾರಿ, ರಾಜು ಪವಾರ, ಅರ್ಜುನ ಪವಾರ, ಸುಬ್ಬಣ್ಣ ಸಂಕಪಾಳ, ಮಹ್ಮದಸುಲ್ತಾನ ಕೋತವಾಲ, ಚಂದ್ರು ಜೋಗೋಜಿ, ಅಡಿವೆಪ್ಪ ಕಿತ್ತೂರ, ಆನಂದ ಉಳ್ಳಾಗಡ್ಡಿ, ಬಾಗಪ್ಪ ಉಳ್ಳಾಗಡ್ಡಿ, ಬೀರಪ್ಪ ಉಳ್ಳಾಗಡ್ಡಿ, ಸಿದ್ದಪ್ಪ ಮುತ್ತೆಪ್ಪಗೋಳ, ಪರಸಪ್ಪ ಮಲ್ಲಾಡದವರ, ನಾಗಪ್ಪ ಉಳ್ಳಾಗಡ್ಡಿ, ಮಾರುತಿ ಬಾಗೋಜಿ, ರವಿ ಮಾಲದಿನ್ನಿ, ಲಕ್ಕಪ್ಪ ಪೂಜೇರಿ, ಶಿವಾನಂದ ಬನ್ನಿಶೆಟ್ಟಿ, ಮಲ್ಲು ವಾಲಿಕಾರ, ಲಕ್ಕಪ್ಪ ಕೊಡತಿ, ನಗರಸಭೆ ಅಧ್ಯಕ್ಷ ಜಯಾನಂದ ಹುಣಚ್ಯಾಳಿ, ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು.


Spread the love

About Yuva Bharatha

Check Also

ಅಕ್ಕಾ ಅಂದ್ರೆ ಅವರೇ ಅಂತ ಯಾಕೆ ತಿಳ್ಕೊತೀರಿ, ಪೆಗ್ ಅಂದ್ರೆ ಎನರ್ಜಿ ಡ್ರಿಂಕ್-ಮಾಜಿ ಶಾಸಕ ಸಂಜಯ ಪಾಟೀಲ.!

Spread the loveನಾನು ಭಾಷಣದಲ್ಲಿ ಹೆಬ್ಬಾಳಕರ ಹೆಸರನ್ನೆ ತಗೊಂಡಿಲ್ಲ. -ಮಾಜಿ ಶಾಸಕ ಸಂಜಯ ಪಾಟೀಲ.! ಯುವಭಾರತ ಸುದ್ದಿ ಬೆಳಗಾವಿ: ನಾನು …

Leave a Reply

Your email address will not be published. Required fields are marked *

two × two =